Featured

ಭರವಸೆ ಈಡೇರಿಸದೇ ಕೇವಲ ರಾಜಕಾರಣ ಮಾಡಿದ್ದರಿಂದ ಜನತೆ ಬಿಜೆಪಿಯನ್ನು ತಿರಸ್ಕರಿಸಿದ್ದಾರೆ : ಪ್ರಮೋದ್‌ ಮುತಾಲಿಕ್‌ – vishwanews24

ಬಿಜೆಪಿ ಹಿಂದುತ್ವ ಮರೆತಿದ್ದಕ್ಕೆ ಇಂದು ವಿಪಕ್ಷದ ಸ್ಥಾನದಲ್ಲಿದೆ : ಪ್ರಮೋದ್‌ ಮುತಾಲಿಕ್‌

ಹಾವೇರಿ : ಬಿಜೆಪಿ ಹಿಂದುತ್ವ ಮರೆತಿದ್ದಕ್ಕೆ ಇಂದು ವಿಪಕ್ಷದ ಸ್ಥಾನದಲ್ಲಿದೆ. ಜನರಿಗೆ ನೀಡಿದ್ದ ಭರವಸೆಯನ್ನು ಈಡೇರಿಸದೇ ಕೇವಲ ರಾಜಕಾರಣ ಮಾಡಿದ್ದರಿಂದ ಜನತೆ ಬಿಜೆಪಿಯನ್ನು ತಿರಸ್ಕರಿಸಿದ್ದಾರೆ ಎಂದು ಶ್ರೀರಾಮ ಸೇನಾ ಅಧ್ಯಕ್ಷ ಪ್ರಮೋದ್‌ ಮುತಾಲಿಕ್‌ ಬಿಜೆಪಿ ವಿರುದ್ದ ಹರಿಹಾಯ್ದರು.

ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿ ಕಟ್ಟಲು ನಾವೆಲ್ಲ ಕಷ್ಟಪಟ್ಟಿದ್ದೇವೆ. ಹೀಗಾಗಿ ಅವರನ್ನು ಪ್ರಶ್ನಿಸುವ ಹಕ್ಕು ನಮಗಿದೆ. ಇನ್ನು ಕಿತ್ತೂರು ರಾಣಿ ಚೆನ್ನಮ್ಮನನ್ನು ರಾಜ್ಯದ ಕಾಂಗ್ರೆಸ್ ಸರ್ಕಾರ ಕಡೆಗಣಿಸಿದೆ. 200ನೇ ವಿಜಯೋತ್ಸವ ಸಪ್ಪೆಯಾಗಿದೆ. ಯಾವುದೇ ಪತ್ರಿಕೆಯಲ್ಲಿ ಜಾಹೀರಾತು ಇಲ್ಲ. ಆದರೆ ತಮ್ಮ ಇಲಾಖೆ ಅಥವಾ ವೈಯಕ್ತಿಕ ಹಿತಾಸಕ್ತಿಯ ವಿಚಾರಗಳಿಗೆ ಹೆಚ್ಚಿನ ಜಾಹೀರಾತುಗಳನ್ನು ನೀಡುತ್ತಿದ್ದಾರೆ ಎಂದು ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದರು.

ಶಿಗ್ಗಾಂವಿ ಬಿಜೆಪಿ ಅಭ್ಯರ್ಥಿ ಭರತ್ ಬೊಮ್ಮಾಯಿ ಅವರಿಗೆ ಮನವಿ ನೀಡುತ್ತೇವೆ. ನಮ್ಮ ಬೇಡಿಕೆ ಈಡೇರಿಸಬೇಕು. ಆಗ ನಮ್ಮ ಬೆಂಬಲ ನೀಡುವ ಜತೆಗೆ ಪ್ರಚಾರದಲ್ಲೂ ನಾವು ಪಾಲ್ಗೊಳ್ಳುತ್ತೇವೆ. ಇಲ್ಲದಿದ್ದರೆ ಚರ್ಚೆ ಮಾಡಿ ಮುಂದಿನ ನಿರ್ಧಾರ ಕೈಗೊಳ್ಳುತ್ತೇವೆ ಎಂದರು. ಕಾಂಗ್ರೆಸ್‌ಗೆ ಬೆಂಬಲಿಸುವ ಪ್ರಶ್ನೆಯೇ ಇಲ್ಲ. ಮತಾಂಧರ, ಹಿಂದೂ ವಿರೋಧಿಗಳಿಗೆ ಯಾವತ್ತೂ ನಮ್ಮ ಬೆಂಬಲವಿಲ್ಲ. ಇವರು ನಮ್ಮ ಬೇಡಿಕೆಗೆ ಸ್ಪಂದಿಸದೇ ಇದ್ದಲ್ಲಿ ನೋಟಾ ಚಲಾವಣೆ ಅಥವಾ ಒಬ್ಬ ಸಾಮಾನ್ಯ ಹಿಂದೂ ಕಾರ್ಯಕರ್ತನನ್ನು ನಿಲ್ಲಿಸಿ ಗೆಲ್ಲಿಸುತ್ತೇವೆ ಎಂದರು. ಶ್ರೀರಾಮ ಸೇನಾ ಜಿಲ್ಲಾಧ್ಯಕ್ಷ ಲೋಕೇಶ ಕಾರಡಗಿ, ಧಾರವಾಡ ವಿಭಾಗ ಅಧ್ಯಕ್ಷ ಗದಿಗೆಪ್ಪ ಕುರವತ್ತಿ ಇದ್ದರು.

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

1 day ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

2 days ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

2 days ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

2 days ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

2 days ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

2 days ago