ಲೋಕಸಭೆ ಚುನಾವಣೆ ಸಮೀಪಿಸುತ್ತಿರುವಾಗಲೇ ಪ್ರಧಾನಿ ನರೇಂದ್ರ ಮೋದಿ ಅವರು ಉತ್ತರಪ್ರದೇಶದಲ್ಲಿ ಬರೋಬ್ಬರಿ 60 ಸಾವಿರ ಕೋಟಿ ರು. ವೆಚ್ಚದ 81 ಯೋಜನೆಗಳಿಗೆ ಭಾನುವಾರ ಭೂಮಿ ಪೂಜೆ ನೆರವೇರಿಸಿದ್ದಾರೆ. ದೇಶದಲ್ಲೇ ಅತಿ ಹೆಚ್ಚು ಅಂದರೆ 80 ಕೋಟಿ ಕ್ಷೇತ್ರಗಳನ್ನು ಹೊಂದಿರುವ ಹಾಗೂ ರಾಷ್ಟ್ರ ರಾಜಕಾರಣದಲ್ಲಿ ಪ್ರಮುಖ ಪಾತ್ರ ವಹಿಸುವ ಉತ್ತರಪ್ರದೇಶದಲ್ಲಿ ಮೋದಿ ಅವರು ಬೃಹತ್ ಮೊತ್ತದ ಯೋಜನೆ ಗಳಿಗೆ ಚಾಲನೆ ನೀಡಿರುವುದು ಮಹತ್ವದ್ದಾಗಿದೆ.
ಅಲ್ಲದೆ ಹಿಂದುಳಿದಿರುವ ಉತ್ತರಪ್ರದೇಶದಲ್ಲಿ ಕೈಗಾರಿಕೀಕರಣಕ್ಕೆ ಒತ್ತು ನೀಡಿದಂತಾಗಿದೆ. ಈ ಯೋಜನೆಗಳಿಂದ 2 ಲಕ್ಷ ಉದ್ಯೋಗ ಸೃಷ್ಟಿ ಯಾಗುವ ನಿರೀಕ್ಷೆ ಇದೆ. ಭೂಮಿಪೂಜೆ ಕಾರ್ಯಕ್ರಮದಲ್ಲಿ ಆದಿತ್ಯ ಬಿರ್ಲಾ ಸಮೂಹದ ಕುಮಾರ ಮಂಗಳಂ ಬಿರ್ಲಾ, ಅದಾನಿ ಸಮೂಹದ ಗೌತಮ್ ಅದಾನಿ, ಎಸ್ಸೆಲ್ ಗ್ರೂಪ್‌ನ ಸುಭಾಷ್ ಚಂದ್ರ, ಐಟಿಸಿ ಕಂಪನಿ ವ್ಯವಸ್ಥಾಪಕ ನಿರ್ದೆಶಕ ಸಂಜೀವ್ ಪುರಿ ಸೇರಿದಂತೆ 80 ಖ್ಯಾತನಾಮ ಉದ್ಯಮಿಗಳು ಉಪಸ್ಥಿತರಿದ್ದರು. ಈ ವೇಳೆ ಮಾತನಾಡಿದ ಮೋದಿ ಅವರು, ಇಂದಿನ ಕಾರ್ಯಕ್ರಮವನ್ನು ಗ್ರೌಂಡ್ ಬ್ರೇಕಿಂಗ್ (ಶಂಕುಸ್ಥಾಪನೆ) ಕಾರ್ಯಕ್ರಮ ಎಂದು ಕೆಲವರು ಕರೆಯುತ್ತಾರೆ.
ಆದರೆ ಇದು ರೆಕಾರ್ಡ್ ಬ್ರೇಕಿಂಗ್ (ದಾಖಲೆಯ) ಕಾರ್ಯಕ್ರಮ. ನಾನೂ ದೀರ್ಘ ಅವಧಿಗೆ ಮುಖ್ಯಮಂತ್ರಿಯಾಗಿದ್ದೆ. 60 ಸಾವಿರ ಕೋಟಿ ರು. ಹೂಡಿಕೆ ಅತಿದೊಡ್ಡ ಸಾಧನೆ. ಹೀಗಾಗಿ ಅಧಿಕಾರಿಗಳಿಗೆ ಧನ್ಯವಾದ ಹೇಳುವೆ ಎಂದು ತಿಳಿಸಿದರು. ಫೆಬ್ರವರಿಯಲ್ಲಷ್ಟೇ ಉತ್ತರಪ್ರದೇಶದಲ್ಲಿ ಹೂಡಿಕೆದಾರರ ಸಮಾವೇಶ ನಡೆದಿತ್ತು
ಜಾಹಿರಾತು: vyshali Bar& Family Restaurant kaup:
prop: NAYESH P SHETTY: 9620427036
ದೇವೇಗೌಡರ ಕುರಿತು ಕಾಂಗ್ರೆಸ್ ಮೊಸಳೆ ಕಣ್ಣೀರು ಸುರಿಸುವ ಅವಶ್ಯಕತೆ ಇಲ್ಲ: ಬಿ.ವೈ.ವಿಜಯೇಂದ್ರ ಬೆಂಗಳೂರು,: ಕರ್ನಾಟಕದ ಕಾಂಗ್ರೆಸ್ ಪಕ್ಷದ ಉಸ್ತುವಾರಿ ಸುರ್ಜೇವಾಲ…
ಕಾರವಾರ - ಮಡಗಾಂವ್ ವಿಶೇಷ ರೈಲು ಸೇವೆ ಇನ್ನು ಮುಂದೆ ಖಾಯಂ ಶಿರಸಿ: ಕಾರವಾರ ಮತ್ತು ಮಡಗಾಂವ್ ನಡುವೆ ಸಂಚರಿಸುತ್ತಿದ್ದ ವಿಶೇಷ…
ಡಿಕೆಶಿ ಸಂಪುಟದಲ್ಲಿ ಸಚಿವ ಸ್ಥಾನಕ್ಕಾಗಿ ಯಾವುದೇ ಬೇಡಿಕೆ ಇಟ್ಟಿಲ್ಲ, ಸ್ಪರ್ಧೆಯಲ್ಲೂ ಇಲ್ಲ: ರಾಜಣ್ಣ ಖಡಕ್ ಹೇಳಿಕೆ ಬೆಂಗಳೂರು: ನೂತನ ಮುಖ್ಯಮಂತ್ರಿ ಡಿ.…
ಬೆಳ್ತಂಗಡಿ ಮನೆ ಕಳ್ಳತನ ಪ್ರಕರಣ : ಇಬ್ಬರು ಅಂತರಾಜ್ಯ ಕಳ್ಳರ ಬಂಧನ ; ₹23.67 ಲಕ್ಷ ಮೌಲ್ಯದ ಸೊತ್ತು ವಶ…
ಉಡುಪಿ : ಯುವಕ ನಾಪತ್ತೆ ಉಡುಪಿ : ಮೂಲತಃ ನೇಪಾಳ ದೇಶದವರಾದ, ಪ್ರಸ್ತುತ ಮಣಿಪಾಲದ ಲಕ್ಷಿö್ಮÃಶ ನಗರದಲ್ಲಿರುವ ಹೋಟೆಲ್ ಒಂದರಲ್ಲಿ…
ಉಡುಪಿ: ಜೂನ್ 9 ರಿಂದ ಕರ್ನಾಟಕದಾದ್ಯಂತ ಖಾಸಗಿ ಬಸ್ ಪ್ರಯಾಣ ದರ ಏರಿಕೆ : ಕುಯಿಲಾಡಿ ಸುರೇಶ್ ನಾಯಕ್ ಉಡುಪಿ…