ನವದೆಹಲಿ : ಬಜೆಟ್ ಅಧಿವೇಶನದ ಆರಂಭದ ಅಂಗವಾಗಿ ಶುಕ್ರವಾರ ಸಂಸತ್ತಿನ ಜಂಟಿ ಅಧಿವೇಶನ ಉದ್ದೇಶಿಸಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಭಾಷಣ ಮಾಡಿದರು ಮತ್ತು ದಿವಂಗತ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಿದರು ಮತ್ತು ಭಾರತವು ಬೃಹತ್ ಲಸಿಕೆ ಅಭಿಯಾನಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು.
ರಾಷ್ಟ್ರಪತಿ ರಾಮನಾಥ್ ಕೋವಿಂದ್ ಮಾತನಾಡಿ, ‘ಭಾರತ ವಿಶ್ವದ ಲ್ಲೇ ಅತಿ ದೊಡ್ಡ ಲಸಿಕೆ ಕಾರ್ಯಕ್ರಮವನ್ನು ನಡೆಸುತ್ತಿದೆ ಎಂಬುದು ಹೆಮ್ಮೆಯ ವಿಷಯ. ಈ ಕಾರ್ಯಕ್ರಮದ ಎರಡೂ ಲಸಿಕೆಗಳನ್ನು ಭಾರತದಲ್ಲಿ ತಯಾರಿಸಲಾಗುತ್ತದೆ. ಈ ಬಿಕ್ಕಟ್ಟಿನಲ್ಲಿ ಭಾರತವು ಮನುಕುಲದ ಮೇಲೆ ತನ್ನ ಜವಾಬ್ದಾರಿಯನ್ನು ಹೆಗಲಮೇಲೆ ಹೊತ್ತುಕೊಂಡು, ಹಲವಾರು ದೇಶಗಳಿಗೆ ಲಕ್ಷಗಟ್ಟಲೆ ಡೋಸ್ ಲಸಿಕೆಗಳನ್ನು ಒದಗಿಸಿತು’ ಎಂದು ಹೇಳಿದರು.
ಕನಿಷ್ಠ ಮಾರಾಟ ದರ (ಎಂಎಸ್ ಪಿ) ಯಥಾಸ್ಥಿತಿ ಕಾಯ್ದುಕೊಳ್ಳುವ ವಿವಾದದ ಬಗ್ಗೆ ಮಾತನಾಡಿದ ರಾಷ್ಟ್ರಪತಿ ಕೋವಿಂದ್ ಅವರು, ‘ಎಂಎಸ್ ಪಿ ಕುರಿತ ಸ್ವಾಮಿನಾಥನ್ ಆಯೋಗದ ವರದಿಯನ್ನು ನಾವು ಅನುಷ್ಠಾನಗೊಳಿಸಿದ್ದೇವೆ. ಸೂಕ್ಷ್ಮ ನೀರಾವರಿ ಗೆ ಒತ್ತು ನೀಡಿದ್ದೇವೆ’ ಎಂದರು.
ವಿಧಾನ ಪರಿಷತ್ತಿನ ನೂತನ ಉಪ ಸಭಾಪತಿಯಾಗಿ ಬಿಜೆಪಿಯ ಎಂ.ಕೆ.ಪ್ರಾಣೇಶ್ ಆಯ್ಕೆ -Vishwanews24
‘ಸರ್ಕಾರ ಕೈಗೊಂಡ ಹಲವು ಯೋಜನೆ ಲಾಭ ರೈತರಿಗೆ ದೊರಕುತ್ತಿರುವುದು ಸಂತಸ ತಂದಿದೆ. ದೇಶದಲ್ಲಿ ಬೆಳೆ, ಹಣ್ಣು, ತರಕಾರಿಗಳ ದಾಖಲೆ ಪ್ರಮಾಣದಲ್ಲಿ ಉತ್ಪಾದನೆಯಾಗಿದೆ. ಸಣ್ಣ ರೈತರಿಗಾಗಿ ಸರ್ಕಾರ ಹಲವು ನಿರ್ಧಾರಗಳನ್ನು ಕೈಗೊಂಡಿದೆ’ ಎಂದು ಮೋದಿ ಸರ್ಕಾರದ ಪ್ರಯತ್ನವನ್ನು ಶ್ಲಾಘಿಸಿದ್ದಾರೆ.
ಮೋದಿ ಸರ್ಕಾರವನ್ನು ಇಕ್ಕಟ್ಟಿಗೆ ಈಡು ಮಾಡಿರುವ ಮೂರು ಕೃಷಿ ಕಾನೂನುಗಳ ಬಗ್ಗೆ ಮಾತನಾಡಿದ ರಾಷ್ಟ್ರಪತಿ ಕೋವಿಂದ್, ‘ಸರ್ಕಾರ 7 ತಿಂಗಳ ಹಿಂದೆ ರೈತರ ಮೂರು ಬಿಲ್ ಗಳನ್ನು ಸಮರ್ಪಕವಾಗಿ ಜಾರಿಗೆ ತಂದಿದೆ. ಇದರಿಂದ 10 ಕೋಟಿ ಸಣ್ಣ ರೈತರಿಗೆ ಅನುಕೂಲವಾಗಲಿದೆ. ಈ ಹಿಂದೆ ಅನೇಕ ರಾಜಕೀಯ ಪಕ್ಷಗಳು ಈ ಅಭಿಪ್ರಾಯಗಳನ್ನು ಬೆಂಬಲಿಸಿದವು. ಈ ಮಸೂದೆಗಳನ್ನು ಸಂಸತ್ತಿನಲ್ಲಿ ಸರಿಯಾಗಿ ಚರ್ಚಿಸಲಾಗಿತ್ತು, ಆದರೆ ಈಗ ಸುಪ್ರೀಂ ಕೋರ್ಟ್ ತೀರ್ಪಿನ ನಂತರ ಅದನ್ನು ತಡೆಹಿಡಿಯಲಾಗಿದೆ’ ಎಂದು ಅವರು ಹೇಳಿದರು.
ರಾಷ್ಟ್ರಪತಿ ಕೋವಿಂದ್ ಅವರು, ‘ಮೂರು ಕೃಷಿ ಕಾನೂನುಗಳ ರಚನೆಗೂ ಮುನ್ನ ದೊರೆತಿರುವ ಹಕ್ಕುಗಳು ಮತ್ತು ಸೌಲಭ್ಯಗಳು ಕಡಿಮೆಆಗಿಲ್ಲ, ವಾಸ್ತವವಾಗಿ ಈ ಹೊಸ ಕೃಷಿ ಸುಧಾರಣೆಗಳಿಂದಾಗಿ ರೈತರಿಗೆ ಹೊಸ ಸೌಲಭ್ಯಗಳು ಮತ್ತು ಹಕ್ಕುಗಳನ್ನು ಸರ್ಕಾರ ಒದಗಿಸಿದೆ ಎಂಬುದನ್ನು ಸ್ಪಷ್ಟಪಡಿಸಲು ನನ್ನ ಸರ್ಕಾರ ಬಯಸುತ್ತದೆ’ ಎಂದು ರಾಷ್ಟ್ರಪತಿ ಕೋವಿಂದ್ ಹೇಳಿದರು.
ಬೆಳ್ತಂಗಡಿ : ಜ.30 ರಂದು ಇತಿಹಾಸ ಪ್ರಸಿದ್ಧ ವೀರ-ವಿಕ್ರಮ ಜೋಡುಕರೆ ಬಯಲು ಕಂಬಳ -Vishwanews24
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…