Featured

ಭಾರತಕ್ಕೆ ಆಗಮಿಸಿದ ಬ್ರಿಟನ್ ಪ್ರಧಾನಿ ಜಾನ್ಸನ್‌ ; ಗುಜರಾತ್‌ನ ಸಬರಮತಿ ಆಶ್ರಮಕ್ಕೆ ಭೇಟಿ – Vishwanews24

ಭಾರತಕ್ಕೆ ಆಗಮಿಸಿದ ಬ್ರಿಟನ್ ಪ್ರಧಾನಿ ಜಾನ್ಸನ್‌ ; ಗುಜರಾತ್‌ನ ಸಬರಮತಿ ಆಶ್ರಮಕ್ಕೆ ಭೇಟಿ – Vishwanews24

ಅಹಮದಾಬಾದ್ : ಬ್ರಿಟನ್ ಪ್ರಧಾನಿ ಬೋರಿಸ್ ಜಾನ್ಸನ್‌ಅವರು ಇಂದು ಬೆಳಗ್ಗೆ ಅಹಮದಾಬಾದ್‍ಗೆ ಆಗಮಿಸಿದ ಸಂದರ್ಭದಲ್ಲಿ ಭವ್ಯ ಸ್ವಾಗತ ನೀಡಲಾಗಿದೆ .

ವಿಮಾನ ನಿಲ್ದಾಣದಿಂದ ಸುಮಾರು ನಾಲ್ಕು ಕಿಮೀ ಮಾರ್ಗದಲ್ಲಿ ಪುಷ್ಪ ಮಳೆಗೆರೆದು ಸಾಂಸ್ಕøತಿಕ ಕಲಾ ತಂಡ ಮೇಳ್ಯಸಿದೆ , ಗುಜರಾತ್ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಮತ್ತು ರಾಜ್ಯಪಾಲ ಆಚಾರ್ಯ ದೇವವ್ರತ್ ಅವರು ಅಹಮದಾಬಾದ್ ವಿಮಾನ ನಿಲ್ದಾಣದಲ್ಲಿ ಜಾನ್ಸನ್ ಅವರನ್ನು ಬರಮಾಡಿಕೊಂಡರು.

ರಸ್ತೆ ಯುದ್ದಕ್ಕೂ ಸಾಂಪ್ರದಾಯಿಕ ಗುಜರಾತಿನ ನೃತ್ಯಗಳು ಮತ್ತು ಸಂಗೀತವನ್ನು ಪ್ರದರ್ಶಿಸುವ ತಂಡಗಳಿಂದ ಬ್ರಿಟಿಷ್ ಪ್ರಧಾನಿ ಅವರನ್ನು ಸ್ವಾಗತಿಸಲಾಯಿತು. ಆಶ್ರಮ ರಸ್ತೆಯ ಪಂಚತಾರಾ ಹೋಟೆಲ್‍ಗೆ ನಾಲ್ಕು ಕಿಮೀ ವ್ಯಾಪ್ತಿಯಲ್ಲಿ ನಿಯಮಿತ ಮಧ್ಯಂತರದಲ್ಲಿ 40 ವೇದಿಕೆಗಳನ್ನು ನಿರ್ಮಿಸಲಾಯಿತು, ಅಲ್ಲಿ ತಂಡಗಳು ಮತ್ತೆ ಸಾಂಪ್ರದಾಯಿಕ ಭಾರತೀಯ ನೃತ್ಯಗಳನ್ನು ಪ್ರದರ್ಶಿಸಿ ಜಾನ್ಸನ್‌ಅವರನ್ನು ಸ್ವಾಗತಿಸಿದರು.

ನಂತರ ಬ್ರಿಟನ್ ಪ್ರಧಾನಿಯವರು ರಾಜ್ಯದ ಪ್ರಮುಖ ಉದ್ಯಮಿಗಳ ಜೊತೆ ಸಭೆ ನಡೆಸಿದರು, ನಂತರ, ಅವರು ಪಂಚಮಹಲ್ ಜಿಲ್ಲಾಯ ಹಲೋಲ್ ಬಳಿಯ ಬ್ರಿಟಿಷ್ ನಿರ್ಮಾಣ ಸಲಕರಣೆಗಳ ಸಂಸ್ಥೆಯಾದ ಜೆಸಿಬಿಯ ಉತ್ಪಾದನಾ ಘಟಕಕ್ಕೆ ಬೇಟಿ ನೀಡಿದರು . ಬ್ರಿಟಿಷ್ ಪ್ರಧಾನಿ ಗಾಂಧಿನಗರದಲ್ಲಿನ ನಿರ್ಮಾಣ ಹಂತದಲ್ಲಿರುವ ಗುಜರಾತ್ ಬಯೋಟೆಕ್ನಾಲಜಿ ವಿಶ್ವವಿದ್ಯಾಲಯದ ಕ್ಯಾಂಪಸ್‍ಗೂ ಭೇಟಿ ನೀಡಲಿದ್ದಾರೆ.

ನವದೆಹಲಿಗೆ ತೆರಳುವ ಮೊದಲು ಗಾಂಧಿನಗರದಲ್ಲಿರುವ ಸ್ವಾಮಿನಾರಾಯಣ ಪಂಥದ ಪ್ರಸಿದ್ಧ ಅಕ್ಷರಧಾಮ ದೇವಾಲಯಕ್ಕೆ ಭೇಟಿ ನೀಡಲಿದ್ದಾರೆ. ನಾಳೆ ದೆಹಲಿಯಲ್ಲಿ ಜಾನ್ಸನ್ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಲಿದ್ದಾರೆ.

ಸಬರಮತಿ ಆಶ್ರಮದಲ್ಲಿ ಜಾನ್ಸನ್
ಸಬರಮತಿ ಆಶ್ರಮಕ್ಕೆ ಗುರುವಾರ ಬೆಳಿಗ್ಗೆ ಭೇಟಿ ನೀಡಿದ ಬೋರಿಸ್ ಜಾನ್ಸನ್ ಅವರು, ಚರಕವನ್ನು ತಿರುಗಿಸಿ ನೂಲು ತೆಗೆಯಲು ಪ್ರಯತ್ನಿಸಿದರು. ಬಳಿಕ ಆಶ್ರಮದ ಸಂದರ್ಶಕರ ಪುಸ್ತಕದಲ್ಲಿ ಅವರು ಮಹಾತ್ಮ ಗಾಂಧಿ ಅವರನ್ನು ಸ್ಮರಿಸಿ ಅಭಿಪ್ರಾಯ ಬರೆದರು. “ಈ ಅಸಾಧಾರಣ ವ್ಯಕ್ತಿಯ ಆಶ್ರಮಕ್ಕೆ ಬಂದಿರುವುದು ಹಾಗೂ ಅವರು ಜಗತ್ತಿನ ಒಳಿತಿಗಾಗಿ ಪರಿವರ್ತನೆ ತರಲು ಸತ್ಯ ಮತ್ತು ಅಹಿಂಸೆಯ ಸರಳ ತತ್ವಗಳನ್ನು ಹೇಗೆ ಜತೆಗೂಡಿಸಿದರು ಎಂದು ಅರ್ಥ ಮಾಡಿಕೊಳ್ಳಲು ಬಂದಿರುವುದು ಬಹಳ ಖುಷಿಯ ಸಂಗತಿ” ಎಂದು ಸಂದರ್ಶಕರ ಪುಸ್ತಕದಲ್ಲಿ ಬರೆದಿದ್ದಾರೆ.

Vishwa News 24

Recent Posts

ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ – vishwanews24

 ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…

23 hours ago

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ : ಬೆಸ್ಕಾಂ ಸ್ಪಷ್ಟನೆ – vishwanews24

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…

1 day ago

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ – vishwanews24

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…

1 day ago

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಆರೋಪ – vishwanews24

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಗಂಭೀರ…

1 day ago

ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ: ಸಂಸದ ಯದುವೀರ್ ಒಡೆಯರ್ ಆಕ್ಷೇಪ – vishwanews24

ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…

1 day ago

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ – vishwanews24

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…

1 day ago