Featured

ಭಾರತದಲ್ಲಿ ಕಳೆದ 24ಗಂಟೆಗಳಲ್ಲಿ 40,120 ನೂತನ ಕೋವಿಡ್ ಪ್ರಕರಣಗಳು ವರದಿ: vishwanews24

ನವದೆಹಲಿ: ಭಾರತದಲ್ಲಿ ಕಳೆದ 24ಗಂಟೆಗಳಲ್ಲಿ 40,120 ನೂತನ ಕೋವಿಡ್ ಪ್ರಕರಣಗಳು ವರದಿಯಾಗಿದ್ದು, ಇದರೊಂದಿಗೆ ದೇಶದಲ್ಲಿನ ಕೋವಿಡ್ ಪ್ರಕರಣಗಳ ಒಟ್ಟು ಸಂಖ್ಯೆ 3.20 ಕೋಟಿಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯಶುಕ್ರವಾರ(ಆಗಸ್ಟ್ 13) ಬಿಡುಗಡೆಗೊಳಿಸಿರುವ ಅಂಕಿಅಂಶದಲ್ಲಿ ತಿಳಿಸಿದೆ.

ಕಳೆದ 24ಗಂಟೆಯಲ್ಲಿ ದೇಶದಲ್ಲಿ ಕೋವಿಡ್ ನಿಂದ 585 ಮಂದಿ ಸಾವನ್ನಪ್ಪಿದ್ದು, ಒಟ್ಟು ದೇಶದಲ್ಲಿ ಕೋವಿಡ್ ನಿಂದ

ಸಾವನ್ನಪ್ಪಿರುವವರ ಸಂಖ್ಯೆ 4.3 ಲಕ್ಷಕ್ಕೆ ಏರಿಕೆಯಾಗಿದೆ. ಪ್ರಸ್ತುತ ಭಾರತದಲ್ಲಿ ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ 3.85 ಲಕ್ಷಕ್ಕೆ ಇಳಿಕೆಯಾಗಿದೆ. ಇದು 2020ರ ಮಾರ್ಚ್ ನಂತರದ ಕನಿಷ್ಠ ಪ್ರಮಾಣದ್ದಾಗಿದೆ.

ಭಾರತದಲ್ಲಿ ಕಳೆದ 24ಗಂಟೆಗಳಲ್ಲಿ 42,295 ಮಂ ದಿ ಕೋವಿಡ್ ನಿಂದ ಚೇತರಿಸಿಕೊಂಡಿದ್ದು, ಈವರೆಗೆ ದೇಶಾದ್ಯಂ ತ ಕೋವಿಡ್ ನಿಂದ 3,13,02,345 ಮಂದಿ ಗುಣಮುಖರಾಗಿದ್ದಾರೆ. ದೇಶದಲ್ಲಿನ ಚೇತರಿಕೆ ಪ್ರಮಾಣ ಶೇ.97.46ರಷ್ಟಿದೆ. ಪ್ರತಿದಿನದ ಪಾಸಿಟಿವಿಟಿ ದರ ಶೇ.2.04ರಷ್ಟಿದೆ ಎಂದು ವರದಿ ತಿಳಿಸಿದೆ.

ವಾರದ ಪಾಸಿಟಿವಿಟಿ ದರ ಶೇ.2.13ರಷ್ಟಿದೆ. ಕೋವಿಡ್ ಲಸಿಕೆ ಅಭಿಯಾನದಲ್ಲಿ ದೇಶಾದ್ಯಂ ತ ಈವರೆಗೆ ಅಂದಾಜು 52.95 ಕೋಟಿ ಡೋಸ್ ಗಳಷ್ಟು ಲಸಿಕೆ ನೀಡಲಾಗಿದೆ ಎಂದು ಅಂಕಿಅಂಶ ವಿವರಿಸಿದೆ.

Vishwa News 24

Recent Posts

ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಉಡುಪಿ ಶಾಖೆ ವತಿಯಿಂದ ಗಾಂಧಿ ಜಯಂತಿ ಆಚರಣೆ -vishwanews24

ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಉಡುಪಿ ಶಾಖೆ ವತಿಯಿಂದ ಗಾಂಧಿ ಜಯಂತಿ ಆಚರಣೆ ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಉಡುಪಿ…

22 hours ago

ಮಂಗಳೂರು : ಅ.2ರಂದು ಜಿಲ್ಲಾ ಯುವ ಕಾಂಗ್ರೆಸ್‌ನಿಂದ ‘ಸದ್ಭಾವನಾ ನಡಿಗೆ’ -vishwanews24

ಮಂಗಳೂರು : ಅ.2ರಂದು ಜಿಲ್ಲಾ ಯುವ ಕಾಂಗ್ರೆಸ್‌ನಿಂದ ‘ಸದ್ಭಾವನಾ ನಡಿಗೆ’ ಮಂಗಳೂರು: ಗಾಂಧಿ ಜಯಂತಿ ಪ್ರಯುಕ್ತ ದ.ಕ.ಜಿಲ್ಲಾ ಯುವ ಕಾಂಗ್ರೆಸ್…

2 days ago

ಕಾಪು : ಶಂಕರಪುರ ದ್ವಾರಕಾಮಾಯಿ ಮಠದಲ್ಲಿ ‘ಪಂಚಾಶತ್ ಜನ್ಮ ವೈಭವ’ -vishwanews24

ಶಂಕರಪುರ ದ್ವಾರಕಾಮಾಯಿ ಮಠದಲ್ಲಿ ‘ಪಂಚಾಶತ್ ಜನ್ಮ ವೈಭವ’ ಅ.3ರಿಂದ ಧಾರ್ಮಿಕ ಕಾರ್ಯಕ್ರಮಗಳ ಚಾಲನೆ.. ವರ್ಷಪೂರ್ತಿ ಗೋಸೇವೆ, ಅನ್ನದಾನ, ಆರೋಗ್ಯ–ಶಿಕ್ಷಣ ಸೇವೆ…

2 days ago

ಸೌಜನ್ಯಾ ಪ್ರಕರಣದ ಮರುತನಿಖೆ: ಮಂಗಳೂರಿಗೆ ಆಗಮಿಸಿದ ನೂತನ ಎಸ್ಐಟಿ ತಂಡ  -vishwanews24

ಸೌಜನ್ಯಾ ಪ್ರಕರಣದ ಮರುತನಿಖೆ: ಮಂಗಳೂರಿಗೆ ಆಗಮಿಸಿದ ನೂತನ ಎಸ್ಐಟಿ ತಂಡ  ಮಂಗಳೂರು : ಸೌಜನ್ಯಾ ಅತ್ಯಾಚಾರ, ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ…

2 days ago

ಪರಪ್ಪನ ಆಗ್ರಹಾರ ಕಾರಾಗೃಹದಲ್ಲಿ ಮತ್ತೆ ಮೊಬೈಲ್ ಫೋನ್, ಸಿಮ್ಕಾರ್ಡ್ ಗಳು ಪತ್ತೆ -vishwanews24

ಪರಪ್ಪನ ಆಗ್ರಹಾರ ಕಾರಾಗೃಹದಲ್ಲಿ ಮತ್ತೆ ಮೊಬೈಲ್ ಫೋನ್, ಸಿಮ್ಕಾರ್ಡ್ ಗಳು ಪತ್ತೆ ಬೆಂಗಳೂರು: ಪರಪ್ಪನ ಆಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಮೊಬೈಲ್…

2 days ago

ಎಂಆರ್‌ಪಿಎಲ್ ಕಾರ್ಮಿಕರ ಮುಷ್ಕರ: ಮೃತ ಮನೀಶ್ ಕಾರ್ಕಡಗೆ ಶ್ರದ್ಧಾಂಜಲಿ, ಪರಿಹಾರಕ್ಕೆ ಆಗ್ರಹ -vishwanews24

ಎಂಆರ್‌ಪಿಎಲ್ ಕಾರ್ಮಿಕರ ಮುಷ್ಕರ: ಮೃತ ಮನೀಶ್ ಕಾರ್ಕಡಗೆ ಶ್ರದ್ಧಾಂಜಲಿ, ಪರಿಹಾರಕ್ಕೆ ಆಗ್ರಹ ಮಂಗಳೂರು: ಎಂಆರ್‌ಪಿಎಲ್‌ನಲ್ಲಿ ನಿನ್ನೆ (ಸೆ.30ರ ಬುಧವಾರ) ನಡೆದ…

2 days ago