ಉಡುಪಿ: ಜಿಲ್ಲೆಯಾದ್ಯಂತ ವಿವಿಧ ಇಲಾಖೆಗಳಲ್ಲಿ ಅಧಿಕಾರಿ ಹಾಗೂ ಸಿಬ್ಬಂದಿಗಳ ತೀವ್ರ ಕೊರತೆಯಿಂದ ಸಾವಿರಾರು ಅರ್ಜಿಗಳು ವಿಲೇವಾರಿಯಾಗದೆ ಜನಸಾಮಾನ್ಯರಿಗೆ ತಮ್ಮ ಸಮಸ್ಯೆಗಳ ಪರಿಹಾರ ಹಾಗೂ ಸರಕಾರದ ಯೋಜನೆಗಳನ್ನು ಪಡೆಯಲು ಸಾಧ್ಯಗದೇ ತೀವ್ರ ತೊಂದರೆ ಉಂಟಾಗುತ್ತಿದ್ದು ವಿವಿಧ ಭಾಗ್ಯಗಳ ಅನುಷ್ಠಾನದ ಜೊತೆ ಜೊತೆಗೆ ರಾಜ್ಯ ಸರಕಾರ ಕೂಡಲೇ ಖಾಲಿ ಹುದ್ದೆಗಳಿಗೆ ಅಧಿಕಾರಿಗಳನ್ನು ನೇಮಿಸಿ ಆದೇಶ ಹೊರಡಿಸುವಂತೆ ಉಡುಪಿ ಶಾಸಕರಾದ ಯಶ್ ಪಾಲ್ ಸುವರ್ಣ ಆಗ್ರಹಿಸಿದ್ದಾರೆ.
ನಗರಾಭಿವೃದ್ಧಿ ಪ್ರಾಧಿಕಾರ, ನಗರ ಸಭೆ, ಮೀನುಗಾರಿಕೆ, ಆರೋಗ್ಯ, ಕಂದಾಯ, ಗ್ರಾಮ ಪಂಚಾಯತ್ ಮೊದಲಾದ ಜನ ಸಾಮಾನ್ಯರ ದೈನಂದಿನ ಚಟುವಟಿಕೆಗೆ ಪೂರಕವಾಗಿರುವ ಇಲಾಖೆಯಲ್ಲಿ ಸಿಬ್ಬಂದಿಗಳ ಕೊರತೆಯಿಂದ ಜನಸಾಮಾನ್ಯರ ತುರ್ತು ಕೆಲಸಗಳು ವಿಳಂಬವಾಗುತ್ತಿದೆ.
ರಾಜ್ಯ ಸರ್ಕಾರ ಆಡಳಿತ ಬಂದ ದಿನದಿಂದ ತನ್ನ ಪ್ರಣಾಳಿಕೆಯಲ್ಲಿ ಘೋಷಿಸಿದ ಭಾಗ್ಯಗಳ ಅನುಷ್ಠಾನ ಮಾಡುವ ಬಗ್ಗೆ ಮಾತ್ರ ಚರ್ಚೆ ನಡೆಸುತ್ತಿದ್ದು, ಆಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸುವ ಕಾರ್ಯವನ್ನು ಕಡೆಗಣಿಸಿದೆ.
ಪಠ್ಯ ಪುಸ್ತಕ ಪರಿಷ್ಕರಣೆ, ಮತಾಂತರ ನಿಷೇಧ ಕಾನೂನು ರದ್ದು, ಗೋಹತ್ಯೆ ನಿಷೇಧ ಕಾನೂನು ಹಿಂಪಡೆಯುವ ವಿವಾದಾತ್ಮಕ ವಿಚಾರದಲ್ಲಿ ತೀವ್ರ ಆಸಕ್ತಿ ತೋರುವ ರಾಜ್ಯ ಸರ್ಕಾರ ಈ ಗಂಭೀರ ಸಮಸ್ಯೆಯ ಬಗ್ಗೆ ತೀವ್ರ ನಿರ್ಲಕ್ಷ್ಯ ಮಾಡುತ್ತಿದೆ.
ರಾಜ್ಯ ಸರ್ಕಾರ ಸಮಸ್ಯೆಯ ಗಂಭೀರತೆಯನ್ನು ಅರಿತು ಕೂಡಲೇ ಆದ್ಯತೆಯ ಮೇರೆಗೆ ಸಿಬ್ಬಂದಿಗಳ ಭರ್ತಿಗೆ ಆದೇಶ ಹೊರಡಿಸುವಂತೆ ಆಗ್ರಹಿಸುವುದಾಗಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…
ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ, 18 ಲಕ್ಷ ಮೌಲ್ಯದ ಸೊತ್ತು…
ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ ನಗೋಯಾ: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ…
ಕಾರ್ಕಳ : ಅ. 05 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ…
ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ ಮಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ…
180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ ನವದೆಹಲಿ : ದುಬೈನಿಂದ…