ವಾರಣಾಸಿಯಲ್ಲಿ ಭರ್ಜರಿ ರೋಡ್ ಶೋ ಮೂಲಕ ಏಪ್ರಿಲ್ 26ರಂದು ಪ್ರಧಾನಿ ಮೋದಿ ನಾಮಪತ್ರ ಸಲ್ಲಿಕೆ – Vishwanews24

Featured, ದೇಶ, ರಾಷ್ಟ್ರ ನ್ಯೂಸ್
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಉತ್ತರ ಪ್ರದೇಶದ ವಾರಣಾಸಿ ಲೋಕಸಭಾ ಕ್ಷೇತ್ರದಿಂದ ಮತ್ತೆ ಕಣಕ್ಕಿಳಿಯುತ್ತಿದ್ದು, ಏಪ್ರಿಲ್ 26ರಂದು ನಾಮಪತ್ರ ಸಲ್ಲಿಸಲಿದ್ದಾರೆ.
ಪ್ರಧಾನಿ ಮೋದಿ ಅವರು ನಾಮಪತ್ರ ಸಲ್ಲಿಕೆಗೂ ಮುನ್ನಾ ದಿನ ವಾರಣಾಸಿಯಲ್ಲಿ ಭರ್ಜರಿ ರೋಡ್ ಶೋ ನಡೆಸಲಿದ್ದು, ಬಿಜೆಪಿಯ ಹಿರಿಯ ನಾಯಕರು ಭಾಗಿಯಾಗಲಿದ್ದಾರೆ ಎಂದು ಪಕ್ಷದ ಉನ್ನತ ಮೂಲಗಳು ತಿಳಿಸಿವೆ.
ಕಳೆದ ಲೋಕಸಭಾ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ವಾರಣಾಸಿ ಕ್ಷೇತ್ರದಲ್ಲಿ ತಮ್ಮ ಪ್ರತಿಸ್ಪರ್ಧಿ ಆಮ್ ಆದ್ಮಿ ಪಕ್ಷದ ಅರವಿಂದ್ ಕೇಜ್ರಿವಾಲ್ ಹಾಗೂ ಕಾಂಗ್ರೆಸ್ ಅಭ್ಯರ್ಥಿ ಅಜಯ್ ರಾಯ್ ಅವರನ್ನು ಬಾರಿ ಮತಗಳ ಅಂತರದಿಂದ ಪರಾಜಯಗೊಳಿಸಿದ್ದರು. ಈ ಬಾರಿಯೂ ಕೂಡಾ ವಾರಣಾಸಿಯಿಂದ ಕಣಕ್ಕಿಳಿಯಲಿರುವ ಮೋದಿ ಏಪ್ರಿಲ್ 25ರಂದು ನಾಮಪತ್ರ ಸಲ್ಲಿಸಲಿದ್ದಾರೆ.
ವಾರಣಾಸಿಯ ಬನರಾಸ್ ಹಿಂದೂ ವಿಶ್ವವಿದ್ಯಾಲಯದ ಲಂಕಾ ಗೇಟ್ ಸಮೀಪದಿಂದ ಪ್ರಧಾನಿ ಮೋದಿ ರೋಡ್ ಶೋ ಆರಂಭವಾಗಲಿದೆ.
ಬಿಜೆಪಿ ನಾಯಕರ ಜೊತೆ ಚರ್ಚೆಯ ಬಳಿಕ ಪ್ರಧಾನಿ ಮೋದಿ ಅವರ ರೋಡ್ ಶೋ ನಡೆಯಲಿದೆ.