Featured

ಭಯೋತ್ಪಾದನಾ ಹೋರಾಟದಲ್ಲಿ ಕೇಂದ್ರ ಸರ್ಕಾರ ಯಾವುದೇ ರೀತಿಯ ನಿರ್ಧಾರ ಕೈಗೊಂಡರೆ ಅದಕ್ಕೆ ನಮ್ಮ ಸಂಪೂರ್ಣ ಬೆಂಬಲ : ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ

ನವದೆಹಲಿ,: ಭಯೋತ್ಪಾದನಾ ಹೋರಾಟದಲ್ಲಿ ಕೇಂದ್ರ ಸರ್ಕಾರ ಯಾವುದೇ ರೀತಿಯ ನಿರ್ಧಾರ ಕೈಗೊಂಡರೆ ಅದಕ್ಕೆ ಸಂಪೂರ್ಣ ಬೆಂಬಲ ನೀಡಲಾಗುವುದು. ಇದರಲ್ಲಿ ಯಾವುದೇ ರೀತಿಯ ರಾಜಕೀಯ ಚರ್ಚೆ  ಬೇಡ ಎಂದು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಹೇಳಿದ್ದಾರೆ.

ತಾಯ್ನಾಡಿಗಾಗಿ 40 ಯೋಧರು ಹುತಾತ್ಮರಾಗಿದ್ದಾರೆ. ಇಂತಹ ಪರಿಸ್ಥಿತಿಯಲ್ಲಿ ನಾವು ರಾಜಕೀಯ ಬೆರೆಸದೆ ಕೇಂದ್ರ ಸರ್ಕಾರ ತೆಗೆದುಕೊಳ್ಳುವ ನಿರ್ಧಾರಕ್ಕೆ ಬೆಂಬಲ ನೀಡಲಿದ್ದೇವೆ. ಕೆಲವು ದಿನಗಳವರೆಗೂ ಈ ವಿಷಯದ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ ಎಂದು ಅವರು ಸ್ಪಷ್ಟಪಡಿಸಿದರು.

ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್, ರಾಜ್ಯಸಭೆಯ ಪ್ರತಿಪಕ್ಷದ ನಾಯಕ ಗುಲಾಂ ನಬಿ ಆಜಾದ್ ಜೊತೆ ಜಂಟಿ ಪತ್ರಿಕಾಗೋಷ್ಠಿ ನಡೆಸಿದ ರಾಹುಲ್ ಗಾಂಧಿ, ಜಮ್ಮುಕಾಶ್ಮೀರದ ಪುಲ್ವಾಮ ಜಿಲ್ಲೆಯ ಆವಂತಿಪುರದಲ್ಲಿ ಸಿಆರ್‍ಪಿಎಫ್ ಯೋಧರ ವಾಹನದ ಮೇಲೆ ಉಗ್ರರು ನಡೆಸಿರುವ ದಾಳಿಯನ್ನು ತೀವ್ರವಾಗಿ ಖಂಡಿಸಿದರು.

ವೀರಯೋಧರು ಹುತಾತ್ಮರಾಗಿರುವುದಕ್ಕೆ ಕಂಬನಿ ಮಿಡಿದ ಅವರು, ಭಯೋತ್ಪಾದಕರಿಗೆ ತಕ್ಕ ಪಾಠ ಕಲಿಸಲೇಬೇಕು. ನಮ್ಮ ಯೋಧರ ಹೋರಾಟ ವ್ಯರ್ಥವಾಗಬಾರದು. ಕೇಂದ್ರ ಸರ್ಕಾರ ದೃಢ ನಿರ್ಧಾರ ತೆಗೆದುಕೊಳ್ಳುವಂತೆ ಮನವಿ ಮಾಡಿದರು.

ನಾನು ಈ ವಿಷಯದಲ್ಲಿ ರಾಜಕಾರಣ ಮಾಡುವುದಾಗಲಿ, ಇಲ್ಲವೇ ಬೇರೊಬ್ಬರನ್ನು ಟೀಕಿಸುವ ಹಂತಕ್ಕೆ ಇಳಿಯುವುದಿಲ್ಲ. ಈ ಸಮಯದಲ್ಲಿ ನಮಗೆ ದೇಶದ ಭದ್ರತೆ ಮುಖ್ಯ. ನಾವು ಪ್ರೀತಿ ಮತ್ತು ವಿಶ್ವಾಸದಿಂದ ದೇಶವನ್ನು ಕಟ್ಟಿದ್ದೇವೆ. ನಮಗೆ ಶಾಂತಿ ಮುಖ್ಯ ಹೊರತು ಅಶಾಂತಿಯನ್ನೂ ಎಂದೂ ಬಯಸುವುದಿಲ್ಲ ಎಂದರು.

ಭಯೋತ್ಪಾದನೆಯನ್ನು ಪ್ರತಿಯೊಬ್ಬರೂ ಖಂಡಿಸಬೇಕು. ಮನುಕುಲದ ಶಾಂತಿಗೆ ಇದೊಂದು ಪಿಡುಗಾಗಿ ಪರಿಣಮಿಸಿದೆ. ಬೇರು ಸಮೇತ ಇದನ್ನು ಕಿತ್ತು ಹಾಕಲೇಬೇಕು. ಘಟನೆಗೆ ಕಾರಣರಾದವರನ್ನು ಕಾನೂನಿನ ಪ್ರಕಾರವೇ ಶಿಕ್ಷಿಸಬೇಕು.

ವೀರ ಯೋಧರ ಕುಟುಂಬದವರ ಜೊತೆ ದೇಶವೇ ನಿಲ್ಲಲಿದೆ. ಕೇಂದ್ರ ಸರ್ಕಾರ ತೆಗೆದುಕೊಳ್ಳುವ ನಿರ್ಧಾರವನ್ನು ನಾವು ಬೆಂಬಲಿಸುತ್ತೇವೆ ಎಂದು ಹೇಳಿದರು.

Vishwa News 24

Recent Posts

ಮೃತ ಮಹಿಳೆಯರ ಬೆತ್ತಲೆ ಫೋಟೋ ತೆಗೆದು ವಿಕೃತಿ : ವರದಿ ಕೇಳಿದ ರಾಜ್ಯ ಮಹಿಳಾ ಆಯೋಗ – vishwanews24

ಮೃತ ಮಹಿಳೆಯರ ಬೆತ್ತಲೆ ಫೋಟೋ ತೆಗೆದು ವಿಕೃತಿ : ವರದಿ ಕೇಳಿದ ರಾಜ್ಯ ಮಹಿಳಾ ಆಯೋಗ ಬೆಂಗಳೂರು: ಬೀದರ್‌ನ ಬ್ರಿಮ್ಸ್ ಆಸ್ಪತ್ರೆಯಲ್ಲಿ…

8 hours ago

ಉಡುಪಿ: ಕೇಂದ್ರ ಸರಕಾರದ ಜನವಿರೋಧಿ ನೀತಿ ವಿರುದ್ಧ ಜಿಲ್ಲಾ ಕಾಂಗ್ರೆಸ್ ನಿಂದ ಬೃಹತ್ ಪ್ರತಿಭಟನೆ – vishwanews24

ಉಡುಪಿ: ಕೇಂದ್ರ ಸರಕಾರದ ಜನವಿರೋಧಿ ನೀತಿ ವಿರುದ್ಧ ಜಿಲ್ಲಾ ಕಾಂಗ್ರೆಸ್ ನಿಂದ ಬೃಹತ್ ಪ್ರತಿಭಟನೆ ಉಡುಪಿ: ಕೇಂದ್ರ ಸರಕಾರದ ಜನವಿರೋಧಿ…

9 hours ago

ಮಂಗಳೂರು: ಗಾಯಗೊಂಡ ತಾಯಿ, ಮಗುವನ್ನು ಆಸ್ಪತ್ರೆಗೆ ಸಾಗಿಸಿದ ಬಸ್ ಸಿಬ್ಬಂದಿ; ಮಾನವೀಯತೆಗೆ ಶ್ಲಾಘನೆ – vishwanews24

ಮಂಗಳೂರು: ಚಲಿಸುತ್ತಿದ್ದ ಬಸ್ಸಿನಿಂದ ಬಿದ್ದ ತಾಯಿ-ಮಗುವಿನ ರಕ್ಷಣೆಗೆ ಧಾವಿಸಿದ ಸಿಟಿ ಬಸ್ ಸಿಬ್ಬಂದಿ.. ಪ್ರಯಾಣಿಕರನ್ನು ಬಸ್ಸಿನಿಂದ ಇಳಿಸಿ ಗಾಯಗೊಂಡ ತಾಯಿ,…

9 hours ago

ಮಂಗಳೂರು – ಸೂರತ್ ವಿಶೇಷ ರೈಲು ಇನ್ನು ಮುಂದೆ ವಾರಕ್ಕೆ ಎರಡು ದಿನ ನಿರಂತರ ಸಂಚಾರ – vishwanews24

ಮಂಗಳೂರು- ಸೂರತ್ ವಿಶೇಷ ರೈಲು ಇನ್ನು ಮುಂದೆ ವಾರಕ್ಕೆ ಎರಡು ದಿನ ನಿರಂತರ ಸಂಚಾರ ಉಡುಪಿ: ಮಂಗಳೂರು- ಸೂರತ್ ನಡುವೆ…

10 hours ago

ಕೊಂಕಣ ರೈಲ್ವೇ: ಟಿಕೆಟ್ ತಪಾಸಣೆ ಕಾರ್ಯಾಚರಣೆ; 2025-26ರಲ್ಲಿ 27.68 ಕೋ.ರೂ. ದಂಡ ವಸೂಲಿ – vishwanews24

ಕೊಂಕಣ ರೈಲ್ವೇ: ಟಿಕೆಟ್ ತಪಾಸಣೆ ಕಾರ್ಯಾಚರಣೆ; 2025-26ರಲ್ಲಿ 27.68 ಕೋ.ರೂ. ದಂಡ ವಸೂಲಿ ಉಡುಪಿ: ಟಿಕೆಟ್ ಇಲ್ಲದೆ ಹಾಗೂ ಅನಧಿಕೃತವಾಗಿ…

11 hours ago

ಯುವಕ ನಾಪತ್ತೆ : ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು – vishwanews24

ಯುವಕ ನಾಪತ್ತೆ; ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಂಗಳೂರು: 23 ವರ್ಷದ ಯುವಕನೊಬ್ಬ ನಾಪತ್ತೆಯಾಗಿರುವ ಕುರಿತು ಕೊಣಾಜೆ ಪೊಲೀಸ್…

11 hours ago