Featured

ಭಯೋತ್ಪಾದನೆಯನ್ನು ಎದುರಿಸಲು ಭಾರತವನ್ನು ಹಿಂದೂ ರಾಷ್ಟ್ರವೆಂದು ಘೋಷಿಸಬೇಕು : ಕೇರಳ ಶಾಸಕ ಪಿ ಸಿ ಜಾರ್ಜ್ -Vishwanews24

ಭಯೋತ್ಪಾದನೆಯನ್ನು ಎದುರಿಸಲು ಭಾರತವನ್ನು ಹಿಂದೂ ರಾಷ್ಟ್ರವೆಂದು ಘೋಷಿಸಬೇಕು : ಕೇರಳ ಶಾಸಕ ಪಿ ಸಿ ಜಾರ್ಜ್ -Vishwanews24

ತಿರುವನಂತಪುರ : ”ಭಾರತವನ್ನು ಹಿಂದೂ ರಾಷ್ಟ್ರವೆಂದು ಘೋಷಿಸಬೇಕು” ಎಂದು ಕೇರಳದ ಪೂಂಜಾರ್ ಕ್ಷೇತ್ರವನ್ನು ಪ್ರತಿನಿಧಿಸುವ ಜನಪಕ್ಷನ್ (ಜಾತ್ಯತೀತ) ಪಕ್ಷದ ಶಾಸಕ ಪಿ ಸಿ ಜಾರ್ಜ್ ಅವರು  ಹೇಳಿಕೆ ನೀಡಿದ್ದಾರೆ ಎಂದು ವರದಿಯಾಗಿದೆ.

ಇಡುಕ್ಕಿ ಜಿಲ್ಲೆಯ ತೊಡುಪುಳದಲ್ಲಿ ಮಾನವ ಸಂಪನ್ಮೂಲ ಅಭಿವೃದ್ಧಿ ಸೊಸೈಟಿ ಆಯೋಜಿಸಿದ್ದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ”ಭಯೋತ್ಪಾದನೆಯನ್ನು ಎದುರಿಸಲು ಭಾರತವನ್ನು ಹಿಂದೂ ರಾಷ್ಟ್ರವೆಂದು ಘೋಷಿಸಬೇಕು” ಎಂದು ಹೇಳಿದರು.

ರಾಜ್ಯದಲ್ಲಿ ಸದ್ಯಕ್ಕೆ ಲಾಕ್‌ಡೌನ್ ಮಾಡುವ ಪ್ರಶ್ನೆ ಇಲ್ಲವೇ ಇಲ್ಲ : BSY -Vishwanews24

”2030 ರ ವೇಳೆಗೆ ಭಾರತವನ್ನು ಇಸ್ಲಾಮಿಕ್ ರಾಷ್ಟ್ರವನ್ನಾಗಿ ಮಾಡುವ ಸಲುವಾಗಿ ಕೇರಳದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್) ಮತ್ತು ಲೆಫ್ಟ್‌ ಡೆಮಾಕ್ರಟಿಕ್ ಫ್ರಂಟ್ (ಎಲ್‌ಡಿಎಫ್) ಭಯೋತ್ಪಾದಕರಿಗೆ ಬೆಂಬಲ ನೀಡುತ್ತಿವೆ” ಎಂದು ಅವರು ಆರೋಪಿಸಿದರು.

”ಪ್ರಧಾನಮಂತ್ರಿ ನರೇಂದ್ರ ಮೋದಿಯವರು 2016 ರಲ್ಲಿ ನೋಟ್‌ ಬ್ಯಾನ್‌ ಮಾಡುವ ಮೂಲಕ ಹೊರ ದೇಶದವರ ದೇಣಿಗೆ ಮೂಲಕ ಭಾರತವನ್ನು ಇಸ್ಲಾಮಿಕ್ ರಾಷ್ಟ್ರವನ್ನಾಗಿ ಮಾಡುವ ಯೋಜನೆಯನ್ನು ಇನ್ನಷ್ಟು ವಿಳಂಬಗೊಳಿಸಿದರು” ಎಂದು ಜಾರ್ಜ್ ಹೇಳಿದ್ದಾರೆ.

”ಇನ್ನು ಮುಸ್ಲಿಮರು ಫ್ರಾನ್ಸ್‌ನಂತಹ ಕ್ರೈಸ್ತ ರಾಷ್ಟ್ರಗಳನ್ನು ಅತಿಕ್ರಮಿಸುತ್ತಿದ್ದಾರೆ. ಆ ರಾಷ್ಟ್ರವನ್ನು ಇಸ್ಲಾಮಿಕ್ ರಾಷ್ಟ್ರಗಳಾಗಿ ಪರಿವರ್ತಿಸುತ್ತಿದ್ದಾರೆ” ಎಂದು ಆರೋಪಿಸಿದರು.

ಲವ್ ಜಿಹಾದ್ ಕುರಿತು ಮಾತನಾಡಿದ ಅವರು, ”ಲವ್ ಜಿಹಾದ್ ನಿಜ, ಕೇರಳದಲ್ಲಿ ಇದು ಅಸ್ತಿತ್ವದಲ್ಲಿದೆ. ಇಲ್ಲಿ ಮತಾಂತರ ಮಾಡುವ ಸಲುವಾಗಿಯೇ ಮೋಸದ ವಿವಾಹವಾಗುವ ಪ್ರಕರಣಗಳು ಹಲವು ನಡೆದಿದೆ” ಎಂದು ದೂರಿದರು.

ಮಂಗಳೂರು: ಮುರಾರಿ ಸಮುದಾಯದ ಜನರನ್ನು ಹಿಂದುಳಿದ ವರ್ಗಕ್ಕೆ ಸೇರಿಸಬೇಕು : ಜಯಪ್ರಕಾಶ್ ಹೆಗ್ಡೆ -Vishwanews24

 

Vishwa News 24

Recent Posts

ಅ.15ರಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ದ.ಕ. ಮತ್ತು ಉಡುಪಿ ಪ್ರವಾಸ -vishwanews24

ಅ.15ರಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ದ.ಕ. ಮತ್ತು ಉಡುಪಿ ಪ್ರವಾಸ ಮಂಗಳೂರು ಉಚ್ಚಿಲ ದಸರಾ ನವರಾತ್ರಿ ಮಹೋತ್ಸವ ದಲ್ಲಿ ಭಾಗಿ…

7 hours ago

ಉಡುಪಿ ಉಚ್ಚಿಲ ದಸರಾ -2026 ರಾಜ್ಯ ಮಟ್ಟದ ನೃತ್ಯ ಸ್ಪರ್ಧೆ ; ಟ್ರೋಫಿ ಗೆದ್ದುಕೊಂಡ ಉಡುಪಿಯ ಎಕ್ಸ್‌ಟ್ರಿಮ್ ಡ್ಯಾನ್ಸ್ ಅಕಾಡೆಮಿ – vishwanews24

ಉಡುಪಿ ಉಚ್ಚಿಲ ದಸರಾ -2026 ರಾಜ್ಯ ಮಟ್ಟದ ನೃತ್ಯ ಸ್ಪರ್ಧೆ ; ಟ್ರೋಫಿ ಗೆದ್ದುಕೊಂಡ ಉಡುಪಿಯ ಎಕ್ಸ್‌ಟ್ರಿಮ್ ಡ್ಯಾನ್ಸ್ ಅಕಾಡೆಮಿ…

16 hours ago

ಉಡುಪಿ: ‘ಭಾರತ್ ಮಾತಾ ಕೀ ಜೈ’ ಘೋಷಣೆ ಕೂಗಿದ ವಿದ್ಯಾರ್ಥಿಗಳ ಮೇಲೆ ಹಲ್ಲೆ ಆರೋಪ; ಪೊಲೀಸ್ ಅಧಿಕಾರಿಯ ವಿರುದ್ಧ ಕಠಿಣ ಕ್ರಮಕ್ಕೆ ಶಾಸಕ ಯಶ್‌ಪಾಲ್ ಸುವರ್ಣ ಆಗ್ರಹ – vishwanews24

ಉಡುಪಿ: ‘ಭಾರತ್ ಮಾತಾ ಕೀ ಜೈ’ ಘೋಷಣೆ ಕೂಗಿದ ವಿದ್ಯಾರ್ಥಿಗಳ ಮೇಲೆ ಹಲ್ಲೆ ಆರೋಪ; ಪೊಲೀಸ್ ಅಧಿಕಾರಿಯ ವಿರುದ್ಧ ಕಠಿಣ…

16 hours ago

ದಸರಾ ರಜೆ ವೇಳೆ ಪರೀಕ್ಷೆ ವಿವಾದ: ಅ.19 ಮತ್ತು 22ರ ಪರೀಕ್ಷೆ ಮುಂದೂಡಿದ ಸೈಂಟ್ ಆಗ್ನೆಸ್ ಕಾಲೇಜು – vishwanews24

ದಸರಾ ರಜೆ ವೇಳೆ ಪರೀಕ್ಷೆ ವಿವಾದ: ಅ.19 ಮತ್ತು 22ರ ಪರೀಕ್ಷೆ ಮುಂದೂಡಿದ ಸೈಂಟ್ ಆಗ್ನೆಸ್ ಕಾಲೇಜು ಮಂಗಳೂರು: ದಸರಾ…

16 hours ago

`ಬ್ರೇಕಿಂಗ್ ಬ್ಯಾಡ್’ ಖ್ಯಾತಿಯ ಹಾಲಿವುಡ್ ನಟ ಆರ್‌ಜೆ ಮಿಟ್ಟೆ ನಿಧನ – vishwanews24

`ಬ್ರೇಕಿಂಗ್ ಬ್ಯಾಡ್' ಖ್ಯಾತಿಯ ಹಾಲಿವುಡ್ ನಟ ಆರ್‌ಜೆ ಮಿಟ್ಟೆ ನಿಧನ ಅಮೆರಿಕದ ಜನಪ್ರಿಯ ಟಿವಿ ಸರಣಿ `ಬ್ರೇಕಿಂಗ್ ಬ್ಯಾಡ್’ನಲ್ಲಿ ವಾಲ್ಟರ್…

16 hours ago

ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಅಧಿಕಾರಿಗಳ ಸಮಿತಿ ರಚನೆ: ಸಚಿವ ಯು.ಟಿ. ಖಾದರ್ – vishwanews24

ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಅಧಿಕಾರಿಗಳ ಸಮಿತಿ ರಚನೆ: ಸಚಿವ ಯು.ಟಿ. ಖಾದರ್ ಮಂಗಳೂರು: ಮಂಗಳೂರಿನಲ್ಲಿ ಹೈಕೋರ್ಟ್‌ ಪೀಠ ಸ್ಥಾಪನೆ…

2 days ago