ನವದೆಹಲಿ: ಭಯೋತ್ಪಾದನೆ ಹಾಗೂ ತೀವ್ರಗಾಮಿತನ ಸರ್ವವ್ಯಾಪಿಯಾಗಿದ್ದು, ಇವುಗಳನ್ನು ಎದುರಿಸಲು ಭಾರತ ಹಾಗೂ ನೆರೆ ದೇಶಗಳಿಗೆ ಎಲ್ಲ ರೀತಿಯ ಸಹಕಾರ ನೀಡುವುದಾಗಿ ಸೌದಿ ಅರೇಬಿಯಾದ ರಾಜಕುಮಾರ ಮೊಹಮ್ಮದ್ ಬಿನ್ ಸಲ್ಮಾನ್ ಭರವಸೆ ನೀಡಿದ್ದಾರೆ.
ಪಾಕಿಸ್ತಾನ ಪ್ರವಾಸ ಮುಗಿಸಿ ಮಂಗಳವಾರ ರಾತ್ರಿ ಭಾರತಕ್ಕೆ ಆಗಮಿಸಿದ ಮೊಹಮ್ಮದ್ ಬಿನ್ ಸಲ್ಮಾನ್ ಬುಧವಾರ ಮೋದಿ ಜತೆ ವಿಸ್ತೃತ ಮಾತುಕತೆ ನಡೆಸಿದರು. ವ್ಯಾಪಾರ ಹಾಗೂ ಹೂಡಿಕೆ ವಲಯಗಳಲ್ಲಿ ಸಹಕಾರ ವೃದ್ಧಿಸುವುದಕ್ಕೆ ಸಂಬಂಧಿಸಿದಂತೆ 5 ಒಪ್ಪಂದಗಳಿಗೆ ಇದೇ ವೇಳೆ ಎರಡೂ ದೇಶಗಳು ಸಹಿ ಹಾಕಿದವು.
ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮೋದಿ, ಸೌದಿ ಅರೇಬಿಯಾದೊಂದಿಗೆ ದ್ವಿಪಕ್ಷೀಯ ಸಂಬಂಧವನ್ನು ಗಟ್ಟಿಗೊಳಿಸುವ ಸಂಬಂಧ ಮಾತುಕತೆ ನಡೆಸಲಾಯಿತು. ರಕ್ಷಣಾ ವಲಯದಲ್ಲಿ ಪರಸ್ಪರ ಸಹಕಾರಕ್ಕೆ ಒಪ್ಪಿಗೆ ಸೂಚಿಸಲಾಗಿದೆ. ಸೌದಿ ಅರೇಬಿಯಾ ಮತ್ತು ಭಾರತದ ನಡುವಿನ ಸಂಬಂಧ ಸಾಕಷ್ಟು ಗಟ್ಟಿಗೊಂಡಿದೆ. ಭಾರತದ ಮೂಲಸೌಕರ್ಯ ವಲಯದಲ್ಲಿ ಸೌದಿ ಅರೇಬಿಯಾ ಹೂಡಿಕೆ ಮಾಡಲು ಒಪ್ಪಿಗೆ ಸೂಚಿಸಿರುವುದನ್ನು ನಾನು ಸ್ವಾಗತಿಸುತ್ತೇನೆ ಎಂದು ತಿಳಿಸಿದರು.
ಮಾತುಕತೆ ಬಳಿಕ ಮಾಧ್ಯಮ ಹೇಳಿಕೆಯೊಂದನ್ನು ಸೌದಿ ರಾಜಕುಮಾರ ಬಿಡುಗಡೆ ಮಾಡಿದ್ದಾರೆ. ಭಯೋತ್ಪಾದನೆ ಹಾಗೂ ತೀವ್ರಗಾಮಿತನಕ್ಕೆ ಸಂಬಂಧಿಸಿದಂತೆ ಭಾರತಕ್ಕೆ ಎಲ್ಲ ಸಹಕಾರ ನೀಡುತ್ತೇವೆ. ಅದು ಗುಪ್ತಚರ ಮಾಹಿತಿ ವಿನಿಮಯ ಕೂಡ ಆಗಿರಬಹುದು. ಆದರೆ ಭಾರತವೊಂದರ ಜತೆಗೇ ಅಲ್ಲ, ನೆರೆ ದೇಶಗಳಿಗೂ ಸಹಾಯ ಮಾಡುತ್ತೇವೆ ಎಂದು ಹೇಳಿದರು.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…