ಕಲಬುರಗಿ: ಭಾರತದ ಪ್ರಧಾನಿಯಾಗಲು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಸೂಕ್ತವಲ್ಲ. ಅವರು ಇನ್ನೂ ಪ್ರಧಾನಿಯಾಗುವ ಮಟ್ಟಿಗೆ ಸಿದ್ಧವಾಗಿಲ್ಲ ಎಂದು ಕಾಂಗ್ರೆಸ್ ಮಾಜಿ ಸಚಿವ ಮಾಲಕರೆಡ್ಡಿ ನೀಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೇಶದ ಪ್ರಧಾನಿ ಹುದ್ದೆಗೆ ರಾಹುಲ್ ಸೂಕ್ತವಲ್ಲ. ಅವರು ಪ್ರಧಾನಿ ಹುದ್ದೆ ನಿರ್ವಹಿಸಲು ಸಿದ್ಧರಾಗಿಲ್ಲ. ದೇಶದ ರಕ್ಷಣೆ ಮುಖ್ಯ, ಸದ್ಯ ಇರುವ ಪರಿಸ್ಥತಿಯಲ್ಲಿ ಮೋದಿ ಅವರು ದೇಶದ ರಕ್ಷಣಾ ವಿಚಾರದಲ್ಲಿ ಉತ್ತಮವಾಗಿ ಕೆಲಸ ಮಾಡಿದ್ದಾರೆ. ಈ ವಿಷಯದಲ್ಲಿ ನಾನು ಪ್ರಧಾನಿ ಮೋದಿಯನ್ನು ಬೆಂಬಲಿಸುತ್ತೆನೆ. ರಾಷ್ಟ್ರ ಮಟ್ಟದಲ್ಲಿ ರಾಜಕಾರಣ ಮಾಡಿ ಅನುಭವವಿರುವ ನಾಯಕರೇ ಮೋದಿ ನಾಯಕತ್ವವನ್ನು ಒಪ್ಪಿದ್ದಾರೆ ಎಂದು ಹೇಳಿದರು.
ನಾನು ಕಾಂಗ್ರೆಸ್ ಬಿಡುವುದಿಲ್ಲ. ಅನಾರೋಗ್ಯದ ಕಾರಣದಿಂದ ಚುನಾವಣೆ ವಿಚಾರದಲ್ಲಿ ದೂರವಿದ್ದೇನೆ ಎಂದು ಹೇಳಿದರು.
ಸೋನಿಯಾ ಗಾಂಧಿ ಅವರಿಗೆ ರಾಜಕೀಯದ ಮೇಲಿದ್ದ ಜಾಣ್ಮೆ ರಾಹುಲ್ ಅವರಲ್ಲಿ ನಾನು ಕಂಡಿಲ್ಲ. ಅವರು ಇನ್ನೂ ರಾಜಕೀಯದಲ್ಲಿರುವ ಅನುಭವ ಸಾಲದು. ನಾನು ಖರ್ಗೆ ಪರ ಪ್ರಚಾರ ಮಾಡಲ್ಲ, ಪಕ್ಷದ ಪರವಾಗಿ ಪ್ರಚಾರ ಮಾಡುತ್ತೆನೆ. ಯಾಕೆಂದರೆ ಇತ್ತೀಚಿಗೆ ಕ್ಷೇತ್ರದಲ್ಲಿ ಖರ್ಗೆಯವರ ವರ್ಚಸ್ಸು ಕಡಿಮೆ ಆಗಿದೆ. ಅದಕ್ಕಾಗಿ ಖರ್ಗೆ ಆಪ್ತರು ಅವರನ್ನು ಬಿಟ್ಟು ಹೋಗುತ್ತಿದ್ದಾರೆ. ನಾನು ಖರ್ಗೆಯ ನಾಯಕತ್ವ ಸಹ ಒಪ್ಪಲ್ಲ ನಾಯಕತ್ವದ ಬಗ್ಗೆ ಬೇಸರ ವ್ಯಕ್ತಪಡಿಸಿದರು.
ಸೆ.25ರಂದು ಉಚ್ಚಿಲದಲ್ಲಿ ಮೊಗವೀರ ಕುಲಗುರು ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಡುಪಿ: ದಕ್ಷಿಣ ಕನ್ನಡ ಮೊಗವೀರ ಮಹಾಜನ…
ಕಾಲೇಜು ಶೈಕ್ಷಣಿಕ ಪ್ರವಾಸದಲ್ಲಿ ಸೆಲ್ಫಿ, ರೀಲ್ಸ್‌ಗೆ ಸಂಪೂರ್ಣ ನಿಷೇಧ - ಶಿಕ್ಷಣ ಇಲಾಖೆಯಿಂದ ಕಟ್ಟುನಿಟ್ಟಿನ ಮಾರ್ಗಸೂಚಿ! ಬೆಂಗಳೂರು : ವಿದ್ಯಾರ್ಥಿಗಳ…
ಕರ್ನಾಟಕದಲ್ಲಿ ಸೆ.30ರಿಂದ ಸಿನೆಮಾ ಟಿಕೆಟ್ ದರ ಏರಿಕೆ ಬೆಂಗಳೂರು: ಕರ್ನಾಟಕ ಸಿನಿ ಮತ್ತು ಸಾಂಸ್ಕೃತಿಕ ಕಾರ್ಯಕರ್ತರ (ಕ್ಷೇಮಾಭಿವೃದ್ಧಿ) ಕಾಯ್ದೆ ಜಾರಿಗೊಂಡಿರುವ…
ಶೃಂಗೇರಿ: ತುಂಗಾ ನದಿಯಲ್ಲಿ ಈಜಲು ತೆರಳಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿ ನೀರುಪಾಲು ಬೆಂಗಳೂರಿನಿಂದ ಆಗಮಿಸಿದ್ದ ನಾಲ್ವರು ಸ್ನೇಹಿತರು ಚಿಕ್ಕಮಗಳೂರು: ತುಂಗಾ ನದಿಯಲ್ಲಿ…
ಸಂಪಾದನೆ ಮಾಡಿರೋ ಹಣವನ್ನ ಜನರಿಗೆ ಕೊಟ್ರೆ 2028ಕ್ಕೂ ಡಿಕೆ ಶಿ ಸಿಎಂ ಆಗಬಹುದು : ಹೆಚ್.ಡಿ ಕುಮಾರಸ್ವಾಮಿ ಬೆಂಗಳೂರು: ಡಿಕೆ…
ತುಳು ಭಾಷೆಗೆ ಅಧಿಕೃತ ಮಾನ್ಯತೆ: ದಶಕಗಳ ಹೋರಾಟಕ್ಕೆ ಡಿ.ಕೆ. ಶಿವಕುಮಾರ್ ಅವರಿಂದ ಫಲ ಸಿಕ್ಕಿದೆ : ರಮೇಶ್ ಕಾಂಚನ್ ಉಡುಪಿ:…