ಬರ್ಲಿನ್ : ಜರ್ಮನಿ ಪ್ರವಾಸದಲ್ಲಿರುವ ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಭಾರತದಲ್ಲಿ ಸಾಂವಿಧಾನಿಕ ಸಂಸ್ಥೆಗಳ ಮೇಲೆ ಬಿಜೆಪಿ ದಾಳಿ ನಡೆಸುತ್ತಿದೆ ಎಂದು ಆರೋಪಿಸಿದ್ದಾರೆ.
ಬರ್ಲಿನ್‌ನಲ್ಲಿರುವ ಹರ್ಟೀ ಶಾಲೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕೇಂದ್ರ ಸರ್ಕಾರ ತನಿಖಾ ಸಂಸ್ಥೆಗಳಾದ ಇಡಿ, ಸಿಬಿಐಗಳನ್ನುಪ್ರತಿಪಕ್ಷಗಳನ್ನು ಹಳಿಯುವ ರಾಜಕೀಯ ಸಾಧನವಾಗಿ ಪರಿವರ್ತಿಸಿದೆ. ಇದು ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಯ ಮೇಲಿನ ದಾಳಿ ಎಂದು ಕರೆದಿದ್ದಾರೆ.
ವಾಸ್ತವಿಕವಾಗಿ ಬಿಜೆಪಿ ವಿರುದ್ಧ ಯಾವುದೇ ಪ್ರಕರಣಗಳಿಲ್ಲ. ಆದರೆ ಹೆಚ್ಚಿನ ರಾಜಕೀಯ ಪ್ರಕರಣಗಳು ಆಡಳಿತ ಪಕ್ಷವನ್ನು ವಿರೋಧಿಸುವವರನ್ನು ಗುರಿಯಾಗಿಸಿಕೊಂಡಿವೆ. ಕಾಂಗ್ರೆಸ್ ಅನ್ನು ಬೆಂಬಲಿಸುವ ಉದ್ಯಮಿಗಳು ಬೆದರಿಕೆಯನ್ನು ಎದುರಿಸುತ್ತಿದ್ದಾರೆ ಎಂದಿದ್ದಾರೆ.
ಇಂಡಿಯಾ ಒಕ್ಕೂಟದ ಪಕ್ಷಗಳು ರಾಜ್ಯ ಮತ್ತು ಸ್ಥಳೀಯ ಚುನಾವಣೆಯಲ್ಲಿ ಪರಸ್ಪರ ಸ್ಪರ್ಧಿಸುತ್ತಿರುವ ಬಗ್ಗೆ ಕೇಳಲಾದ ಪ್ರಶ್ನೆಗೆ, ಇದು ಯುದ್ಧತಂತ್ರದ ಸ್ಪರ್ಧೆಗಳು. ರಾಷ್ಟ್ರೀಯ ಸ್ವಯಂಸೇವಕ ಸಂಘದ ಸಿದ್ಧಾಂತಕ್ಕೆ ವಿರೋಧವಾಗಿ ಮೈತ್ರಿಕೂಟವು ಒಗ್ಗಟ್ಟಾಗಿ ಉಳಿದಿದೆ ಎಂದು ಅವರು ಹೇಳಿದರು.
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…
ಮಂಗಳೂರು: ವಿದೇಶಿ ಉದ್ಯೋಗದ ಆಕಾಂಕ್ಷಿಗಳು ಯಾವುದೇ ಏಜೆನ್ಸಿಯನ್ನು ನಂಬುವ ಮುನ್ನಎಚ್ಚರ : ಸುಧೀರ್ ಕುಮಾರ್ ರೆಡ್ಡಿ ಮನವಿ ಮಂಗಳೂರು: ವಿದೇಶದಲ್ಲಿ…
ಅಟ್ಟಿಕಾ ಗೋಲ್ಡ್ ಕಂಪನಿಗೆ ಡಬಲ್ ಶಾಕ್ : ED ದಾಳಿ ಬೆನ್ನಲ್ಲೇ, IT ಇಲಾಖೆ ಅಧಿಕಾರಿಗಳಿಂದ ದಾಳಿ ಬೆಂಗಳೂರು: ಅಟ್ಟಿಕಾ…
ಕಾನ್ಪುರದ ಉದ್ಯಮಿ ಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ : ಆಸ್ತಿ ಬೇರೆ ಮಹಿಳೆಯ ಪಾಲಾಗಬಹುದೆಂಬ ಭೀತಿಯಿಂದ ತಂದೆಯನ್ನೇ ಮುಗಿಸಿದ ಮಗ …