Featured

ಭಾರತಕ್ಕೆ ಆಗಮಿಸುವ ಅಂತಾರಾಷ್ಟ್ರೀಯ ಪ್ರಯಾಣಿಕರಿಗೆ ಹೊಸ ನಿಯಮ ಜಾರಿ – Vishwanews24

ಭಾರತಕ್ಕೆ ಆಗಮಿಸುವ ಅಂತಾರಾಷ್ಟ್ರೀಯ ಪ್ರಯಾಣಿಕರಿಗೆ ಹೊಸ ನಿಯಮ ಜಾರಿ

ಕೋವಿಡ್‌ಗೆ ಸಂಬಂಧಿಸಿದ ಮಾಹಿತಿಗಳನ್ನು ಭರ್ತಿ ಮಾಡಬೇಕಾದ ಅವಶ್ಯಕತೆ ಇಲ್ಲ..

ನವದೆಹಲಿ: ಭಾರತಕ್ಕೆ ಆಗಮಿಸುವ ಅಂತಾರಾಷ್ಟ್ರೀಯ ಪ್ರಯಾಣಿಕರಿಗೆ ನಾಗರಿಕ ವಿಮಾನಯಾನ ಸಚಿವಾಲಯ ಮಾರ್ಗಸೂಚಿಯನ್ನು ಪರಿಷ್ಕರಿಸಿದ್ದು, ಏರ್ ಸುವಿಧಾ ಪೋರ್ಟಲ್‌ ನಲ್ಲಿ ಕೋವಿಡ್ ಲಸಿಕೆಗಾಗಿ ಸ್ವಯಂ ಘೋಷಣೆಯ ನಮೂನೆಗಳು ಇನ್ನು ಮುಂದೆ ಭರ್ತಿ ಮಾಡಬೇಕಾದ ಅಗತ್ಯವಿಲ್ಲ ಎಂದು ಹೇಳಿದೆ. ಈ ನಿರ್ಧಾರ ಇಂದಿನಿಂದಲೇ ಜಾರಿಗೆ ಬರಲಿದೆ.

ಕೋವಿಡ್-19 ಪ್ರಕರಣಗಳ ಸಂಖ್ಯೆಯು ನಿರಂತರ ಕ್ಷೀಣಿಸುತ್ತಿರುವ ಹಿನ್ನೆಲೆ ಮತ್ತು ಜಾಗತಿಕವಾಗಿ ಹಾಗೂ ಭಾರತದಲ್ಲಿ ಕೊವೀಡ್ – 19 ವ್ಯಾಕ್ಸಿನೇಷನ್ ನಲ್ಲಿ ಗಮನಾರ್ಹ ಪ್ರಗತಿ ಸಾಧಿಸಿದ ಹಿನ್ನೆಲೆಯಲ್ಲಿ ಅಂತರರಾಷ್ಟ್ರೀಯ ಆಗಮನಕ್ಕಾಗಿ ಮಾರ್ಗಸೂಚಿಗಳನ್ನು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯವು ಪರಿಷ್ಕೃತಗೊಳಿಸಿದೆ.

📛 ಬೆಳ್ತಂಗಡಿ: ಕಾಡಿನ ವಿಷ ಪೂರಿತ ಅಣಬೆ ಖಾದ್ಯ ಸೇವನೆ.. 🌐 ಒಂದೇ ಕುಟುಂಬದ ಇಬ್ಬರ ಸಾವು – Vishwanews24

ಆರೋಗ್ಯ ಸಚಿವಾಲಯದ ಪರಿಷ್ಕೃತ ಮಾರ್ಗಸೂಚಿಗಳ ಅಡಿಯಲ್ಲಿ, ಏರ್ ಸುವಿಧಾ ಆನ್‌ ಲೈನ್ ಪೋರ್ಟಲ್ ಸ್ಟ್ಯಾಂಡ್‌ ನಲ್ಲಿ ಸ್ವಯಂ ಘೋಷಣೆ ನಮೂನೆಯನ್ನು ಸಲ್ಲಿಸುವುದನ್ನು ನಿಲ್ಲಿಸಲಾಗಿದೆ ಎಂದು ವಿಮಾನಯಾನ ಸಚಿವಾಲಯ ತಿಳಿಸಿದೆ. ಆದಾಗ್ಯೂ, ಕೋವಿಡ್ ಪರಿಸ್ಥಿತಿಯ ದೃಷ್ಟಿಯಿಂದ ಅಗತ್ಯವಿದ್ದರೆ ನಿಯಮವನ್ನು ಪರಿಶೀಲಿಸಬಹುದು ಎಂದು ತಿಳಿಸಿದೆ.

ವಿಮಾನಯಾನ ಸಚಿವಾಲಯದ ಏರ್ ಸುವಿಧಾ ಪೋರ್ಟಲ್‌ ನಲ್ಲಿರುವ ತಮ್ಮ ಮಾಹಿತಿಯನ್ನು ದಾಖಲಿಸುವುದು ಅಂತಾರಾಷ್ಟ್ರೀಯ ಪ್ರಯಾಣಿಕರಿಗೆ ಕಡ್ಡಾಯವಾಗಿತ್ತು. ಅದರಲ್ಲಿ, ಪ್ರಯಾಣಿಕರು ಸ್ವೀಕರಿಸಿದ ಕೋವಿಡ್ ಲಸಿಕೆ ಡೋಸ್ ಳ ಸಂಖ್ಯೆ ಮತ್ತು ಅವರ ದಿನಾಂಕಗಳನ್ನು ಒಳಗೊಂಡಂತೆ ತಮ್ಮ ವ್ಯಾಕ್ಸಿನೇಷನ್ ಸ್ಥಿತಿಯನ್ನು ಘೋಷಿಸಬೇಕಾಗಿತ್ತು.

🚫 ಮಂಗಳೂರು – ಆಟೋ ರಿಕ್ಷಾ ಸ್ಫೋಟ ಪ್ರಕರಣಕ್ಕೆ ಟ್ವಿಸ್ಟ್ : ಸ್ಫೋಟಕ್ಕೆ ಬೆಂಗಳೂರು ಲಿಂಕ್

ವಿಮಾನ ನಿಲ್ದಾಣಗಳಲ್ಲಿ ಮಾಸ್ಕ್‌ಗಳ ಬಳಕೆ ಮತ್ತು ಸಾಮಾಜಿಕ ಅಂತರ ಸೇರಿದಂತೆ ಕೋವಿಡ್‌ಗಾಗಿ ಎಲ್ಲಾ ಮುನ್ನೆಚ್ಚರಿಕೆ ಕ್ರಮಗಳನ್ನು ಮುಂದುವರಿಸುವುದು ಸಹ ಅಗತ್ಯವಾಗಿದೆ ಎಂದು ಹೇಳಿದೆ.

Vishwa News 24

Recent Posts

ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ವಿರುದ್ಧ ಅವಹೇಳನಕಾರಿ ಹೇಳಿಕೆ: ವಿಠಲ ಗೌಡ ವಿರುದ್ಧ ಅರೆಸ್ಟ್​​​​​​ ವಾರಂಟ್ – vishwanews24

ಧರ್ಮಸ್ಥಳ ಪ್ರಕರಣ : ವಿಠಲ್‌ ಗೌಡ ವಿರುದ್ಧ ಅರೆಸ್ಟ್‌ ವಾರಂಟ್:‌ ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…

22 minutes ago

ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ – vishwanews24

ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…

1 hour ago

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ – vishwanews24

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…

3 hours ago

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು – vishwanews24

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…

3 hours ago

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ – vishwanews24

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…

4 hours ago

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ – vishwanews24

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…

4 hours ago