Featured

ಭಾರತಕ್ಕೆ ಅಮೆರಿಕದ ತಾತ್ಕಾಲಿಕ ರಾಯಭಾರಿಯಾಗಿ  ಅತುಲ್ ಕೇಶಪ್ ನೇಮಕ -Vishwanews24

ಭಾರತಕ್ಕೆ ಅಮೆರಿಕದ ತಾತ್ಕಾಲಿಕ ರಾಯಭಾರಿಯಾಗಿ  ಅತುಲ್ ಕೇಶಪ್ ನೇಮಕ -Vishwanews24

ನವದೆಹಲಿ: ಡೇನಿಯಲ್ ಸ್ಮಿತ್ ನಿವೃತ್ತಿಹೊಂದುತ್ತಿರುವ ಕಾರಣ ಭಾರತೀಯ ಮೂಲದ ಅತುಲ್ ಕೇಶಪ್ ಅವರನ್ನು ಅಮೆರಿಕ ಭಾರತಕ್ಕೆ ತಾತ್ಕಾಲಿಕ ರಾಯಭಾರಿಯಾಗಿ ನೇಮಿಸಿದೆ. ಕೇಶಪ್ ಅವರು ಈ ಮೊದಲು ಶ್ರೀಲಂಕಾ, ಮಾಲ್ಡೀವ್ಸ್ ರಾಯಭಾರಿಯಾಗಿದ್ದರು, 1994ರಲ್ಲಿ ಅಮೆರಿಕ ವಿದೇಶಾಂಗ ಸೇವೆಗೆ ಸೇರಿದ ಅತುಲ್, ದಕ್ಷಿಣ ಮತ್ತು ಕೇಂದ್ರ ಏಷ್ಯಾ ವ್ಯವಹಾರಗಳ ವಿಭಾಗದಲ್ಲಿ ಉಪಸಹಾಯಕ ಕಾರ್ಯದರ್ಶಿಯಾಗಿದ್ದರು.

ಪಂಜಾಬ್ ಮೂಲದ ಅತುಲ್ ತಂದೆ ಕೇಶಪ್ ಚಂದರ್ ಸೆನ್, ನೈಜೀರಿಯಾದಲ್ಲಿ ವಿಶ್ವಸಂಸ್ಥೆಯ ಅಭಿವೃದ್ಧಿ ಅರ್ಥಶಾಸ್ತ್ರಜ್ಞರಾಗಿದ್ದರು. ತಾಯಿ ಜೋ ಕ್ಯಾಲ್ವರ್ಟ್ ಅಮೆರಿಕ ವಿದೇಶಾಂಗ ಸೇವೆಯಲ್ಲಿದ್ದು, ಸೆನ್ ರನ್ನು ಲಂಡನ್ ನಲ್ಲಿ ವಿವಾಹವಾಗಿದ್ದರು. ಭಾರತದಲ್ಲಿನ ಅಮೆರಿಕ ರಾಯಭಾರ ಕಚೇರಿಯಲ್ಲೂ ಸೇವೆ ಸಲ್ಲಿಸಿದ್ದರು, ಅತುಲ್ 1971ರ ಜೂನ್ ನಲ್ಲಿ ನೈಜರಿಯಾದಲ್ಲಿ ಜನಿಸಿದ್ದರು.

2003ರಲ್ಲಿ ರಾಷ್ಟ್ರೀಯ ಭದ್ರತಾ ಸಮಿತಿಯ ಉತ್ತರ ಆಫ್ರಿಕಾ ಮತ್ತು ಮಧ್ಯ ಪೂರ್ವ ಪ್ರದೇಶಗಳ ನಿರ್ದೇಶಕರಾಗಿ ಅವರು ಶ್ವೇತಭವನ ಪ್ರವೇಶಿಸಿದ್ದರು. 2008ರಿಂದ 2010ರ ಅವಧಿಯಲ್ಲಿ ಅಂತಾರಾಷ್ಟ್ರೀಯ ಸಾಂಸ್ಥಿಕ ವ್ಯವಹಾರಗಳ ವಿಭಾಗದ ವಿಶ್ವಸಂಸ್ಥೆ ಮಾನವ ಹಕ್ಕುಗಳ ನಿರ್ದೇಶಕರೂ ಆಗಿದ್ದರು.

 

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

4 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

4 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

4 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

4 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

4 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

4 days ago