ಯಮನಶಿ(ಜಪಾನ್)/: “ಭಾರತದ ಪ್ರಧಾನಿ ಮೋದಿ ನನ್ನ ಅತ್ಯಂತ ಭರವಸೆಯ ಗೆಳೆಯ…’ ಇದು ಜಪಾನ್ ಪ್ರಧಾನಿ ಶಿಂಜೋ ಅಬೆ ಅವರು ಮೋದಿ ಕುರಿತಂತೆ ಮಾಡಿರುವ ಗುಣಗಾನ. ಭಾರತವನ್ನು ಎಂದಿಗೂ ಮರೆಯಲಾಗುವುದಿಲ್ಲ ಎಂದಿರುವ ಅಬೆ, ತಮ್ಮ ಅಜ್ಜನ ಕಾಲದಿಂದಲೂ ಈ ದೇಶ ನನ್ನ ನೆಚ್ಚಿನದ್ದಾಗಿದೆ ಎಂದಿದ್ದಾರೆ. 1957ರಲ್ಲಿ ಅಬೆ ಅವರ ತಾತ ನಬುಸುಕೆ ಕಿಶಿ ಅವರು ಜಪಾನ್ ಪ್ರಧಾನಿಯಾಗಿದ್ದ ವೇಳೆ ಭಾರತಕ್ಕೆ ಬಂದಿದ್ದರು. ಆಗ ಪ್ರಧಾನಿಯಾಗಿದ್ದ ಜವಾಹರ್ ಲಾಲ್ ನೆಹರೂ ಅವರು ತೋರಿದ್ದ ಪ್ರೀತಿಯನ್ನು ಮರೆಯಲು ಸಾಧ್ಯವೇ ಇಲ್ಲ ಎಂದು ಭಾರತದ ಪತ್ರಿಕೆಗಳಿಗೆ ನೀಡಿರುವ ಸಂದೇಶ ರೂಪದ ಜಾಹೀರಾತಿನಲ್ಲಿ ಕೊಂಡಾಡಿದ್ದಾರೆ.
ಭಾರತ ಮತ್ತು ಜಪಾನ್ ದೇಶಗಳು ಎಲ್ಲ ಕ್ಷೇತ್ರಗಳಲ್ಲೂ ಗೆಲ್ಲುವ ಸಾಮರ್ಥ್ಯ ಹೊಂದಿವೆ. ಭಾರತದ ಆರ್ಥಿಕ ಬೆಳವಣಿಗೆಗಾಗಿ ಎಲ್ಲ ರೀತಿಯ ನೆರವು ನೀಡುವುದಾಗಿ ಹೇಳಿದ ಅಬೆ ಅವರು, ಮೋದಿ ಅವರ ಮೇಕ್ ಇನ್ ಇಂಡಿಯಾಗಾಗಿ ಸಹಾಯ ಒದಗಿಸುವ ಭರವಸೆ ನೀಡಿದರು. ಇದಕ್ಕೆ ಹೈಸ್ಪೀಡ್ ರೈಲು, ಸಬ್‌ವೇಗಳು, ಇತರ ಮೂಲಸೌಕರ್ಯ, ಜಪಾನ್‌ನ ತಂತ್ರಜ್ಞಾನವನ್ನು ಪಸರಿಸುವ ಕೆಲಸ ಮಾಡುತ್ತೇವೆ ಎಂದೂ ಹೇಳಿದರು. ಮುಂಬಯಿ-ಅಹ್ಮದಾಬಾದ್‌ನ ಬುಲೆಟ್ ಟ್ರೈನ್ ಯೋಜನೆ ಮುಗಿದ ಮೇಲೆ ಭಾರತ-ಜಪಾನ್ ನಡುವೆ ಹೊಸ ಅಧ್ಯಾಯವೇ ಶುರುವಾಗಲಿದೆ ಎಂದೂ ಅಬೆ ಹೇಳಿದ್ದಾರೆ.
ಮೈಸೂರು: ಕಾಲೇಜು ಕ್ಯಾಂಪಸ್ನಲ್ಲೇ ಹೃದಯಾಘಾತ ; ಕುಸಿದುಬಿದ್ದು ವಿದ್ಯಾರ್ಥಿ ಸಾವು ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನ ಖ್ಯಾತ ಮರಿಮಲ್ಲಪ್ಪ ಕಾಲೇಜು…
ಅಡ್ಡ ಮತದಾನ ಮೂಲಕ ಪಕ್ಷಕ್ಕೆ ಹಾಗೂ ಮೈತ್ರಿಗೆ ದ್ರೋಹ ಬಗೆದವರನ್ನು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ : ವಿಜಯೇಂದ್ರ ಆಕ್ರೋಶ ಬೆಂಗಳೂರು:…
ಭಟ್ಕಳ ಲವ್ ಜಿಹಾದ್ ಆರೋಪ : ಯುವಕ ಅರೆಸ್ಟ್ ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ ಕಿಚ್ಚು ಹಚ್ಚಿದ ಹಿಂದೂ,…
ಪರಿಷತ್ ಚುನಾವಣೆಯಲ್ಲಿ ನಮಗೆ ಮತ ನೀಡಿದ ಬೇರೆ ಪಕ್ಷದ ವಿಶ್ವಾಸವನ್ನುನಾವು ಉಳಿಸಿಕೊಳ್ಳುತ್ತೇವೆ: ಡಿ.ಕೆ.ಶಿವಕುಮಾರ್ ಬೆಂಗಳೂರು: ವಿಧಾನ ಪರಿಷತ್ ಚುನಾವಣೆಯಲ್ಲಿ ನಮ್ಮ…
ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ: ಜೂ. 30ಕ್ಕೆ ಮುಂದೂಡಿಕೆ ದಾವಣಗೆರೆ: ಹರಿಹರದ ವಚನಾನಂದ ಸ್ವಾಮೀಜಿ ಪೋಕ್ಸೋ ಪ್ರಕರಣ ಆದೇಶವನ್ನು…
ವಿಟ್ಲ : ಲಾರಿಯಲ್ಲಿ ತಾಂತ್ರಿಕ ವೈಫಲ್ಯ - ಸರಿಪಡಿಸುವ ವೇಳೆ ಚಕ್ರಗಳ ಅಡಿಗೆ ಸಿಲುಕಿ ಚಾಲಕ ಸ್ಥಳದಲ್ಲೇ ಮೃತ್ಯು ವಿಟ್ಲ:…