Featured

ಭಾರತದ ಟಾಪ್ 10 ನಟರಲ್ಲಿ 5ನೇ ಸ್ಥಾನದಲ್ಲಿ ಕನ್ನಡದ ರಾಕಿಭಾಯ್ – Vishwanews24

ಭಾರತದ ಟಾಪ್ 10 ನಟರಲ್ಲಿ 5ನೇ ಸ್ಥಾನದಲ್ಲಿ ಕನ್ನಡದ ರಾಕಿಭಾಯ್

ಈವರೆಗೂ ಭಾರತದ ಟಾಪ್ ನಟರ ಸ್ಥಾನದಲ್ಲಿ ಕನ್ನಡದ ನಟರಿಗೆ ಯಾವ ಸ್ಥಾನಗಳು ದೊರೆಯುತ್ತಿರಲಿಲ್ಲ. ಕೇವಲ ಬಾಲಿವುಡ್ ನಟರು ಮಾತ್ರ ಆ ಸ್ಥಾನಗಳಲ್ಲಿ ಮೆರೆಯುತ್ತಿದ್ದರು, ಹೆಚ್ಚೆಂದರೆ ತಮಿಳು ಮತ್ತು ತೆಲುಗು ನಟರು ಇರುತ್ತಿದ್ದರು. ಇದೀಗ ಕನ್ನಡದ ನಟರಿಗೂ ಅಲ್ಲಿ ಸ್ಥಾನ ಸಿಗುತ್ತಿದೆ. ಕೆಜಿಎಫ್ ಸಿನಿಮಾವೊಂದು ಇಂತಹ ಸ್ಥಾನ ದೊರೆಕಿಸಿ ಕೊಡಲು ಯಶ್  ಗೆ ನೆರವಾಗಿದೆ. ಹಾಗಾಗಿ ಯಶ್ ಭಾರತೀಯ ಟಾಪ್ ನಟರ ಯಾದಿಯಲ್ಲಿ ಕಾಣಿಸಿಕೊಂಡಿದ್ದಾರೆ.

ಪ್ರತಿ ವರ್ಷವೂ ಕೆಲ ಸಂಸ್ಥೆಗಳು ಭಾರತದ ಟಾಪ್ ನಟರ ಲಿಸ್ಟ್ ಅನ್ನು ಬಿಡುಗಡೆ ಮಾಡುತ್ತವೆ. ಈ ಬಾರಿ ಆಮ್ಯಾರ್ಕ್ಸ್ ಸಂಸ್ಥೆಯು ಟಾಪ್ ನಟರ ಪಟ್ಟಿಯನ್ನು ರಿಲೀಸ್ ಮಾಡಿದ್ದು, ದಳಪತಿ ವಿಜಯ್  ಟಾಪ್ 1 ಸ್ಥಾನವನ್ನು ಪಡೆದುಕೊಂಡಿದ್ದರೆ, ಯಶ್ ಗೆ ಟಾಪ್ 5 ಸ್ಥಾನ ಸಿಕ್ಕಿದೆ. ಪ್ರಭಾಸ್  ಎರಡನೇ ಸ್ಥಾನ, ಜ್ಯೂನಿಯರ್ ಎನ್.ಟಿ.ಆರ್ ಮೂರನೇ ಸ್ಥಾನ ಹಾಗೂ ಅಲ್ಲು ಅರ್ಜುನ್ ನಾಲ್ಕನೇ ಸ್ಥಾನವನ್ನು ಪಡೆಯುವ ಮೂಲಕ ಟಾಪ್ 5 ಪಟ್ಟಿಯಲ್ಲಿ ದಕ್ಷಿಣದವರಿಗೆ ಸ್ಥಾನ ಸಿಕ್ಕಿದೆ.

ಇದನ್ನೂ ಓದಿ : ಅನವಶ್ಯಕ ಚರ್ಚೆ ಬೇಡ, ಸಹನೆಯನ್ನು ಕಾಪಾಡಿ..ನೋಡಿ ಇಂದಿನ ದಿನ ಭವಿಷ್ಯ..ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564

ಮತ್ತೊಂದು ಅಚ್ಚರಿಯ ಸಂಗತಿಯಂದರೆ, ಬಾಲಿವುಡ್ ನಟರಲ್ಲಿ ಕೇವಲ ಅಕ್ಷಯ್ ಕುಮಾರ್ ಗೆ ಮಾತ್ರ ಸ್ಥಾನ ದೊರೆತಿದ್ದು ಆರನೇ ಸ್ಥಾನದಲ್ಲಿ ಅಕ್ಷಯ್ ಕಾಣಿಸಿಕೊಂಡಿದ್ದಾರೆ. ಉಳಿದಂತೆ ಬಾಲಿವುಡ್ ನ ಖ್ಯಾತ ನಟರು ದೂರವೇ ಉಳಿಯುವ ಮೂಲಕ ಅಭಿಮಾನಿಗಳಿಗೆ ಶಾಕ್ ನೀಡಿದ್ದಾರೆ. ಅಲ್ಲಿಗೆ ದಕ್ಷಿಣದವರೇ ಪ್ರಾಬಲ್ಯ ಮೆರೆದಿದ್ದಾರೆ. ಖಾನ್ ಪಡೆಯ ಒಬ್ಬನೇ ಒಬ್ಬ ನಟನೂ ಕೂಡ ಈ ಯಾದಿಯಲ್ಲಿ ಕಾಣಿಸಿಕೊಳ್ಳದೇ ಇರುವುದು ಅಚ್ಚರಿಗೆ ಕಾರಣವಾಗಿದೆ.

ಕೆಜಿಎಫ್ ಸಿನಿಮಾದ ಮೂಲಕ ಭಾರತೀಯ ಸಿನಿಮಾ ರಂಗದ ಗತಿಯನ್ನೇ ಬದಲಿಸಿರುವ ಯಶ್, ಯಾವುದೇ ಸಂಸ್ಥೆಗಳು ಟಾಪ್  ಪಟ್ಟಿಯನ್ನು ಬಿಡುಗಡೆ ಮಾಡಿದರೂ, ಅದರಲ್ಲಿ ಒಂದು ಸ್ಥಾನವನ್ನು ಪಡೆದುಕೊಳ್ಳುವ ಮೂಲಕ ಕನ್ನಡದ ಹಿರಿಮೆಯನ್ನು ಹೆಚ್ಚಿಸುತ್ತಿದ್ದಾರೆ.

ಇದನ್ನೂ ಓದಿ : ಮಲ್ಪೆ: ಅಪಾರ್ಟ್ಮೆಂಟ್ ನ ಮಹಡಿಯಲ್ಲಿ ಜೇನು ತೆಗೆಯುವುದನ್ನು ನೋಡುತ್ತಿದ್ದ ಬಾಲಕ ಮಹಡಿಯಿಂದ ಆಯತಪ್ಪಿ ಬಿದ್ದು ಸಾವು – Vishwanews24

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

2 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

2 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

2 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

2 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

2 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

2 days ago