ಇಂದಿಗೆ ಸರಿಯಾಗಿ ಮೂರು ವರ್ಷಗಳ ಹಿಂದೆ.. ಇಡೀ ದೇಶವೇ ಪ್ರೇಮಿಗಳ ದಿನಾಚರಣೆ ಸಂಭ್ರಮ, ಪರ-ವಿರೋಧ ಚರ್ಚೆಗಳಲ್ಲಿದ್ದರೆ ಅತ್ತ ಸಂಜೆ ವೇಳೆಗೆ ಸಿಡಿಲಬ್ಬರದ ಸುದ್ದಿಯೊಂದು ಕಿವಿಗಪ್ಪಳಿಸಿತ್ತು. 2019ರ ಫೆಬ್ರವರಿ 14 ಸಂಜೆ 3:15ರ ವೇಳೆಗೆ ಉಗ್ರರ ಅಟ್ಟಹಾಸಕ್ಕೆ ಭಾರತೀಯ ಸೈನಿಕರನ್ನು ಪ್ರಾಣತೆತ್ತಿದ್ದರು. ಬಹುಶಃ ಭಾರತ ದೇಶ ಎಂದೆಂದಿಗೂ ಮರೆಯದ ಭೀಕರ ಘಟನೆಯಿದು. ಮಧ್ಯಾಹ್ನತನಕ ಪ್ರೇಮಿಗಳ ದಿನಾಚರಣೆಯಲ್ಲಿ ಮಿಂದೆದ್ದಿದ್ದ ಜನರು ಸಂಜೆ ವೇಳೆಗೆ ಕಣ್ಣೀರಲ್ಲಿ ಕೈತೊಳೆದಿದ್ದರು.
ಜಮ್ಮು ಕಾಶ್ಮೀರದ ಪುಲ್ವಾಮಾ ಜಿಲ್ಲೆಯ ಲೆಥ್‌ಪೋರಾ ಬಳಿಯ ಅವಾಂತಿಪೋರಾ ಸಮೀಪ ರಾ.ಹೆ 44ರಲ್ಲಿ 78 ಸೇನಾ ವಾಹನಗಳು ಸಿಆರ್‌ಪಿಎಫ್ ಯೋಧರನ್ನು ಕರೆದುಕೊಂಡು ಸಾಲಾಗಿ ಸಾಗುತ್ತಿದ್ದವು. ಈ ವೇಳೆ 350 ಕೆಜಿ ಸ್ಫೋಟಕಗಳನ್ನು ಹೊತ್ತ ಮಹೀಂದ್ರಾ ಸ್ಕಾರ್ಪಿಯೋ ಎಸ್‌ಯುಪಿಯೊಂದು ನೇರವಾಗಿ ಸೇನಾ ವಾಹನಕ್ಕೆ ಡಿಕ್ಕಿ ಹೊಡೆಯಿತು. ಪರಿಣಾಮ ಕ್ಷಣ ಮಾತ್ರದಲ್ಲೇ 76ನೇ ಬೆಟಾಲಿಯನ್‌ನ 40 ಯೋಧರು ಹುತಾತ್ಮರಾದರು.
ಉಗ್ರರ ಅಟ್ಟಹಾಸಕ್ಕೆ ಉತ್ತರ ನೀಡಲು ಭಾರತ ಸಂಕಲ್ಪ ಮಾಡಿತು. ಪಾಕಿಸ್ತಾನದ ಖೈಬರ್ ಪಖ್ತುನ್ಖ್ವಾದ ಬಾಲಾಕೋಟ್ನಲ್ಲಿರುವ ಜೈಷ್ ಉಗ್ರಗಾಮಿಗಳ ತಾಣಗಳ ಮೇಲೆ ಪುಲ್ವಾಮಾ ದಾಳಿಯ 12 ದಿನಗಳ ನಂತರ, ಅಂದ್ರೆ ಫೆಬ್ರವರಿ 26 ರಂದು ಉಗ್ರರ ನೆಲೆ ಮೇಲೆ ವೈಮಾನಿಕ ದಾಳಿ ನಡೆಸಿತ್ತು.
ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ ಬೆಂಗಳೂರು: ಮಟನ್ ಶಾಪ್ ನಲ್ಲಿ ಎಂಡಿಎಂಎ ಮಾದಕ…
ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ ಕಾರ್ಕಳ : ಮನೆ ವಿಚಾರದಲ್ಲಿ ತಂದೆಯೊಬ್ಬ ತನ್ನ…
ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ ಮಂಗಳೂರು: ಮೈಸೂರು ದಸರಾ 2026ರ ಅಂಗವಾಗಿ ಮೊದಲ ಬಾರಿಗೆ ಅದ್ದೂರಿಯಾಗಿ ಆಯೋಜಿಸಲಾಗುತ್ತಿರುವ…
ಸೌಜನ್ಯಾ ಪ್ರಕರಣ: ಎಸ್‌ಐಟಿ ತಂಡದ ಬಗ್ಗೆ ಕಲ್ಲಡ್ಕ ಪ್ರಭಾಕರ ಭಟ್ ಅಸಮಾಧಾನ ಬಂಟ್ವಾಳ: ಸೌಜನ್ಯಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮರುತನಿಖೆಗೆ…
ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ ಬೆಂಗಳೂರು: ನವರಾತ್ರಿ ಹಬ್ಬದ ಸಂದರ್ಭದಲ್ಲಿ ರಾಜ್ಯದ ‘ಗೃಹಲಕ್ಷ್ಮಿ’…
ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು ಬಂಟ್ವಾಳ : ವಾರಾಂತ್ಯದ ರಜೆಯ ಹಿನ್ನೆಲೆಯಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿವಾರಿಸಲು…