Featured

ಭಾರತದಲ್ಲಿ ಹೇರಿದ್ದ ತುರ್ತು ಪರಿಸ್ಥಿತಿಯ ಕರಾಳ ದಿನವನ್ನು ರಾಷ್ಟ್ರ ಎಂದಿಗೂ ಮರೆಯುವುದಿಲ್ಲ” : ಪ್ರಧಾನಿ ಮೋದಿ -Vishwanews24

“ಭಾರತದಲ್ಲಿ ಹೇರಿದ್ದ ತುರ್ತು ಪರಿಸ್ಥಿತಿಯ ಕರಾಳ ದಿನವನ್ನು ರಾಷ್ಟ್ರ ಎಂದಿಗೂ ಮರೆಯುವುದಿಲ್ಲ” : ಪ್ರಧಾನಿ ಮೋದಿ -Vishwanews24

ನವದೆಹಲಿ : ಒಂದು ಕುಟುಂಬದ ವಿರುದ್ಧದ ಧ್ವನಿಯನ್ನು ದಮನಗೊಳಿಸುವ ಹಿನ್ನಲೆಯಲ್ಲಿ ಭಾರತದಲ್ಲಿ ತುರ್ತು ಪರಿಸ್ಥಿತಿ ಹೇರಿದ್ದು, ಇದು ಸ್ವತಂತ್ರ ಭಾರತದ ಇತಿಹಾಸದಲ್ಲಿ ಒಂದು ಕರಾಳ ಅಧ್ಯಾಯವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಮೋದಿ, “ಭಾರತದಲ್ಲಿ ಹೇರಿದ್ದ ತುರ್ತು ಪರಿಸ್ಥಿತಿಯ ಕರಾಳ ದಿನವನ್ನು ರಾಷ್ಟ್ರ ಎಂದಿಗೂ ಮರೆಯುವುದಿಲ್ಲ” ಎಂದಿದ್ದಾರೆ.

“ನಾವು ಭಾರತದ ಪ್ರಜಾಪ್ರಭುತ್ವದ ಆಶಯವನ್ನು ಬಲಪಡಿಸಲು ಮತ್ತು ನಮ್ಮ ಸಂವಿಧಾನದಲ್ಲಿ ಪ್ರತಿಪಾದಿಸಿರುವ ಮೌಲ್ಯಗಳಿಗೆ ತಕ್ಕಂತೆ ಬದುಕಲು ಸಾಧ್ಯವಿರುವ ಎಲ್ಲವನ್ನೂ ಸಾಧ್ಯವಾಗಿಸಲು ಒಗ್ಗಟ್ಟಿನಿಂದ ಶ್ರಮಿಸಬೇಕು” ಎಂದು ಹೇಳಿದ್ದಾರೆ.

ಇನ್ನು ಪ್ರಧಾನಿ ಇಂದಿರಾಗಾಂಧಿ 1975ರಿಂದ 1977ರವರೆಗೆ 21 ತಿಂಗಳ ಅವಧಿ ಕಾಲ ತುರ್ತು ಪರಿಸ್ಥಿತಿ ಘೋಷಿಸಿದ್ದರು. ಆಂತರಿಕ ಸಮಸ್ಯೆಯನ್ನು ನಿಯಂತ್ರಣದಲ್ಲಿಡುವ ನಿಟ್ಟಿನಲ್ಲಿ ಅಂದಿನ ರಾಷ್ಟ್ರಪತಿ ಫಕ್ರುದ್ದೀನ್ ಅಲಿ ಅಹ್ಮದ್ ಅವರು ಸಂವಿಧಾನದ 352ನೇ ವಿಧಿ ಅನ್ವಯ ಅಧಿಕೃತವಾಗಿ ತುರ್ತು ಪರಿಸ್ಥಿತಿ ಘೋಷಿಸಿದ್ದು, 1975ರ ಜೂನ್ 25ರಿಂದ 1977ರ ಮಾರ್ಚ್ 21ರಂದು ಆದೇಶ ಹಿಂಪಡೆಯುವವರೆಗೂ ಜಾರಿಯಲ್ಲಿತ್ತು ಎಂದು ವರದಿ ವಿವರಿಸಿದೆ.

Vishwa News 24

Recent Posts

ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ -vishwanews24

ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ ಬೆಂಗಳೂರು: ಮಟನ್ ಶಾಪ್ ನಲ್ಲಿ ಎಂಡಿಎಂಎ ಮಾದಕ…

6 hours ago

ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ -vishwanews24

ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ ಕಾರ್ಕಳ : ಮನೆ ವಿಚಾರದಲ್ಲಿ ತಂದೆಯೊಬ್ಬ ತನ್ನ…

8 hours ago

ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ -vishwanews24

ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ ಮಂಗಳೂರು: ಮೈಸೂರು ದಸರಾ 2026ರ ಅಂಗವಾಗಿ ಮೊದಲ ಬಾರಿಗೆ ಅದ್ದೂರಿಯಾಗಿ ಆಯೋಜಿಸಲಾಗುತ್ತಿರುವ…

8 hours ago

ಸೌಜನ್ಯಾ ಪ್ರಕರಣ: ಎಸ್‌ಐಟಿಯಲ್ಲಿರುವ ಎಲ್ಲ ಅಧಿಕಾರಿಗಳು ಪರಿಪೂರ್ಣರಾಗಿಲ್ಲ ಎಂಬ ಸಂಶಯವಿದೆ : ಕಲ್ಲಡ್ಕ ಪ್ರಭಾಕರ ಭಟ್‌ -vishwanews24

ಸೌಜನ್ಯಾ ಪ್ರಕರಣ: ಎಸ್‌ಐಟಿ ತಂಡದ ಬಗ್ಗೆ ಕಲ್ಲಡ್ಕ ಪ್ರಭಾಕರ ಭಟ್‌ ಅಸಮಾಧಾನ ಬಂಟ್ವಾಳ: ಸೌಜನ್ಯಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮರುತನಿಖೆಗೆ…

8 hours ago

ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ

ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ ಬೆಂಗಳೂರು: ನವರಾತ್ರಿ ಹಬ್ಬದ ಸಂದರ್ಭದಲ್ಲಿ ರಾಜ್ಯದ ‘ಗೃಹಲಕ್ಷ್ಮಿ’…

8 hours ago

ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು -vishwanews24

ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು ಬಂಟ್ವಾಳ : ವಾರಾಂತ್ಯದ ರಜೆಯ ಹಿನ್ನೆಲೆಯಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿವಾರಿಸಲು…

9 hours ago