ಆಗಸ್ಟ್ 6 ರಂದು ಒಲಿಂಪಿಕ್ಸ್ನಲ್ಲಿ ನಡೆದ ಮಹಿಳೆಯರ 50 ಕೆಜಿ ತೂಕ ವಿಭಾಗದ ಕುಸ್ತಿ ಸ್ಪರ್ಧೆಯ ಸೆಮಿಫೈನಲ್ ಪಂದ್ಯದಲ್ಲಿ ಕ್ಯೂಬಾದ ಗುಜ್ಮನ್ ಲೋಪೆಜ್ ಅವರನ್ನು 5-0 ಅಂತರದಿಂದ ಮಣಿಸಿ ಫೈನಲ್ ಪ್ರವೇಶಿಸಿದ್ದ ಭಾರತದ ವಿನೇಶ್ ಫೋಗಟ್ ಇದೀಗ ಸ್ಪರ್ಧೆಯಿಂದ ಅನರ್ಹಗೊಂಡಿದ್ದಾರೆ. ವಾಸ್ತವವಾಗಿ ಫೈನಲ್ ಪಂದ್ಯಕ್ಕೂ ಮುನ್ನ ನಡೆದ ವಿನೇಶ್ ಅವರ ತೂಕ ಪರೀಕ್ಷೆಯಲ್ಲಿ ಅವರ ತೂಕವು ನಿಗದಿತ ಮಿತಿಗಿಂತ 100 ಗ್ರಾಂ ಹೆಚ್ಚಿರುವುದು ಕಂಡುಬಂದಿದೆ. ನಿಯಮಗಳ ಪ್ರಕಾರ, ಯಾವುದೇ ಕುಸ್ತಿಪಟುವಿಗೆ ಯಾವುದೇ ವಿಭಾಗದಲ್ಲಿ 100 ಗ್ರಾಂ ಹೆಚ್ಚುವರಿ ತೂಕದ ಭತ್ಯೆ ನೀಡಲಾಗುತ್ತದೆ. ಆದರೆ ವಿನೇಶ್ ಅವರ ತೂಕ ಇದಕ್ಕಿಂತ ಹೆಚ್ಚಿದೆ ಹೀಗಾಗಿ ಅವರು ಫೈನಲ್ ಸ್ಪರ್ಧೆಯಿಂದ ಹೊರಬಿದ್ದಿದ್ದಾರೆ ಎಂದು ವರದಿಯಾಗಿದೆ.
ಭಾರತೀಯ ಒಲಿಂಪಿಕ್ಸ್ ಸಂಸ್ಥೆ ಕೂಡ ವಿನೇಶ್ ಫೋಗಟ್ ಅನರ್ಹತೆಯನ್ನು ಖಚಿತಪಡಿಸಿದೆ. ವಿನೇಶ್ ಫೋಗಟ್ ಅವರು 50 ಕೆಜಿ ತೂಕ ವಿಭಾಗದಲ್ಲಿ ಸ್ಪರ್ಧಿಸಿದ್ದರು. ಆದರೆ ಅವರ ತೂಕ ನಿಗದಿತ ಮಿತಿಗಿಂತ ಹೆಚ್ಚಿರುವುದರಿಂದ ಅವರನ್ನು ಕುಸ್ತಿ ಪಂದ್ಯದಿಂದ ಅನರ್ಹಗೊಳಿಸಲಾಗಿದೆ ಎಂದು ಐಒಎ ತನ್ನ ಹೇಳಿಕೆಯಲ್ಲಿ ತಿಳಿಸಿದೆ.
ಫೈನಲ್ ಸ್ಪರ್ಧೆಗೂ ಮುನ್ನ ವಿನೇಶ್ ಫೋಗಟ್ ಅನರ್ಹಗೊಂಡಿರುವುದರಿಂದಾಗಿ ಇದೀಗ 50 ಕೆ.ಜಿ. ವಿಭಾಗದಲ್ಲಿ ಯಾವುದೇ ಕುಸ್ತಿಪಟು ಬೆಳ್ಳಿ ಪದಕ ಪಡೆಯಲು ಸಾಧ್ಯವಾಗುವುದಿಲ್ಲ. ಉಳಿದಂತೆ ಈ ವಿಭಾಗದಲ್ಲಿ ವಿನೇಶ್ ಅವರೊಂದಿಗೆ ಫೈನಲ್ನಲ್ಲಿ ಸ್ಪರ್ಧಿಸಬೇಕಿದ್ದ ಅಮೆರಿಕದ ಕುಸ್ತಿಪಟುಗೆ ಚಿನ್ನದ ಪದಕ ಸಿಗಲಿದೆ.
ಮಂಗಳೂರು : ಅ.2ರಂದು ಜಿಲ್ಲಾ ಯುವ ಕಾಂಗ್ರೆಸ್‌ನಿಂದ ‘ಸದ್ಭಾವನಾ ನಡಿಗೆ’ ಮಂಗಳೂರು: ಗಾಂಧಿ ಜಯಂತಿ ಪ್ರಯುಕ್ತ ದ.ಕ.ಜಿಲ್ಲಾ ಯುವ ಕಾಂಗ್ರೆಸ್…
ಶಂಕರಪುರ ದ್ವಾರಕಾಮಾಯಿ ಮಠದಲ್ಲಿ ‘ಪಂಚಾಶತ್ ಜನ್ಮ ವೈಭವ’ ಅ.3ರಿಂದ ಧಾರ್ಮಿಕ ಕಾರ್ಯಕ್ರಮಗಳ ಚಾಲನೆ.. ವರ್ಷಪೂರ್ತಿ ಗೋಸೇವೆ, ಅನ್ನದಾನ, ಆರೋಗ್ಯ–ಶಿಕ್ಷಣ ಸೇವೆ…
ಸೌಜನ್ಯಾ ಪ್ರಕರಣದ ಮರುತನಿಖೆ: ಮಂಗಳೂರಿಗೆ ಆಗಮಿಸಿದ ನೂತನ ಎಸ್ಐಟಿ ತಂಡ ಮಂಗಳೂರು : ಸೌಜನ್ಯಾ ಅತ್ಯಾಚಾರ, ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ…
ಪರಪ್ಪನ ಆಗ್ರಹಾರ ಕಾರಾಗೃಹದಲ್ಲಿ ಮತ್ತೆ ಮೊಬೈಲ್ ಫೋನ್, ಸಿಮ್ಕಾರ್ಡ್ ಗಳು ಪತ್ತೆ ಬೆಂಗಳೂರು: ಪರಪ್ಪನ ಆಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಮೊಬೈಲ್…
ಎಂಆರ್‌ಪಿಎಲ್ ಕಾರ್ಮಿಕರ ಮುಷ್ಕರ: ಮೃತ ಮನೀಶ್ ಕಾರ್ಕಡಗೆ ಶ್ರದ್ಧಾಂಜಲಿ, ಪರಿಹಾರಕ್ಕೆ ಆಗ್ರಹ ಮಂಗಳೂರು: ಎಂಆರ್‌ಪಿಎಲ್‌ನಲ್ಲಿ ನಿನ್ನೆ (ಸೆ.30ರ ಬುಧವಾರ) ನಡೆದ…
ಎಂಆರ್‌ಪಿಎಲ್ ಸ್ಫೋಟ ಪ್ರಕರಣ: ಮೃತರ ಕುಟುಂಬಕ್ಕೆ ಗರಿಷ್ಠ ಪರಿಹಾರ : ಭರತ್ ಶೆಟ್ಟಿ ಆಗ್ರಹ ಮಂಗಳೂರು: ಸ್ಫೋಟದ ನಿಖರ ಕಾರಣ…