Featured

ಭಯೋತ್ಪಾದನೆ ವಿಸ್ತರಿಸಲು ಆರ್‌ಎಸ್ಎಸ್ ಕಾರಣ : ಪಾಕ್

ನ್ಯೂಯಾರ್ಕ್‌: ಗಡಿಯಾಚೆಗಿನ ಭಯೋತ್ಪಾದನೆ ಗುರಿಯಾಗಿಟ್ಟುಕೊಂಡು ವಿಶ್ವ ವೇದಿಕೆಯಲ್ಲಿ ಭಾರತದ ವಿದೇಶಾಂಗ ವ್ಯವಹಾರಗಳ ಸಚಿವೆ ಸುಷ್ಮಾ ಸ್ವರಾಜ್‌ ಮಾಡಿರುವ ಕಟು ಟೀಕೆಗಳಿಂದ ಬೆಚ್ಚಿಬಿದ್ದಿರುವ ಪಾಕಿಸ್ತಾನ, ಆರ್‌ಎಸ್‌ಎಸ್‌ ಹಾಗೂ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಅವರತ್ತ ಬೊಟ್ಟು ಮಾಡಿ ಬಚಾವಾಗಲು ಯತ್ನಿಸಿದೆ.

‘‘ಬಿಜೆಪಿಯ ಸೈದ್ಧಾಂತಿಕ ಸಲಹೆಗಾರ ಆರ್‌ಎಸ್‌ಎಸ್‌, ಭಾರತದಲ್ಲಿ ಮತಾಂಧತೆಯನ್ನು ಹರಡುವ ಕೆಲಸ ಮಾಡುತ್ತಿದೆ. ಇದು ನಮ್ಮ ಉಪ ಖಂಡದಲ್ಲಿ ಭಯೋತ್ಪಾದನೆ ವಿಸ್ತರಿಸಲು ಕಾರಣವಾಗಿದೆ. ಭಾರತದ ಅತಿದೊಡ್ಡ ರಾಜ್ಯವಾದ ಉತ್ತರ ಪ್ರದೇಶದಲ್ಲಿ ಯೋಗಿ ಆದಿತ್ಯನಾಥ್‌ ಕೂಡ ಅಂಥದ್ದೇ ಕೆಲಸ ಮಾಡುತ್ತಿದ್ದಾರೆ. ಹಿಂದೂ ಧರ್ಮದ ಶ್ರೇಷ್ಠತೆ ಪರ ಅವರು ಉಗ್ರ ಹೋರಾಟಕ್ಕೆ ಬಹಿರಂಗ ಬೆಂಬಲ ನೀಡಿದ್ದಾರೆ,’’ ಎಂದು ವಿಶ್ವಸಂಸ್ಥೆಯಲ್ಲಿನ ಪಾಕ್‌ ರಾಯಭಾರಿ ಸಾದ್‌ ವಾರೈಕ್‌ ಆರೋಪಿಸಿದರು.

ಬಾಂಗ್ಲಾ ವಲಸಿಗರನ್ನು ಗುರಿಯಾಗಿಟ್ಟುಕೊಂಡು ಬಿಜೆಪಿ ಅಧ್ಯಕ್ಷ ಅಮಿತ್‌ ಶಾ ನಡೆಸಿದ ವಾಗ್ದಾಳಿಯನ್ನೂ ತಮ್ಮ ಅನುಕೂಲಕ್ಕೆ ತಕ್ಕತೆ ತಿರುಗಿಸಿದ ವಾರೈಕ್‌, ‘‘ಬಿಜೆಪಿ ನಾಯಕರೊಬ್ಬರ ವಾಗ್ದಾಳಿಯಿಂದ ಅಸ್ಸಾಂನಲ್ಲಿರುವ ಬೆಂಗಾಲಿಗಳು ಹಠಾತ್ತನೆ ನೆಲೆ ಕಳೆದುಕೊಂಡು ನಿರ್ಗತಿಕರಾಗಿದ್ದಾರೆ. ಅವರನ್ನು ಆ ನಾಯಕರು ಗೆದ್ದಲ ಹುಳುಗಳು ಎಂದು ಜರಿದಿದ್ದಾರೆ. ಇದರಿಂದ ಅಲ್ಲಿ ಚರ್ಚ್‌ ಮತ್ತು ಮಸೀದಿಗಳಿಗೆ ಬೆಂಕಿ ಇಡಲಾಗಿದೆ,’’ ಎಂದು ದೂರಿದರು.

Vishwa News 24

Recent Posts

ಕುಂದಾಪುರ: ಹೋಂಸ್ಟೇ ಎನ್‌ ಒಸಿ ನೀಡಲು ಲಂಚ ಪಡೆದ ಆರೋಪ ; ಗ್ರಾಮ ಲೆಕ್ಕಿಗ ಲೋಕಾಯುಕ್ತ ಬಲೆಗೆ – vishwanews24

ಕುಂದಾಪುರ: ಹೋಂ ಸ್ಟೇ ಎನ್‌ ಒಸಿ ನೀಡಲು ಲಂಚ ಪಡೆದ ಆರೋಪ ; ಗ್ರಾಮ ಲೆಕ್ಕಿಗ ಲೋಕಾಯುಕ್ತ ಬಲೆಗೆ ಕುಂದಾಪುರ…

2 days ago

ಉಚ್ಚಿಲ : ಕರಾವಳಿ ಭಾಗವಿಲ್ಲದೇ ರಾಜ್ಯಕ್ಕೆ ಹೆಚ್ಚಿನ ಬೆಲೆಯೇ ಇರುವುದಿಲ್ಲ :  ಮುಖ್ಯಮಂತ್ರಿ ಡಿ.ಕೆ.ಶಿ – vishwanews24

ಉಡುಪಿ ಉಚ್ಚಿಲ ದಸರಾದಲ್ಲಿ ಮಹಿಳಾ ದಸರಾ ಉದ್ಘಾಟಿಸಿದ ಸಿಎಂ ಕರಾವಳಿ ಕರ್ನಾಟಕ ‘ಜಾಗತಿಕ ಟೂರಿಸಂ ಹಬ್’ ಆಗಿ ಅಭಿವೃದ್ಧಿ  :…

2 days ago

ಮಂಗಳೂರು: ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ಆರೋಪ ; ಚರ್ಚ್ ಫಾದರ್ ವಿರುದ್ಧ ಪೋಕ್ಸೋ ಪ್ರಕರಣ ದಾಖಲು – vishwanews24

ಮಂಗಳೂರು: ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ಆರೋಪ  : ಚರ್ಚ್ ಫಾದರ್ ವಿರುದ್ಧ ಪೋಕ್ಸೋ ಪ್ರಕರಣ ದಾಖಲು ಮಂಗಳೂರು: ಮಂಗಳೂರು…

2 days ago

ಉಡುಪಿ:  ಪಡಿತರ ಚೀಟಿಯ ಫಲಾನುಭವಿಗಳಿಗೆ ಇ-ಕೆವೈಸಿ ಮಾಡಿಸಲು ಅ. 20 ರ ವರೆಗೆ ಅವಕಾಶ – vishwanews24

ಉಡುಪಿ:  ಪಡಿತರ ಚೀಟಿಯ ಫಲಾನುಭವಿಗಳಿಗೆ ಇ-ಕೆವೈಸಿ ಮಾಡಿಸಲು ಅ. 20 ರ ವರೆಗೆ ಅವಕಾಶ    ಉಡುಪಿ: ಸಾರ್ವಜನಿಕ ವಿತರಣಾ ವ್ಯವಸ್ಥೆಯಡಿ…

2 days ago

ಈ ಬಾರಿ ದಸರಾ ಮಹೋತ್ಸವದಲ್ಲಿ ಅಂಬಾರಿ ಹೊತ್ತು ಸಾಗಲಿರುವ ದುಬಾರೆ ವೀರ ಪ್ರಶಾಂತ​ ಆನೆ – vishwanews24

ಈ ಬಾರಿ ದಸರಾ ಮಹೋತ್ಸವದಲ್ಲಿ ಅಂಬಾರಿ ಹೊತ್ತು ಸಾಗಲಿರುವ ದುಬಾರೆ ವೀರ ಪ್ರಶಾಂತ​ ಆನೆ ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು…

3 days ago

ಬೆಳ್ತಂಗಡಿ: ನಾವೂರಿನ ಆರೋಗ್ಯ ಕ್ಲಿನಿಕ್‌ಗೆ ಬೆಂಕಿ ಹಚ್ಚಿದ ಪ್ರಕರಣ; ಓರ್ವನ ಬಂಧನ, ಇಬ್ಬರು ವಶಕ್ಕೆ – vishwanews24

ಬೆಳ್ತಂಗಡಿ: ನಾವೂರಿನ ಆರೋಗ್ಯ ಕ್ಲಿನಿಕ್‌ಗೆ ಬೆಂಕಿ ಹಚ್ಚಿದ ಪ್ರಕರಣ; ಓರ್ವನ ಬಂಧನ, ಇಬ್ಬರು ವಶಕ್ಕೆ ಬೆಳ್ತಂಗಡಿ: ನಾವೂರು ಗ್ರಾಮದ ಸ್ವಾತಿ…

3 days ago