ನವದೆಹಲಿ: ಶ್ರೀಲಂಕಾದಲ್ಲಿ ಭದ್ರತಾ ದೃಷ್ಟಿಯಿಂದ ಬುರ್ಖಾ ನಿಷೇಧ ಮಾಡಿದ ಬೆನ್ನಲ್ಲೇ, ಭಾರತದಲ್ಲೂ ಬುರ್ಖಾ ನಿಷೇಧ ಮಾಡಬೇಕು ಎಂದು ಶಿವಸೇನೆ ಒತ್ತಾಯಿಸಿದೆ. ಇದಕ್ಕೆ ಪ್ರತಿಕ್ರಿಯಿಸಿದ ಎಐಎಂಐಎಂ ಮುಖ್ಯಸ್ಥ ಅಸಾವುದ್ದೀನ್ ಒವೈಸಿ, ಉಡುಗೆಗಳಿಗೆ ನಿಷೇಧ ವಿಧಿಸಿ ಭಯೋತ್ಪಾದನೆ ವಿರುದ್ಧ ಹೋರಾಡುವುದರ ಬದಲು ಮನಸ್ಥಿತಿ ಬದಲಾಗಬೇಕಿದೆ ಎಂದಿದ್ದಾರೆ.
ಬುರ್ಖಾ ಅವರವರ ಆಯ್ಕೆ ಎಂದು ಸುಪ್ರೀಂಕೋರ್ಟ್ ತೀರ್ಪನ್ನು ಶಿವಸೇನೆ ಓದಿಕೊಳ್ಳಲಿ. ನಿಮಗೆ ಏನು ಇಷ್ಟವೋ ಅದನ್ನು ಧರಿಸಬಹುದು, ಅದು ಬುರ್ಖಾ ಆಗಿರಬಹುದು, ಜೀನ್ಸ್ ಆಗಿರಬಹುದು. ಇಲ್ಲಿ ಆಯ್ಕೆ ಇದೆ. ಅದು ನಮ್ಮ ಮೂಲಭೂತ ಹಕ್ಕು ಕೂಡಾ ಆಗಿದೆ ಎಂದಿದ್ದಾರೆ ಒವೈಸಿ.
ಮೋದಿಯನ್ನು ಪರಾಭವಗೊಳಿಸುತ್ತೇವೆ ಎಂದು ಶಿವಸೇನೆ ಈ ಹಿಂದೆ ಸಿಕ್ಕಾಪಟ್ಟೆ ಬರೆದಿತ್ತು. ಆದರೆ ಇವತ್ತು ಅವರೆಲ್ಲರೂ ಜತೆಯಾಗಿದ್ದಾರೆ. ಶಿವಸೇನೆ ಅಸಂಬದ್ಧವಾಗಿ ಮಾತನಾಡುತ್ತಿದೆ. ಕಾನೂನು ಚೌಕಟ್ಟುಗಳನ್ನು ಶಿವಸೇನೆ ಅರ್ಥ ಮಾಡಿಕೊಳ್ಳುವುದಿಲ್ಲ.
ಭಯೋತ್ಪಾದನೆಯೇ ಈಗ ಧರ್ಮ ಆಗಿಬಿಟ್ಟಿದೆ. ಈ ಹಿಂದೆ ಕೆಲವೊಬ್ಬರು ಮಹಿಳೆಯರು ಜೀನ್ಸ್ ಧರಿಸಬಾರದು ಎಂದು ಹೇಳಿದ್ದರು. ಭಾರತದಲ್ಲಿರುವ ಮಹಿಳೆಯರು ಗೂಂಗಟ್ (ಮುಖ ಮುಚ್ಚುವಂತೆ ತಲೆ ಮೇಲೆ ಸೆರಗು ಹೊದ್ದುಕೊಳ್ಳುವುದು) ಹಾಕಿಕೊಳ್ಳುವುದನ್ನೂ ನೀವು ನಿಷೇಧಿಸುತ್ತೀರಾ? ವಸ್ತ್ರಗಳಿಂದ ಭಯೋತ್ಪಾದನೆಯನ್ನು ನಿರ್ಧರಿಸುವುದಾದರೆ ಸಾಧ್ವಿ ಪ್ರಜ್ಞಾ ಧರಿಸಿರುವುದು ಏನನ್ನು?
ಚುನಾವಣೆಯ ವೇಳೆ ಜನರನ್ನು ಧ್ರುವೀಕರಣಗೊಳಿಸುವ ಕಾರ್ಯವನ್ನು ಶಿವಸೇನೆ ಮಾಡುತ್ತಿದೆ ಎಂದು ಆರೋಪಿಸಿರುವ ಒವೈಸಿ ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿದ್ದಕ್ಕಾಗಿ ಚುನಾವಣಾ ಆಯೋಗಕ್ಕೆ ದೂರು ನೀಡುವುದಾಗಿ ಹೇಳಿದ್ದಾರೆ.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…