Featured

ಭಾರತಕ್ಕೆ ಬಿಗ್‌ ಶಾಕ್‌ : ವಿನೇಶ್ ಫೋಗಟ್​ ಅನರ್ಹ; ಕೈತಪ್ಪಿದ ಒಲಿಂಪಿಕ್ಸ್ ಪದಕ – vishwanews24

ಭಾರತಕ್ಕೆ ಬಿಗ್‌ ಶಾಕ್‌ –  ವಿನೇಶ್ ಫೋಗಟ್​ ಅನರ್ಹ; ಕೈತಪ್ಪಿದ ಒಲಿಂಪಿಕ್ಸ್ ಪದಕ

ಆಗಸ್ಟ್ 6 ರಂದು ಒಲಿಂಪಿಕ್ಸ್​ನಲ್ಲಿ ನಡೆದ ಮಹಿಳೆಯರ 50 ಕೆಜಿ ತೂಕ ವಿಭಾಗದ ಕುಸ್ತಿ ಸ್ಪರ್ಧೆಯ ಸೆಮಿಫೈನಲ್ ಪಂದ್ಯದಲ್ಲಿ ಕ್ಯೂಬಾದ ಗುಜ್ಮನ್ ಲೋಪೆಜ್ ಅವರನ್ನು 5-0 ಅಂತರದಿಂದ ಮಣಿಸಿ ಫೈನಲ್ ಪ್ರವೇಶಿಸಿದ್ದ ಭಾರತದ ವಿನೇಶ್ ಫೋಗಟ್ ಇದೀಗ ಸ್ಪರ್ಧೆಯಿಂದ ಅನರ್ಹಗೊಂಡಿದ್ದಾರೆ. ವಾಸ್ತವವಾಗಿ ಫೈನಲ್ ಪಂದ್ಯಕ್ಕೂ ಮುನ್ನ ನಡೆದ ವಿನೇಶ್ ಅವರ ತೂಕ ಪರೀಕ್ಷೆಯಲ್ಲಿ ಅವರ ತೂಕವು ನಿಗದಿತ ಮಿತಿಗಿಂತ 100 ಗ್ರಾಂ ಹೆಚ್ಚಿರುವುದು ಕಂಡುಬಂದಿದೆ. ನಿಯಮಗಳ ಪ್ರಕಾರ, ಯಾವುದೇ ಕುಸ್ತಿಪಟುವಿಗೆ ಯಾವುದೇ ವಿಭಾಗದಲ್ಲಿ 100 ಗ್ರಾಂ ಹೆಚ್ಚುವರಿ ತೂಕದ ಭತ್ಯೆ ನೀಡಲಾಗುತ್ತದೆ. ಆದರೆ ವಿನೇಶ್ ಅವರ ತೂಕ ಇದಕ್ಕಿಂತ ಹೆಚ್ಚಿದೆ ಹೀಗಾಗಿ ಅವರು ಫೈನಲ್ ಸ್ಪರ್ಧೆಯಿಂದ ಹೊರಬಿದ್ದಿದ್ದಾರೆ ಎಂದು ವರದಿಯಾಗಿದೆ.

ಭಾರತೀಯ ಒಲಿಂಪಿಕ್ಸ್ ಸಂಸ್ಥೆ ಕೂಡ ವಿನೇಶ್ ಫೋಗಟ್ ಅನರ್ಹತೆಯನ್ನು ಖಚಿತಪಡಿಸಿದೆ. ವಿನೇಶ್ ಫೋಗಟ್ ಅವರು 50 ಕೆಜಿ ತೂಕ ವಿಭಾಗದಲ್ಲಿ ಸ್ಪರ್ಧಿಸಿದ್ದರು. ಆದರೆ ಅವರ ತೂಕ ನಿಗದಿತ ಮಿತಿಗಿಂತ ಹೆಚ್ಚಿರುವುದರಿಂದ ಅವರನ್ನು ಕುಸ್ತಿ ಪಂದ್ಯದಿಂದ ಅನರ್ಹಗೊಳಿಸಲಾಗಿದೆ ಎಂದು ಐಒಎ ತನ್ನ ಹೇಳಿಕೆಯಲ್ಲಿ ತಿಳಿಸಿದೆ.

ಫೈನಲ್ ಸ್ಪರ್ಧೆಗೂ ಮುನ್ನ ವಿನೇಶ್ ಫೋಗಟ್ ಅನರ್ಹಗೊಂಡಿರುವುದರಿಂದಾಗಿ ಇದೀಗ 50 ಕೆ.ಜಿ. ವಿಭಾಗದಲ್ಲಿ ಯಾವುದೇ ಕುಸ್ತಿಪಟು ಬೆಳ್ಳಿ ಪದಕ ಪಡೆಯಲು ಸಾಧ್ಯವಾಗುವುದಿಲ್ಲ. ಉಳಿದಂತೆ ಈ ವಿಭಾಗದಲ್ಲಿ ವಿನೇಶ್ ಅವರೊಂದಿಗೆ ಫೈನಲ್​ನಲ್ಲಿ ಸ್ಪರ್ಧಿಸಬೇಕಿದ್ದ ಅಮೆರಿಕದ ಕುಸ್ತಿಪಟುಗೆ ಚಿನ್ನದ ಪದಕ ಸಿಗಲಿದೆ.

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

5 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

5 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

5 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

5 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

5 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

5 days ago