ನವದೆಹಲಿ: ಭಯೋತ್ಪಾದನೆ ನಿಗ್ರಹಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುತ್ತಿದ್ದಾರೆ ಎಂಬ ವಿಶ್ಲೇಷಣೆಗಳ ಬೆನ್ನಲ್ಲೇ ಕಾಂಗ್ರೆಸ್ ನಾಯಕಿ ಹೇಳಿ ಇದೀಗ ಸದ್ದು ಮಾಡಿದೆ.
ಪಾಕಿಸ್ತಾನ ಮತ್ತು ಭಯೋತ್ಪಾದನೆ ವಿರುದ್ಧ ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅವರು ಕಟುವಾದ ನಿಲುವು ತೆಗೆದುಕೊಂಡಿರಲಿಲ್ಲ ಎಂಬುದನ್ನು ದೆಹಲಿ ಮಾಜಿ ಮುಖ್ಯಮಂತ್ರಿ ಹಾಗೂ ದೆಹಲಿ ಕಾಂಗ್ರೆಸ್ ಘಟಕದ ಅಧ್ಯಕ್ಷೆ ಶೀಲಾ ದೀಕ್ಷಿತ್ ಅವರು ಒಪ್ಪಿಕೊಂಡಿದ್ದಾರೆ.
ಸಿಎನ್‌ಎನ್-ನ್ಯೂಸ್-18 ಸಂದರ್ಶನದಲ್ಲಿ ಮಾತನಾಡಿದ ಶೀಲಾ ದೀಕ್ಷಿತ್ ಅವರು, ‘ಪಾಕಿಸ್ತಾನ ಮತ್ತು ಭಯೋತ್ಪಾದನೆ ವಿರುದ್ಧ ಪ್ರಧಾನಿ ನರೇಂದ್ರ ಮೋದಿ ಅವರಂತೆ ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅವರು ಕಠಿಣ ನಿಲುವು ತಾಳಿರಲಿಲ್ಲ,’ ಎಂದರು. ಆದರೆ, ಮೋದಿ ಅವರು ರಾಜಕೀಯ ಲಾಭಕ್ಕಾಗಿ ಇದನ್ನೆಲ್ಲ ಮಾಡಿದ್ದಾರೆ ಎಂದು ಇದೇ ವೇಳೆ ಅವರು ಟೀಕಿಸಿದರು.
“ಇಡೀ ದೇಶಕ್ಕೂ ಗೊತ್ತಿರುವ ಸತ್ಯವನ್ನು ಕಾಂಗ್ರೆಸ್ ಪಕ್ಷ ಎಂದಿಗೂ ಒಪ್ಪಿಕೊಳ್ಳದಿದ್ದರೂ, ಅದನ್ನು ಪುನರುಚ್ಚರಿಸಿದ ಶೀಲಾ ದೀಕ್ಷಿತ್ ಅವರಿಗೆ ನನ್ನ ಧನ್ಯವಾದಗಳು” ಎಂದು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಟ್ವೀಟ್ ಮಾಡಿದ್ದಾರೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…