Featured

ಭಾರತಕ್ಕೆ ಮೋದಿಯಿಂದ ವಿಶ್ವ ಗೌರವ ; ಅವರು ಮತ್ತೆ ಪ್ರಧಾನಿಯಾಗುತ್ತಾರೆ – ಅಮೇರಿಕನ್ ಸಂಶೋಧಕ ಡೇವಿಡ್ ಫ್ರಾವ್ಲೇ

ಉಡುಪಿ: ನರೇಂದ್ರ ಮೋದಿ ಮತ್ತೆ ಪ್ರಧಾನಿ ಆಗುತ್ತಾರೆ. ಮೋದಿ 2019 ರಲ್ಲಿ ಮತ್ತೆ ಅಧಿಕಾರ ಹಿಡಿಯುತ್ತಾರೆ ಅಂತ ಅಮೇರಿಕಾದ ಹಿಂದೂ ಧರ್ಮಗುರು, ಸಂಶೋಧಕ ಡೇವಿಡ್ ಫ್ರಾವ್ಲೇ ಹೇಳಿದ್ದಾರೆ.

ಭಾರತದ ಸನಾತನ ಆಚರಣೆಗಳು ಮತ್ತು ಸಂಪ್ರದಾಯಗಳಿಗೆ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಹೆಚ್ಚಿನ ಪ್ರಾಮುಖ್ಯತೆ ಕೊಡುತ್ತಿದ್ದು, ದೇಶವನ್ನು ಹೊಸ ಅಧ್ಯಾಯದ ಕಡೆ ಕೊಂಡೊಯ್ಯುತ್ತಿದೆ. ಅವರು ಮತ್ತೆ ಪ್ರಧಾನಿಯಾಗುವುದರಲ್ಲಿ ಯಾವುದೇ ಸಂಶಯವಿಲ್ಲ ಎಂದು  ಹೇಳಿದರು.ಉಡುಪಿ ಜಿಲ್ಲೆ ಬೈಂದೂರು ತಾಲೂಕಿನ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿಕೊಟ್ಟ ಸಂದರ್ಭ ಮಾಧ್ಯಮಗಳ ಜೊತೆ ಮಾತನಾಡಿದರು. ಪ್ರಧಾನಿ ಮೋದಿ ಭಾರತದ ಪುರಾತನ ಸಂಸ್ಕೃತಿ ಎತ್ತಿ ಹಿಡಿದಿದ್ದಾರೆ. ಮೋದಿ ಆಡಳಿತಾತ್ಮಕ ಮತ್ತು ಭಾರತೀಯ ನಾಗರೀಕತೆ ಪ್ರತಿಪಾದಕ ಎಂದ ಅವರು, ವಿಶ್ವದಲ್ಲಿ ಭಾರತದ ಧ್ವನಿಯನ್ನು ಮೋದಿ ಮೊಳಗಿಸಿದ್ದಾರೆ ಎಂದು ಸರ್ಟಿಫಿಕೇಟ್ ನೀಡಿದರು.

ವೇದ, ಜ್ಯೋತಿಷ್ಯ, ಆಯುರ್ವೇದ ವಿಚಾರದಲ್ಲಿ ಸಂಶೋಧಕನಾಗಿರುವ ಡೇವಿಡ್, ಭಾರತೀಯ ಸಂಸ್ಕೃತಿ ಬಗ್ಗೆ 30 ಪುಸ್ತಕ ಬರೆದಿದ್ದಾರೆ. ಅಮೇರಿಕಾದ ಪ್ರಜೆಯಾಗಿರುವ ಅವರು ಭಾರತವನ್ನು ಸಂಪೂರ್ಣವಾಗಿ ಅರ್ಥಮಾಡಿಕೊಂಡಿರುವುದಾಗಿ ಹೇಳಿದರು.

 

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

5 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

5 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

5 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

5 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

5 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

5 days ago