Featured

ಭಾರತದಲ್ಲಿ ಸಾಂವಿಧಾನಿಕ ಸಂಸ್ಥೆಗಳ ಮೇಲೆ ಬಿಜೆಪಿ ದಾಳಿ ನಡೆಸುತ್ತಿದೆ : ರಾಹುಲ್‌ ಗಾಂಧಿ ಆರೋಪ – vishwanews24

ಭಾರತದಲ್ಲಿ ಸಾಂವಿಧಾನಿಕ ಸಂಸ್ಥೆಗಳ ಮೇಲೆ ಬಿಜೆಪಿ ದಾಳಿ ನಡೆಸುತ್ತಿದೆ : ರಾಹುಲ್‌ ಗಾಂಧಿ ಆರೋಪ

ಬರ್ಲಿನ್‌ : ಜರ್ಮನಿ ಪ್ರವಾಸದಲ್ಲಿರುವ ಲೋಕಸಭೆಯ ವಿಪಕ್ಷ ನಾಯಕ ರಾಹುಲ್‌ ಗಾಂಧಿ ಭಾರತದಲ್ಲಿ ಸಾಂವಿಧಾನಿಕ ಸಂಸ್ಥೆಗಳ ಮೇಲೆ ಬಿಜೆಪಿ ದಾಳಿ ನಡೆಸುತ್ತಿದೆ ಎಂದು ಆರೋಪಿಸಿದ್ದಾರೆ.

ಬರ್ಲಿನ್‌ನಲ್ಲಿರುವ ಹರ್ಟೀ ಶಾಲೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕೇಂದ್ರ ಸರ್ಕಾರ ತನಿಖಾ ಸಂಸ್ಥೆಗಳಾದ ಇಡಿ, ಸಿಬಿಐಗಳನ್ನುಪ್ರತಿಪಕ್ಷಗಳನ್ನು ಹಳಿಯುವ ರಾಜಕೀಯ ಸಾಧನವಾಗಿ ಪರಿವರ್ತಿಸಿದೆ. ಇದು ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಯ ಮೇಲಿನ ದಾಳಿ ಎಂದು ಕರೆದಿದ್ದಾರೆ.

ವಾಸ್ತವಿಕವಾಗಿ ಬಿಜೆಪಿ ವಿರುದ್ಧ ಯಾವುದೇ ಪ್ರಕರಣಗಳಿಲ್ಲ. ಆದರೆ ಹೆಚ್ಚಿನ ರಾಜಕೀಯ ಪ್ರಕರಣಗಳು ಆಡಳಿತ ಪಕ್ಷವನ್ನು ವಿರೋಧಿಸುವವರನ್ನು ಗುರಿಯಾಗಿಸಿಕೊಂಡಿವೆ. ಕಾಂಗ್ರೆಸ್ ಅನ್ನು ಬೆಂಬಲಿಸುವ ಉದ್ಯಮಿಗಳು ಬೆದರಿಕೆಯನ್ನು ಎದುರಿಸುತ್ತಿದ್ದಾರೆ ಎಂದಿದ್ದಾರೆ.

ಇಂಡಿಯಾ ಒಕ್ಕೂಟದ ಪಕ್ಷಗಳು ರಾಜ್ಯ ಮತ್ತು ಸ್ಥಳೀಯ ಚುನಾವಣೆಯಲ್ಲಿ ಪರಸ್ಪರ ಸ್ಪರ್ಧಿಸುತ್ತಿರುವ ಬಗ್ಗೆ ಕೇಳಲಾದ ಪ್ರಶ್ನೆಗೆ, ಇದು ಯುದ್ಧತಂತ್ರದ ಸ್ಪರ್ಧೆಗಳು. ರಾಷ್ಟ್ರೀಯ ಸ್ವಯಂಸೇವಕ ಸಂಘದ ಸಿದ್ಧಾಂತಕ್ಕೆ ವಿರೋಧವಾಗಿ ಮೈತ್ರಿಕೂಟವು ಒಗ್ಗಟ್ಟಾಗಿ ಉಳಿದಿದೆ ಎಂದು ಅವರು ಹೇಳಿದರು.

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

2 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

2 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

2 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

2 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

2 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

2 days ago