Featured

ಭಯೋತ್ಪಾದನೆಗೆ ಬೆಂಬಲ ನೀಡುವ ರಾಷ್ಟ್ರಗಳು ತಮ್ಮ ಕೃತ್ಯಗಳಿಗೆ ಜವಾಬ್ದಾರಿಯುತವಾಗಿರಬೇಕು : ಪಾಕ್ ಗೆ ಪ್ರಧಾನಿ ಮೋದಿ -Vishwanews24

ಬಿಶ್ಕೇಕ್: ಚೀನಾದ ಮೂಲಕ ಪಾಕಿಸ್ತಾನಕ್ಕೆ ಸ್ಪಷ್ಟ ಸಂದೇಶ ರವಾನಿಸಿರುವ ಪ್ರಧಾನಿ ನರೇಂದ್ರ ಮೋದಿ, ಭಯೋತ್ಪಾದನೆಗೆ ಬೆಂಬಲ ನೀಡುವ ರಾಷ್ಟ್ರಗಳು ತಮ್ಮ ಕೃತ್ಯಗಳಿಗೆ ಜವಾಬ್ದಾರಿಯುತವಾಗಿರಬೇಕು ಎಂದು ಹೇಳುವಮೂಲಕ ಪಾಕಿಸ್ತಾನಕ್ಕೆ ಪರೋಕ್ಷ ತಿರುಗೇಟು ನಿಡಿದ್ದಾರೆ.

ಕಿರ್ಗಿಸ್ತಾನದ ಬಿಶ್ಕೆಕ್ ನಲ್ಲಿ ನಡೆಯುತ್ತಿರುವ ಶಾಂಘೈ ಸಹಕಾರ ಸಂಘಟನೆ ಶೃಂಗಸಭೆ (ಎಸ್ ಸಿಒ)ಯಲ್ಲಿ ಪಾಲ್ಗೊಂಡು ಮಾತನಾಡಿದ ಪ್ರಧಾನಿ ಮೋದಿ, ಭಾರತ ಎಸ್ ಸಿಒ ಶೃಂಗದ ಖಾಯಂ ಸದಸ್ಯತ್ವ ಪಡೆದು 12 ವರ್ಷಗಳಾಗುತ್ತಿವೆ. ಎಸ್ ಸಿಒದ ಪ್ರತಿಯೊಂದು ಕಾರ್ಯಚಟುವಟಿಕೆಯಲ್ಲೂ ನಾವು ಸಕಾರಾತ್ಮಕ ಕೊಡುಗೆ ನೀಡಿದ್ದೇವೆ. ಅಂತಾರಾಷ್ಟ್ರೀಯ ವೇದಿಕೆಗಳಲ್ಲಿ ಎಸ್ ಸಿಒ ಪಾತ್ರ ಮತ್ತು ವಿಶ್ವಾಸಾರ್ಹತೆಯನ್ನು ಎತ್ತಿ ತೋರಿಸುವ ಪ್ರಯತ್ನ ಮಾಡಿದ್ದೇವೆ ಎಂದು ಹೇಳಿದರು.

ಭಯೋತ್ಪಾದನೆಯನ್ನು ಪ್ರಾಯೋಜಿಸುತ್ತಿರುವ, ನೆರವು ನೀಡುವ ಮತ್ತು ಬೆಂಬಲಿಸುವ ರಾಷ್ಟ್ರಗಳಿಗೆ ಜವಾಬ್ದಾರರಾಗಿರಬೇಕು ಎಂದು ಹೇಳಿದರು. ಭಾರತ ಭಯೋತ್ಪಾದನೆ ಮುಕ್ತ ಸಮಾಜಕ್ಕಾಗಿ ನಿಂತಿದೆ. ಭಯೋತ್ಪಾದನೆ ವಿರುದ್ಧದ ಹೋರಾಟದಲ್ಲಿ ಸಹಕಾರವನ್ನು ಬಲಪಡಿಸಲು ಜಾಗತಿಕ ಒಗ್ಗಟ್ಟು ಅಗತ್ಯ ಎಂದರು.

ಚೀನಾದ ಪ್ರಧಾನಿ ಕ್ಸಿ ಜಿನ್‌ ಪಿಂಗ್ ಜೊತೆಗಿನ ನಿಯೋಗ ಮಟ್ಟದ ಮಾತುಕತೆಯ ಸಮಯದಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು, “ಶಾಂತಿಯುತ ಮಾತುಕತೆಗಳಿಗೆ ನಾವು ಬದ್ಧರಾಗಿದ್ದೇವೆ” ಮತ್ತು ಈ ಪ್ರಯತ್ನದಲ್ಲಿ ಭಾರತ ಮುಂದಡಿ ಇಟ್ಟಿದೆ, ಆದರೆ “ಈ ಪ್ರಯತ್ನಗಳು ಪಾಕಿಸ್ತಾನದಿಂದ ಹಳಿತಪ್ಪಿದೆ. ಮೊದಲು ಪಾಕಿಸ್ತಾನ ಭಯೋತ್ಪಾದನಾ ಮುಕ್ತ ವಾತಾವರಣ ಸೃಷ್ಟಿಸಬೇಕು ಎಂದು ತಿಳಿಸಿದರು.

ಶೃಂಗಸಭೆಯಲ್ಲಿ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್, ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಸೇರಿದಂತೆ ಎಸ್‌ಸಿಒ ನಾಯಕರೊಂದಿಗೆ ಔಪಚಾರಿಕವಾಗಿ ಭಾವಚಿತ್ರ ತೆಗೆದುಕೊಳ್ಳುವ ಕಾರ್ಯಕ್ರಮದಲ್ಲಿ ಮೋದಿ ಪಾಲ್ಗೊಂಡರು. ಕಿರ್ಗಿಸ್ತಾನದ ಗಣರಾಜ್ಯ ಅಧ್ಯಕ್ಷ ಜೀನ್‌ ಬೆಕೋವ್ ಅವರು ಪ್ರಸಕ್ತ ಶೃಂಗಸಭೆಯ ಅಧ್ಯಕ್ಷತೆ ವಹಿಸಿದ್ದಾರೆ.

Vishwa News 24

Recent Posts

ಈದ್ ಮಿಲಾದ್: ದ.ಕ/ಉಡುಪಿ ಜಿಲ್ಲೆಗೆ ಆ.25ರಂದು ಸಾರ್ವತ್ರಿಕ ರಜೆ ಘೋಷಣೆ – vishwanews24

ಈದ್ ಮಿಲಾದ್: ದ.ಕ/ಉಡುಪಿ ಜಿಲ್ಲೆಗೆ ಆ.25ರಂದು ಸಾರ್ವತ್ರಿಕ ರಜೆ ಘೋಷಣೆ ಮಂಗಳೂರು: ದ.ಕ.ಮತ್ತು ಉಡುಪಿ ಜಿಲ್ಲೆಯಲ್ಲಿ ಆ. 25ರ ಮಂಗಳವಾರ…

16 hours ago

ಬದುಕಿದ್ದಾಗ ಭಿಕ್ಷುಕಿಯಾಗಿದ್ದ ವೃದ್ಧೆ ಸತ್ತ ಮೇಲೆ ಲಕ್ಷಾಧಿಪತಿ ..- vishwanews24

ಮೃತಪಟ್ಟ ಭಿಕ್ಷುಕಿಯ ಮನೆಯಲ್ಲಿ 30 ಲಕ್ಷ ರೂ. ನಗದು ಪತ್ತೆ ಮಂಡ್ಯ: ಭಿಕ್ಷಾಟನೆ ಮಾಡಿ ಜೀವನ ಸಾಗಿಸುತ್ತಿದ್ದ ವೃದ್ಧೆಯೊಬ್ಬರು ಮೃತಪಟ್ಟಿದ್ದು,…

19 hours ago

ಬ್ರಹ್ಮಾವರ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಹತ್ಯೆ; ಆರೋಪಿ ಮಗನ ಬಂಧನ – vishwanews24

ಬ್ರಹ್ಮಾವರ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಹತ್ಯೆ; ಆರೋಪಿ ಮಗನ ಬಂಧನ ಉಡುಪಿ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಕೊಲೆ…

19 hours ago

ಕಾರ್ಕಳ ಪುರಸಭೆಗೆ ಲೋಕಾಯುಕ್ತ ಅಧಿಕಾರಿಗಳ ದಿಢೀರ್‌ ಭೇಟಿ.. ಕಡತಗಳ ಪರಿಶೀಲನೆ – vishwanews24

ಕಾರ್ಕಳ ಪುರಸಭೆಗೆ ಲೋಕಾಯುಕ್ತ ಅಧಿಕಾರಿಗಳ ದಿಢೀರ್‌ ಭೇಟಿ.. ಕಡತಗಳ ಪರಿಶೀಲನೆ ಕಾರ್ಕಳ: ಸಾರ್ವಜನಿಕರ ಅರ್ಜಿ ಹಾಗೂ ಕಡತಗಳ ವಿಲೇವಾರಿ ಬಗ್ಗೆ…

20 hours ago

ಉಡುಪಿ : 25 ಗಂಟೆಗಳ ಕಾಲ ಗಾಯನ ; ವಿದುಷಿ ಸಂಗೀತಾ ಬಾಲಚಂದ್ರ ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್‌ ದಾಖಲೆ – vishwanews24

25 ಗಂಟೆಗಳ ಗಾಯನದಿಂದ ವಿದುಷಿ ಸಂಗೀತಾ ಬಾಲಚಂದ್ರ ಗೋಲ್ಡನ್‌ ಬುಕ್‌ಆಫ್‌ ವರ್ಲ್ಡ್ ರೆಕಾರ್ಡ್‌ ದಾಖಲೆ 'ಗೀತ ಗಂಗೋತ್ರಿʼ ಬಿರುದು ನೀಡಿ…

20 hours ago

ಕಾಪು ಪುರಸಭೆಗೆ ಲೋಕಾಯುಕ್ತ ದಾಳಿ – vishwanews24

ಕಾಪು ಪುರಸಭೆಗೆ ಲೋಕಾಯುಕ್ತ ದಾಳಿ [gallery columns="1" size="large" ids="117027,117028,117029,117030,117031"]

20 hours ago