Featured

ಭಾರತಕ್ಕೆ 5ನೇ ಬಂಗಾರ ಗೆದ್ದು ವಿನೂತನ ದಾಖಲೆ ನಿರ್ಮಿಸಿದ ಚಿನ್ನದ ಹುಡುಗಿ ಹಿಮಾ ದಾಸ್ -Vishwanews24

ನವದೆಹಲಿ: ಮಹಿಳಾ ವಿಭಾಗದ 400 ಮೀಟರ್ ಓಟದಲ್ಲಿ ಗೆದ್ದು ಪದಕ ಪಡೆಯುವ ಮೂಲಕ 15 ದಿನಗಳಲ್ಲಿ ಹಿಮಾ ದಾಸ್ 5 ಚಿನ್ನದ ಪದಕೆ ಗೆದ್ದು ವಿನೂತನ ದಾಖಲೆ ನಿರ್ಮಿಸಿದ್ದಾರೆ.
ಝೆಕ್ ಗಣರಾಜ್ಯದಲ್ಲಿ ನಡೆದ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ಮಹಿಳಾ ವಿಭಾಗದ 400 ಮೀ. ಓಟವನ್ನು ಹಿಮಾ ದಾಸ್ ಕೇವಲ 52.09 ಸೆಕೆಂಡ್ ಗಳಲ್ಲಿ ಪೂರ್ಣಗೊಳಿಸಿದ್ದು ಈ ಆವೃತ್ತಿ (ಸೀಸನ್) ನ ಅತ್ಯುತ್ತಮ ಕಾಲಾವಧಿ ಎಂಬ ದಾಖಲೆಗೆ ಪಾತ್ರವಾಗಿದೆ.
ಜುಲೈ 2 ರಂದು ಪೋಲೆಂಡ್‌ನಲ್ಲಿ ನಡೆದಿದ್ದ ಪೋಜ್ನಾನ್ ಅಥ್ಲೆಟಿಕ್ಸ್ ಗ್ರ್ಯಾನ್ ಪ್ರಿ ಕೂಟದ 200 ಮೀ. ಸ್ಪರ್ಧೆ ಯಲ್ಲಿ ಹಿಮಾ 23.65 ಸೆ.ಗಳಲ್ಲಿ ಗುರಿ ತಲುಪಿ ಚಿನ್ನ ಗೆದ್ದಿದ್ದರು. ಬಳಿಕ ಜು.7 ರಂದು ಪೋಲೆಂಡ್‌ನಲ್ಲಿ ನಡೆದಿದ್ದ ಕುಟ್ನೋ ಅಥ್ಲೆಟಿಕ್ಸ್ ಕೂಟದ 200 ಮೀ. ಓಟದಲ್ಲಿ ಹಿಮಾ ದಾಸ್ 23.97 ಸೆ.ಗಳಲ್ಲಿ ಗುರಿ ಯನ್ನು ಪೂರ್ಣಗೊಳಿಸಿ ಚಿನ್ನದ ಪದಕ ಜಯಿಸಿದ್ದರು.
ನಂತರ ಜು. 13 ರಂದು ಜೆಕ್ ಗಣರಾಜ್ಯದಲ್ಲಿ ನಡೆದಿದ್ದ ಕ್ಲಾಡ್ನೋ ಅಥ್ಲೆಟಿಕ್ಸ್ ಕೂಟದ 200 ಮೀ. ಸ್ಪರ್ಧೆ ಯಲ್ಲಿ 23.43 ಸೆ.ಗಳಲ್ಲಿ ಗುರಿ ಮುಟ್ಟಿ ಹಿಮಾ 3ನೇ ಚಿನ್ನ ಜಯಿಸಿದ್ದರು. ಜು.17 ರಂದು ಜೆಕ್ ಗಣರಾಜ್ಯ ದಲ್ಲಿ ನಡೆದಿದ್ದ ಟಬೂರ್ ಗ್ರ್ಯಾನ್ ಪ್ರಿ ಅಥ್ಲೆಟಿಕ್ಸ್ ಕೂಟದ 200 ಮೀ. ಓಟದಲ್ಲಿ 23.25 ಸೆ.ಗಳಲ್ಲಿ ಗುರಿ ತಲುಪಿ ಚಿನ್ನ ಜಯಿಸಿದರು. ಇದು ಕೂಡ ಕೇವಲ 15 ದಿನಗಳಲ್ಲಿ 4 ಚಿನ್ನ ಗೆದ್ದ ಸಾಧನೆಯನ್ನು ಹಿಮಾ ಮಾಡಿದ್ದರು.

ಇದರಲ್ಲಿ ಹಿಮಾ ಜೆಕ್ ಗಣರಾಜ್ಯದಲ್ಲಿ ನಡೆದ ಅಥ್ಲೆಟಿಕ್ಸ್ ಕೂಟದಲ್ಲಿ 3 ಚಿನ್ನ, ಪೋಲೆಂಡ್‌ನಲ್ಲಿ 2 ಚಿನ್ನ ಗೆದ್ದಿದ್ದಾರೆ. ಈ ಋತುವಿನಲ್ಲಿ ಹಿಮಾ ದಾಸ್ 400 ಮೀ. ಓಟದಲ್ಲಿ ಮೊದಲ ಚಿನ್ನ ಗೆದ್ದಿದ್ದಾರೆ..

 

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

2 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

2 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

2 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

3 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

3 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

3 days ago