Featured

ಭಾರತದ ಪ್ರಧಾನಿ ಹಾಗೂ ಪಾಕ್ ಪ್ರಧಾನಿ ನಡುವೆ ಯಾವುದೇ ವ್ಯತ್ಯಾಸವಿಲ್ಲ, ಇಬ್ಬರೂ ಒಂದೇ ತಾಯಿಯ ಮಕ್ಕಳು ಇದ್ದಂತೆ :  ಬಿ.ರಮಾನಾಥ ರೈ -Vishwanews24

ಮಂಗಳೂರು: ಪ್ರಧಾನಿ ನರೇಂದ್ರ ಮೋದಿ ಹಾಗೂ ಪಾಕಿಸ್ತಾನದ ಪ್ರಧಾನಿ ಇಮ್ರಾನ್ ಖಾನ್ ನಡುವೆ ಯಾವುದೇ ವ್ಯತ್ಯಾಸವಿಲ್ಲ. ಇಬ್ಬರೂ ಒಂದೇ ಮನೋಭಾವ ಹೊಂದಿರುವ, ಒಂದೇ ತಾಯಿಯ ಮಕ್ಕಳು ಇದ್ದಂತೆ ಎಂದು ಮಾಜಿ ಸಚಿವ ಬಿ.ರಮಾನಾಥ ರೈ ವಾಗ್ದಾಳಿ ನಡೆಸಿದರು.

ಮಂಗಳೂರಿನ ಕಾಂಗ್ರೆಸ್ ‌ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸಸಿಕಾಂತ್ ಸೆಂಥಿಲ್ ಅವರಿಗೆ ದೇಶದ ಆಡಳಿತ ಯಂತ್ರದ ಬಗ್ಗೆ ಅಸಮಾಧಾನವಿದೆ. ಸೆಂಥಿಲ್ ಒಬ್ಬ ಪ್ರಾಮಾಣಿಕ ಮತ್ತು ಜನಪರ ಜಿಲ್ಲಾಧಿಕಾರಿ ಸೆಂಥಿಲ್ ರಾಜೀನಾಮೆ ವಿಚಾರದಲ್ಲಿ ಬಿಜೆಪಿ ರಾಜಕೀಯ ಮಾಡುತ್ತಿದೆ. ಡಿ.ಕೆ.ರವಿ ಆತ್ಮಹತ್ಯೆ ಆದಾಗ ರಾಜಕೀಯ ಮಾಡಿದ್ದು ಬಿಜೆಪಿ, ಸಾವಿನಲ್ಲಿ ಕೀಳು ಮಟ್ಟದ ರಾಜಕೀಯ ಈ ಜಿಲ್ಲೆಯಲ್ಲಿ ಮಾಡಿದ್ದು ಬಿಜೆಪಿ ಪಕ್ಷ. ನಾವು ಉತ್ತಮ ಅಧಿಕಾರಿ ಸೆಂಥಿಲ್ ಇರಬೇಕು ಅಂತ ಪ್ರತಿಭಟನೆ ಮಾಡಿದ್ದೇವೆ.

ಇನ್ನು ಅಕ್ರಮ ಮರಳುಗಾರಿಕೆ ವಿಚಾರದಲ್ಲಿ ಡಿಸಿ ತಮ್ಮ ಅಧಿಕಾರ ವ್ಯಾಪ್ತಿಯಲ್ಲಿ ‌ಕೆಲಸ ಮಾಡಿದ್ದಾರೆ. ಸೆಂಥಿಲ್ ‌ಪ್ರಾಮಾಣಿಕತೆ ಬಗ್ಗೆ ಈವರೆಗೆ ಯಾರೂ ಮಾತನಾಡಿಲ್ಲ ಆದ್ರೆ ಇನ್ನು ಕೇಂದ್ರ ಸರ್ಕಾರದ ವಿರುದ್ದ ಮಾತನಾಡಿದ್ದಕ್ಕೆ ಇಂಥ ಕುಕೃತ್ಯ ಶುರುವಾಗುತ್ತದೆ. ಲಾರಿ ‌ಮಾಲಕರ ಸಂಘ ಸೇರಿ ಬೇರೆ ರೀತಿಯಲ್ಲಿ ಆರೋಪಕ್ಕೆ ಸಂಘಟನೆಗಳನ್ನ ಬಳಸಲಾಗುತ್ತದೆ ಈಗಾಗಲೇ ಸಸಿಕಾಂತ್ ಸೆಂಥಿಲ್ ಭ್ರಷ್ಟ ಜಿಲ್ಲಾಧಿಕಾರಿ ಎಂಬ ಪಟ್ಟವನ್ನು ಕಟ್ಟುತ್ತಿದ್ದು, ನಾವು ಈ ಮಾತನ್ನು ಒಪ್ಪಲ್ಲ, ಇದು ನಿರಾಧಾರ ಮೊನ್ನೆಯವರೆಗೆ ಬಿಜೆಪಿ ಮುಖಂಡರು ಕೂಡ ಸೆಂಥಿಲ್ ಒಳ್ಳೆಯ ಅಧಿಕಾರಿ ಅಂದಿದ್ದಾರೆ ಈಗ ಅವರನ್ನ ತಪ್ಪಿತಸ್ಥರು ಮಾಡುವ ಕೆಲಸ ನಡೆಯುತ್ತಿದೆ ಎಂದರು.

ಪ್ರಧಾನಿ ಮೋದಿ ಅವರು ತಮ್ಮ ಸ್ವಾರ್ಥ ಸಾಧನೆಗಾಗಿ ದೇಶವನ್ನೇ ಬಲಿ ಕೊಡುತ್ತಿದ್ದಾರೆ. ಇಂಥವರಿಂದ ಅಭಿವೃದ್ಧಿ ಬಯಸುವುದು ಕನಸಿನ ಮಾತು. ದೇಶದಲ್ಲಿ ಚುನಾವಣೆಯಲ್ಲಿ ಗೆಲುವು ಸಾಧಿಸಲು ನರೇಂದ್ರ ಮೋದಿ ಪಾಕಿಸ್ತಾನದ ವಿರುದ್ಧ ಪ್ರಚೋದನಕಾರಿ ಹೇಳಿಕೆ ನೀಡುತ್ತಿದ್ದರೆ, ಅತ್ತ ಪಾಕಿಸ್ತಾನದ ಪ್ರಧಾನಿ ಇಮ್ರಾನ್‌ ಖಾನ್ ಅವರು ಅದೇ ರೀತಿಯಲ್ಲಿ ಭಾರತವನ್ನು ಮೂದಲಿಸುತ್ತಾರೆ’ ಎಂದು ಹೇಳಿದರು.

‘ಹಿಂದುತ್ವದ ಹೆಸರಿನಲ್ಲಿ ಬಿಜೆಪಿ ಕೀಳುಮಟ್ಟದ ರಾಜಕಾರಣ ಮಾಡುತ್ತಿದೆ. ನಾವು ಹಿಂದೂಗಳೇ, ನಾವು ಹಿಂದುತ್ವದ ಮೇಲೆ ಅಪಾರ ನಂಬಿಕೆ ಇಟ್ಟವರು. ಅವರೊಬ್ಬರೇ ಹಿಂದೂವಲ್ಲ. ನಾವು ಕೂಡಾ ಹಿಂದುತ್ವದ ತಳಹದಿಯ ಆಧಾರದ ಮೇಲೆ ರಾಜಕಾರಣ ಮಾಡುತ್ತಿದ್ದೇವೆ’ ಎಂದರು.

Vishwa News 24

Recent Posts

ಬೆಳ್ತಂಗಡಿ:  ಚಲಿಸುತ್ತಿದ್ದ ಕೆಎಸ್ಸಾರ್ಟಿಸಿ ಬಸ್ಸಿನಿಂದ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ – vishwanews24

ಬೆಳ್ತಂಗಡಿ:  ಏಕಾಏಕಿ ತೆರೆಯಲ್ಪಟ್ಟ ಬಸ್ಸಿನ ಬಾಗಿಲು ; ನಿಯಂತ್ರಣ ತಪ್ಪಿ ರಸ್ತೆಗೆ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ ಬೆಳ್ತಂಗಡಿ: ಚಲಿಸುತ್ತಿದ್ದ ಬಸ್ಸಿನಿಂದ…

1 minute ago

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿಯಲು ಯತ್ನ; ಯುವಕನ ರಕ್ಷಣೆ – vishwanews24

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿಯಲು ಯತ್ನ; ಯುವಕನ ರಕ್ಷಣೆ ಉಡುಪಿ: ಟಿಕೆಟ್ ಇಲ್ಲದೆ ಪ್ರಯಾಣಿಸುತ್ತಿದ್ದ ಯುವಕನೊಬ್ಬ ರೈಲಿನಿಂದ ಜಿಗಿಯಲು ಯತ್ನಿಸುತ್ತಿದ್ದ…

40 minutes ago

ಕಾಸರಗೋಡು :  ಕೆಟ್ಟು ನಿಂತಿದ್ದ ಪಿಕಪ್ ವ್ಯಾನ್ ಗೆ ಬೈಕ್ ಢಿಕ್ಕಿ: ಸವಾರ ಮೃತ್ಯು – vishwanews24

ಕಾಸರಗೋಡು :  ಕೆಟ್ಟು ನಿಂತಿದ್ದ ಪಿಕಪ್ ವ್ಯಾನ್ ಗೆ ಬೈಕ್ ಢಿಕ್ಕಿ: ಸವಾರ ಮೃತ್ಯು ಕಾಸರಗೋಡು : ರಾಷ್ಟ್ರೀಯ ಹೆದ್ದಾರಿಯ ಬದಿಯಲ್ಲಿ…

2 hours ago

ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ ; ಆನ್‌ಲೈನ್‌ನಲ್ಲಿ ವೀಕ್ಷಿಸುವುದು ಹೇಗೆ? – vishwanews24

ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ ; ಆನ್‌ಲೈನ್‌ನಲ್ಲಿ ವೀಕ್ಷಿಸುವುದು ಹೇಗೆ? ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು…

2 hours ago

ಮಂಗಳೂರಿನಲ್ಲಿ ಹಜ್ ಭವನ, ಹಜ್ ಯಾತ್ರೆಗೆ ನೇರ ವಿಮಾನ ಸೌಲಭ್ಯ ಒದಗಿಸುವಂತೆ ಎಸ್‌ಡಿಪಿಐ ಆಗ್ರಹ – vishwanews24

ಮಂಗಳೂರಿನಲ್ಲಿ ಹಜ್ ಭವನ, ಹಜ್ ಯಾತ್ರೆಗೆ ನೇರ ವಿಮಾನ ಸೌಲಭ್ಯ ಒದಗಿಸುವಂತೆ ಎಸ್‌ಡಿಪಿಐ ಆಗ್ರಹ ಮಂಗಳೂರು: ಮಂಗಳೂರಿನಲ್ಲಿ ಹಜ್ ಭವನ…

2 hours ago

ಕಟಪಾಡಿ : ಶೀಘ್ರ ಒಂದು ಭಾಗದಲ್ಲಿ ವಾಹನ ಸಂಚಾರಕ್ಕೆ ಮುಕ್ತ – vishwanews24

ಕಟಪಾಡಿ : ಶೀಘ್ರ ಒಂದು ಭಾಗದಲ್ಲಿ ವಾಹನ ಸಂಚಾರಕ್ಕೆ ಮುಕ್ತ ಕಟಪಾಡಿಯಲ್ಲಿ ರಾಷ್ಟ್ರೀಯ ಹೆದ್ದಾರಿಯ ಅಂಡರ್‌ಪಾಸ್ ಕಾಮಗಾರಿ ವೇಗದಲ್ಲಿ ನಡೆಯುತಿದ್ದು,…

2 hours ago