ನವದೆಹಲಿ : ಪಾಕಿಸ್ತಾನದಲ್ಲಿ ಸೋಮವಾರ ನಡೆದಿದ್ದ ಮಹಾಚುನಾವಣೆಯಲ್ಲಿ ಹಾಲಿ ರಾಜಕಾರಣಿ ಹಾಗೂ ಮಾಜಿ ಕ್ರಿಕೆಟಿಗ ಇಮ್ರಾನ್ ಖಾನ್ ಪಾಕಿಸ್ತಾನದ ಹೊಸ ಪ್ರಧಾನಿಯಾಗುವತ್ತ ದಾಪುಗಾಲಿಡುತ್ತಿದ್ದಾರೆ. ಪಾಕಿಸ್ತಾನ ಸಾರ್ವತ್ರಿಕ ಚುನಾವಣೆಯಲ್ಲಿ ಇಮ್ರಾನ್ ಸಾರಥ್ಯದ ಪಾಕಿಸ್ತಾನ ತೆಹ್ರಿಕ್-ಎ-ಇನ್ಸಾಫ್ ಪಕ್ಷ ಮುನ್ನಡೆ ಸಾಧಿಸಿದ್ದು, ಬಹುಮತ ಪಡೆಯುವುದು ನಿಚ್ಚಳವಾದ ಬೆನ್ನಲ್ಲೇ ಇಮ್ರಾನ್ ಖಾನ್ ಬೆಂಬಲಿಗರು ಭಾರತದ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಕಿಡಿಕಾರಿದ್ದಾರೆ.
ಈ ಬಗ್ಗೆ ಪ್ರತಿಕ್ರಿಯಿಸಿ, ಕಾರ್ಗಿಲ್ ವಿಜಯ್ ದಿವಾಸ್ ಆಚರಣೆಯಲ್ಲಿ ಮಾತನಾಡಿದ ಭಾರತೀಯ ಸೇನೆಯ ಲೆಫ್ಟಿನೆಂಟ್ ಜನರಲ್ ರಣಬೀರ್ ಸಿಂಗ್ ಅವರು ಪಾಕಿಸ್ತಾನದಲ್ಲಿ ಯಾರು ಸರ್ಕಾರ ಮಾಡುತ್ತಾರೆ ಎಂದು ಅಲ್ಲಿನ ಜನರು ನಿರ್ಧರಿಸುತ್ತಾರೆ.ಕಾರ್ಗಿಲ್ ಯುದ್ಧದ ನಂತರ ಯಾವ ರೀತಿ ರಾಜಕೀಯ ಸ್ಥಿತಿಗತಿಗಳು ಬದಲಾಗಿವೆ ಎಂಬುವುದು ನಮ್ಮ ಕಣ್ಣ ಮುಂದೆ ಇದೆ.ಭಾರತೀಯ ಸೇನೆ ಎಲ್ಲಾ ರೀತಿಯ ತುರ್ತು ಪರಿಸ್ಥಿತಿಯನ್ನು ಎದುರಿಸಲು ಸಿದ್ಧವಾಗಿದೆ. ಭಾರತದ ತಂಟೆಗೆ ಬಂದರೆ ವಿರೋಧಿಗಳನ್ನು ಪುಡಿ ಪುಡಿಗೈಯಲಾಗುವುದು ಎಂದು ಪಾಕಿಸ್ತಾನಕ್ಕೆ ಪರೋಕ್ಷವಾದ ಎಚ್ಚರಿಕೆಯನ್ನು ರಣಬೀರ್ ಸಿಂಗ್ ನೀಡಿದ್ದಾರೆ.
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…