ಭಯೋತ್ಪಾದನೆಯೇ ಮುಸ್ಲಿಮರ ಸಂಸ್ಕೃತಿ , ಅವರು ಮಸೀದಿಗಳಲ್ಲಿ ಪ್ರಾರ್ಥನೆ ಸಲ್ಲಿಸುವ ಬದಲು ಶಸ್ತ್ರಾಸ್ತ್ರಗಳನ್ನು ಸಂಗ್ರಹಿಸಿಟ್ಟುಕೊಳ್ಳುತ್ತಾರೆ : ಎಂ.ಪಿ. ರೇಣುಕಾಚಾರ್ಯ -Vishwanews24

ದಾವಣಗೆರೆ : ಮುಸ್ಲಿಮರು ಮಸೀದಿಗಳಲ್ಲಿ ಪ್ರಾರ್ಥನೆ ಸಲ್ಲಿಸುವ ಬದಲು ಶಸ್ತ್ರಾಸ್ತ್ರಗಳನ್ನು ಸಂಗ್ರಹಿಸಿಟ್ಟುಕೊಳ್ಳುತ್ತಾರೆ. ಭಯೋತ್ಪಾದನೆಯೇ ಮುಸ್ಲಿಮರ ಸಂಸ್ಕೃತಿ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ರಾಜಕೀಯ ಕಾರ್ಯದರ್ಶಿ ಎಂ.ಪಿ. ರೇಣುಕಾಚಾರ್ಯ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ಪೌರತ್ವ ತಿದ್ದುಪಡಿ ಕಾಯ್ದೆಯ ಪರವಾಗಿ ಮಾತನಾಡುವ ಭರದಲ್ಲಿ ರೇಣುಕಾಚಾರ್ಯ ಸಾರ್ವಜನಿಕ ಸಭೆಯಲ್ಲಿ ಮುಸ್ಲಿಮರ ವಿರುದ್ಧ ಹೇಳಿಕೆ ನೀಡಿ ವಿವಾದವನ್ನು ಮೈಮೇಲೆ ಎಳೆದುಕೊಂಡಿದ್ದಾರೆ. ನನ್ನ ಕ್ಷೇತ್ರದಲ್ಲಿ ಮುಸ್ಲಿಮರ ಕೇರಿಗೆ ಬಂದಿರುವ ಹಣವನ್ನು ಹಿಂದು ಕೇರಿಗೆ ನೀಡುತ್ತೇನೆ. ಮುಸ್ಲಿಮರ ಸ್ಥಾನವೇನೆಂಬುದನ್ನು ಅವರಿಗೆ ತೋರಿಸುತ್ತೇನೆ. ದೇಶದ್ರೋಹಿಗಳಿಗೆ ರಾಜಕೀಯ ಎಂದರೆ ಏನೆಂದು ಅರ್ಥ ಮಾಡಿಸುತ್ತೇನೆ ಎಂದು ಕೂಡ ಹೇಳಿರುವ ರೇಣುಕಾಚಾರ್ಯ ವಿರುದ್ಧ ಆಕ್ರೋಶ ಕೇಳಿಬರುತ್ತಿದೆ.

ಮುಸ್ಲಿಂ ಸಮುದಾಯದ ಕೆಲವು ದೇಶದ್ರೋಹಿಗಳು ಮಸೀದಿಗಳಲ್ಲಿ ಕುಳಿತು ಫತ್ವಾ ಹೊರಡಿಸುತ್ತಾರೆ. ನಮ್ಮ ಪವಿತ್ರವಾದ ದೇವಸ್ಥಾನಗಳಲ್ಲಿ ತೀರ್ಥ, ಪ್ರಸಾದವನ್ನು ನೀಡುತ್ತೇವೆ. ಇದು ಭಾರತದ ಸಂಸ್ಕೃತಿ. ಮಾರಕಾಸ್ತ್ರಗಳನ್ನು ಸಂಗ್ರಹ ಮಾಡುವುದು ಮುಸ್ಲಿಮರ ಸಂಸ್ಕೃತಿ. ಅಂಥವರಿಗೆ ನಾವು ಕನಿಕರ ತೋರಬೇಕಾ? ಅಂತಹ ದೇಶದ್ರೋಹಿಗಳನ್ನು ಮಟ್ಟ ಹಾಕಬೇಕು ಎಂದು ರೇಣುಕಾಚಾರ್ಯ ಹೇಳಿದ್ದಾರೆ.

ಕೆಲವು ದಿನಗಳ ಹಿಂದೆ ಬಿಜೆಪಿ ಶಾಸಕ ಸೋಮಶೇಖರ ರೆಡ್ಡಿ ಕೂಡ ಇದೇ ರೀತಿ ಮುಸ್ಲಿಮರ ವಿರುದ್ಧ ವಾಗ್ದಾಳಿ ನಡೆಸಿದ್ದರು. ನಾವು ಶೇ. 80ರಷ್ಟು ಜನರಿದ್ದೇವೆ. ನೀವು ಕೇವಲ ಶೇ. 17ರಷ್ಟಿದ್ದೀರಿ. ಹಿಂದೂಗಳು ಖಡ್ಗ ಹಿಡ್ಕೊಂಡು ಬಂದರೆ ಕಷ್ಟವಾಗುತ್ತದೆ. ನಾವು ಉಫ್​ ಎಂದು ಊದಿದರೆ ನೀವೆಲ್ಲ ಹಾರಿ ಹೋಗುತ್ತೀರ. ನೀವು ನಮ್ಮ ದೇಶದಲ್ಲಿ ಇರಬೇಕಾದರೆ ನಮ್ಮ ಪದ್ಧತಿ ಪ್ರಕಾರ ಇರಬೇಕು. ನಮ್ಮ ಸಮಾಧಾನವನ್ನು ಪರೀಕ್ಷೆ ಮಾಡಿದರೆ ಅದಕ್ಕೆ ತಕ್ಕ ಪಾಠ ಕಲಿಸುತ್ತೇವೆ ಎಂದು ಎಚ್ಚರಿಕೆ ನೀಡಿದ್ದರು.

ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ದ ಹೋರಾಟ ಮಾಡಿದ ಎಲ್ಲರನ್ನೂ ಶೂಟ್ ಮಾಡಿದ್ದರೆ ಅನುಕೂಲ ಆಗಿರುತ್ತಿತ್ತು. ದೇಶದ ಜನಸಂಖ್ಯೆಯಾದರೂ ಕಡಿಮೆಯಾಗುತ್ತಿತ್ತು. ನೀವು ಮುಸ್ಲಿಮರು 12 ಜನಕ್ಕೆ ಜನ್ಮ ನೀಡಿದರೆ ನಾವು 50 ಜನಕ್ಕೆ ಜನ್ಮ ಕೊಡುತ್ತೇವೆ. ಮೋದಿ ಮುಸ್ಲಿಮರನ್ನು ದೇಶದಿಂದ ಓಡಿಸುತ್ತಾರೆ ಎಂದು ಎಲ್ಲರೂ ಭಯಗೊಂಡಿದ್ದಾರೆ. ಅದೇ ಭಯದಿಂದ ಮುಸ್ಲಿಮರೆಲ್ಲರೂ ದೇಶ ಬಿಟ್ಟು ಓಡಿಹೋದರೆ ನಾವು ಶಾಂತಿಯಿಂದ ಬದುಕಬಹುದು ಎನ್ನುವ ಮೂಲಕ ಸೋಮಶೇಖರ ರೆಡ್ಡಿ ಅನೇಕರ ಕೆಂಗಣ್ಣಿಗೆ ಗುರಿಯಾಗಿದ್ದರು.

Vishwa News 24

Recent Posts

ಎಸ್‌ಟಿಪಿಯನ್ನು ಮೂಳೂರಿನಿಂದ ಬೆಳಪು ಪ್ರದೇಶಕ್ಕೆ ಸ್ಥಳಾಂತರ ಮಾಡಿದರೆ ಕಾಪು ಪುರಸಭೆಗೆ ಸಂಪೂರ್ಣ ಸ್ವಾಗತ : ದೇವಿಪ್ರಸಾದ್ ಶೆಟ್ಟಿ – vishwanews24

ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…

2 days ago

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ – vishwanews24

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…

2 days ago

ಬಿಜೆಪಿ ನಡೆಸಿರುವ ಅಪವಿತ್ರ ಮೈತ್ರಿ ಇತಿಹಾಸವನ್ನು ದೇಶ ಮರೆತಿಲ್ಲ : ಬಿ.ಕೆ.ಹರಿಪ್ರಸಾದ್ – vishwanews24

ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…

2 days ago

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ – vishwanews24

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್‌ನ ಅಧ್ಯಕ್ಷ,…

2 days ago

ವಿವಾಹಿತ ಮಹಿಳೆ  ಜತೆ ಲಿವ್ ಇನ್ ರಿಲೇಶನ್‌ ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  – vishwanews24

ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  ಬೆಂಗಳೂರು: ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ನೇಣುಬಿಗಿದ…

2 days ago

ಬಿಜೆಪಿ ನಾಯಕ ಸುವೇಂದು ಅಧಿಕಾರಿ ಬಂಗಾಳದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ – vishwanews24

ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…

2 days ago