ನವದೆಹಲಿ: ದೇಶಾದ್ಯಂತ ಭಾರೀ ವಿವಾದ ಸೃಷ್ಟಿಸಿದ್ದ ಫ್ರಾನ್ಸ್ ಮೂಲದ ರಫೇಲ್ ಯುದ್ಧ ವಿಮಾನ ಭಾರತಕ್ಕೆ ಆಗಮಿಸಲಿವೆ. ಮುಂದಿನ ತಿಂಗಳು ವಿದೇಶದಿಂದ ಆಗಮಿಸಲಿರುವ 36 ರಫೇಲ್ ಯುದ್ದ ವಿಮಾನಗಳನ್ನು ಭಾರತೀಯ ವಾಯುಪಡೆ ಸ್ವಾಗತಿಸಲಿದೆ. ಈ ಮುನ್ನವೇ ಫ್ರಾನ್ಸ್ ಪ್ರಧಾನಿ ಜೊತೆಗೆ ಮಾತುಕತೆ ನಡೆಸುವ ಸಲುವಾಗಿ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮತ್ತು ಏರ್ ಚೀಫ್ ಮಾರ್ಷಲ್ ಬಿ.ಎಸ್ ಧನೋವಾ ಪ್ಯಾರಿಸ್ಗೆ ತೆರಳಲಿದ್ದಾರೆ ಎನ್ನಲಾಗಿದೆ.
ಫ್ರಾನ್ಸ್ ಸರ್ಕಾರ ಮುಂದಿನ ತಿಂಗಳು ರಫೇಲ್ ವಿಮಾನಗಳನ್ನು ಭಾರತಕ್ಕೆ ಹಸ್ತಾಂತರ ಮಾಡಲಿದೆ. ಇದಕ್ಕಾಗಿಯೇ ಸೆಪ್ಟೆಂಬರ್ 20ಕ್ಕೆ ವಿಮಾನ ಹಸ್ತಾಂತರ ಸಮಾರಂಭ ಹಮ್ಮಿಕೊಳ್ಳಲಾಗಿದೆ. ಇದೇ ಸಮಾರಂಭದಲ್ಲಿ ಫ್ರಾನ್ಸ್ನ ಡಸ್ಸೌಲ್ಟ್ ಎಂಬುವರು, ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಉಪಸ್ಥಿತಿಯಲ್ಲಿ ಭಾರತಕ್ಕೆ ರಫೆಲ್ ಯುದ್ಧ ವಿಮಾನ ಹಸ್ತಾಂತರ ಮಾಡಲಿದ್ದಾರೆ.
ಜಾಹಿರಾತು
ಫ್ರಾನ್ಸ್ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿಯವರು ಈ ಸಂಬಂಧ ಮುಂದಿನ ಗುರುವಾರ ಪ್ಯಾರಿಸ್ಗೆ ಭೇಟಿ ನೀಡಲಿದ್ದಾರೆ. ಅಲ್ಲಿನ ಭಾರತೀಯ ವಾಯುಸೇನೆ ಅಧಿಕಾರಿಗಳ ಜೊತೆಗೆ ಹಸ್ತಾಂತರ ಪ್ರಕ್ರಿಯೆ ಬಗ್ಗೆ ಸಭೆ ನಡೆಸಲಿದ್ದಾರೆ ಎಂದು ರಕ್ಷಣಾ ಇಲಾಖೆಯ ಮೂಲಗಳು ತಿಳಿಸಿವೆ.
ಸುಮಾರು 58 ಸಾವಿರ ಕೋಟಿ ರೂಪಾಯಿ ವೆಚ್ಚದ 36 ರಫೆಲ್ ಯುದ್ಧ ವಿಮಾನ ಖರೀದಿಗೆ ಭಾರತ ಸರ್ಕಾರ 2016ರ ಸೆಪ್ಟೆಂಬರ್ ನಲ್ಲಿ ಫ್ರಾನ್ಸ್ ಸರ್ಕಾರದೊಂದಿಗೆ ಅಂತರ ಸರ್ಕಾರ ಒಪ್ಪಂದ ಮಾಡಿಕೊಂಡಿತ್ತು.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…