ಭಾರತದೊಳಗೆ ಪ್ರವೇಶಿಸಿದ ಪಾಕಿಸ್ತಾನ ಮತ್ತು ಬಾಂಗ್ಲಾದೇಶ ಮುಸಲ್ಮಾನರನ್ನು ದೇಶದಿಂದ ಹೊರಗಟ್ಟಬೇಕು : ಶಿವಸೇನೆ -Vishwanews24

ಮುಂಬೈ: ಭಾರತದೊಳಗೆ ಪ್ರವೇಶಿಸಿದ ಪಾಕಿಸ್ತಾನ ಮತ್ತು ಬಾಂಗ್ಲಾದೇಶ ಮುಸಲ್ಮಾನರನ್ನು ದೇಶದಿಂದ ಹೊರಗಟ್ಟಬೇಕು ಎಂದು ಶಿವಸೇನೆ ಹೇಳಿದೆ.

“ಯಾರು ವಿರೋಧ ಮಾಡಿದರೂ ನೆರೆ ರಾಷ್ಟ್ರಗಳಿಂದ ಭಾರತಕ್ಕೆ ವಲಸೆ ಬಂದಿರುವ ಮುಸ್ಲಿಮರನ್ನು ಹೊರಗಟ್ಟಬೇಕು ಅನ್ನುವ ವಿಚಾರದಲ್ಲಿ ಬೇರೆ ಮಾತಿಲ್ಲ. ಹಿಂದುತ್ವಕ್ಕಾಗಿ ಶಿವಸೇನೆ ಹೋರಾಟ ಮಾಡುತ್ತಾ ಬಂದಿದೆ. ಆದರೆ ಪೌರತ್ವ ತಿದ್ದುಪಡಿ ಕಾಯ್ದೆಯಲ್ಲಿ ಹಲವು ದೋಷಗಳು ಇರುವ ಹಿನ್ನಲೆಯಲ್ಲಿ ಶಿವಸೇನೆ ಈ ಕಾಯ್ದೆಯನ್ನು ವಿರೋಧ ಮಾಡುತ್ತಿದೆ” ಎಂದು ಹೇಳಿದೆ.

ಪಾಕಿಸ್ತಾನ ಮತ್ತು ಬಾಂಗ್ಲಾದೇಶದಿಂದ ದೇಶದೊಳಗೆ ಅಕ್ರಮವಾಗಿ ಒಳನುಸುಳಿದ ಪಾಕಿಸ್ತಾನೀಯರನ್ನು ದೇಶದಿಂದ ಹೊರಹಾಕಲು ಫೆಬ್ರವರಿ 9ರಂದು ಮುಂಬೈಯಲ್ಲಿ ಬೃಹತ್ ರ್ಯಾಲಿ ನಡೆಸಲಾಗುವುದು ಎಂದು ಮಹಾರಾಷ್ಟ್ರ ನವನಿರ್ಮಾಣ ಸೇನೆಯ(ಎಂಎನ್ಎಸ್) ಮುಖ್ಯಸ್ಥ ರಾಜ್ ಠಾಕ್ರೆ ಹೇಳಿದ ನಂತರ ಪಕ್ಷ ತನ್ನ ಮುಖವಾಣಿ ಸಾಮ್ನಾದಲ್ಲಿ ಈ ರೀತಿ ಹೇಳಿದೆ.

ಪೌರತ್ವ ತಿದ್ದುಪಡಿ ಕಾಯ್ದೆ ಮತ್ತು ಹಿಂದುತ್ವ ಬಗ್ಗೆ ರಾಜ್ ಠಾಕ್ರೆ ನಿಲುವಿನಲ್ಲಿ ಆದ ಬದಲಾವಣೆ ಬಗ್ಗೆ ಸಹ ಸಾಮ್ನಾದಲ್ಲಿ ಶಿವಸೇನೆ ಕಿಡಿಕಾರಿದೆ.

 

”’ಈಗ ಎಂಎನ್ಎಸ್  ಸಿಎಎಗೆ ಬೆಂಬಲ ನೀಡುತ್ತಿದೆ ಎಂದಿದೆ. ಒಂದು ತಿಂಗಳ ಹಿಂದೆ ಅದು ವಿರೋಧ ವ್ಯಕ್ತಪಡಿಸುತ್ತಿತ್ತು. ನಮ್ಮ ಪಕ್ಷ ಹಿಂದುತ್ವ ಬಗ್ಗೆ ಯಾವತ್ತಿಗೂ ತನ್ನ ತತ್ವ, ಸಿದ್ದಾಂತದಲ್ಲಿ ಬದಲಾವಣೆ ಮಾಡಿಕೊಂಡಿಲ್ಲ. ಮರಾಠಿಗರ ಪರವಾಗಿ ಕೆಲಸ ಮಾಡುವುದೇ ನಮ್ಮ ಗುರಿಯಾಗಿದೆ. ಹೀಗಾಗಿಯೇ ರಾಜ್ಯದ ಜನತೆ ನಮ್ಮನ್ನು ಸ್ವೀಕರಿಸಿ ಅಧಿಕಾರ ನೀಡಿದ್ದಾರೆ, ರಾಜ್ ಠಾಕ್ರೆ ನಿಲುವಿನಲ್ಲಿ ಆದ ಬದಲಾವಣೆಯನ್ನು ಜನರು ಒಪ್ಪುತ್ತಾರೆಯೇ, ಕೆಲವರು ಹಿಂದುತ್ವವನ್ನು ತಮ್ಮ ಲಾಭಕ್ಕೆ ಬಳಸಿಕೊಳ್ಳುತ್ತಾರೆ. ಕೆಲವು ಪಕ್ಷಗಳು ಈ ರೀತಿ ಮಾಡಿದರೂ ಅದನ್ನು ಒಪ್ಪಿಕೊಳ್ಳುವ ದೊಡ್ಡ ಗುಣ ನಮ್ಮಲ್ಲಿದೆ” ಎಂದು ಶಿವಸೇನೆ ಹೇಳಿದೆ.

 

ಇಲ್ಲಿಯವರೆಗೂ ಏಷ್ಟೋ ದೈವ ದೇವರು ಜ್ಯೋತಿಷ್ಯರಲ್ಲಿ ಕೇಳಿ ಸರಿಯಾದ ಪರಿಹಾರ ಸಿಗದೆ ನೊಂದಿದ್ದರೆ.ಅಂತಃಹ ಯಾವುದೇ ಕಠಿಣ ಸಮಸ್ಯೆ ಗಳಿದ್ದರು ಉತ್ತಮ ಸಲಹೆ ಹಾಗೂ ಶಾಶ್ವತ ಪರಿಹಾರ ತಿಳಿಸುತ್ತಾರೆ.

ಇಂದೇ ಸಂಪರ್ಕಿಸಿ ಪಂಡಿತ್ ವೈದಿಕ ಶ್ರೀ ಗಣಪತಿ ಭಟ್

8088827292

 

Vishwa News 24

Recent Posts

ಕಾರ್ಕಳ ಮಹಾಮಸ್ತಕಾಭಿಷೇಕ 2027 : ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ 1.59 ಕೋಟಿ ರೂ. ಮಂಜೂರು – vishwanews24

ಕಾರ್ಕಳ ಮಹಾಮಸ್ತಕಾಭಿಷೇಕ 2027 : ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ 1.59 ಕೋಟಿ ರೂ. ಮಂಜೂರು ಉಡುಪಿ: ಕಾರ್ಕಳದಲ್ಲಿ 2027ರಲ್ಲಿ ನಡೆಯಲಿರುವ…

16 hours ago

ಕಾಪು: ಕ್ಷುಲ್ಲಕ ವಿಚಾರಕ್ಕೆ ಪತಿಯೊಂದಿಗೆ ಜಗಳವಾಡಿ ಅಪ್ರಾಪ್ತ ಮಗಳೊಂದಿಗೆ ಮಹಿಳೆ ನಾಪತ್ತೆ – vishwanews24

ಕಾಪು: ಕ್ಷುಲ್ಲಕ ವಿಚಾರಕ್ಕೆ ಪತಿಯೊಂದಿಗೆ ಜಗಳವಾಡಿ ಅಪ್ರಾಪ್ತ ಮಗಳೊಂದಿಗೆ ಮಹಿಳೆ ನಾಪತ್ತೆ ಕಾಪು: ಕ್ಷುಲ್ಲಕ ಕಾರಣಕ್ಕಾಗಿ ಪತಿಯೊಂದಿಗೆ ಜಗಳವಾಡಿ ಬಳಿಕ…

16 hours ago

ಖಾಲಿ ಹೊಟ್ಟೆಯಲ್ಲಿ ಎಳನೀರು ಕುಡಿಯುವುದು ನಿಮ್ಮ ದೇಹದ ಮೇಲೆ ಯಾವ ರೀತಿ ಪರಿಣಾಮ ಬೀರುತ್ತದೆ ಎಂದು ತಿಳಿದುಕೊಳ್ಳಿ – vishwanews24

ಖಾಲಿ ಹೊಟ್ಟೆಯಲ್ಲಿ ಎಳನೀರು ಕುಡಿಯುವುದು ಒಳ್ಳೆಯದೋ? ಅಥವಾ ಕೆಟ್ಟದೋ? ಬೆಳಿಗ್ಗೆ ಖಾಲಿ ಹೊಟ್ಟೆಗೆ ಎಳನೀರು ಕುಡಿಯುವುದರಿಂದಾಗುವ ಪ್ರಯೋಜನಗಳೇನು ಗೊತ್ತಾ? ಇದು ನಿಮ್ಮ…

16 hours ago

ಕಾಪು: ತಮಿಳುನಾಡು ದೋಣಿ ಡಿಕ್ಕಿ ; ಸ್ಥಳೀಯ ನಾಡದೋಣಿ ಮುಗುಚಿ ಬಿದ್ದು ಮೀನುಗಾರ ನಾಪತ್ತೆ – vishwanews24

ಕಾಪು: ತಮಿಳುನಾಡು ಮೂಲದ ದೋಣಿ ಡಿಕ್ಕಿ ; ಸ್ಥಳೀಯ ನಾಡದೋಣಿ ಮುಗುಚಿ ಮೀನುಗಾರ ನಾಪತ್ತೆ  ಕಾಪು: ಕಾಪು ಕಡಲ ಕಿನಾರೆಯಲ್ಲಿ…

17 hours ago

ಭೀಕರ ರಸ್ತೆ ಅಪಘಾತ : ‘ಹಳ್ಳಿ ಹೈದ ಪ್ಯಾಟೆಗೆ ಬಂದ’ ಸೀಸನ್-3ರ ಸ್ಪರ್ಧಿ ಬಾವತೀಶ್ ಸಾವು – vishwanews24

ಭೀಕರ ರಸ್ತೆ ಅಪಘಾತ : ‘ಹಳ್ಳಿ ಹೈದ ಪ್ಯಾಟೆಗೆ ಬಂದ’ ಸೀಸನ್-3ರ ಸ್ಪರ್ಧಿ ಬಾವತೀಶ್ ಸಾವು ಯಲ್ಲಾಪುರ : ಉತ್ತರ ಕನ್ನಡ…

19 hours ago

ಕುಂದಾಪುರ: ರಸ್ತೆ ಅಪಘಾತ ; ಗಾಣಿಗ ಸಂಘದ ಮಾಜಿ ಅಧ್ಯಕ್ಷ ಶ್ರೀನಿವಾಸ ಗಾಣಿಗ ಸಾವು – vishwanews24

ಕುಂದಾಪುರ: ರಸ್ತೆ ಅಪಘಾತ ; ಗಾಣಿಗ ಸಂಘದ ಮಾಜಿ ಅಧ್ಯಕ್ಷ ಶ್ರೀನಿವಾಸ ಗಾಣಿಗ ಸಾವು ಕುಂದಾಪುರ: ಇಲ್ಲಿನ ರಾಷ್ಟ್ರೀಯ ಹೆದ್ದಾರಿ…

19 hours ago