ಲಂಡನ್ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಈ ಗೌರವಕ್ಕೆ ಪಾತ್ರರಾದರು. ಕ್ರಿಕೆಟ್ ಜಗತ್ತಿನಲ್ಲಿ ಮೋಡಿ ಮಾಡಿರುವ ಸಚಿನ್ ತೆಂಡುಲ್ಕರ್ ಹಾಲ್ ಆಫ್ ಫೇಮ್ ಪಡೆದ ಭಾರತದ ಆರನೇ ಆಟಗಾರರಾಗಿದ್ದಾರೆ. ಇದಕ್ಕೂ ಮೊದಲು ಅನಿಲ್ ಕುಂಬ್ಳೆ, ಸುನೀಲ್ ಗವಾಸ್ಕರ್, ಬಿಶನ್ ಸಿಂಗ್ ಬೇಡಿ, ಕಪಿಲ್ ದೇವ್ ಹಾಗೂ ರಾಹುಲ್ ದ್ರಾವಿಡ್ ಈ ಗೌರವಕ್ಕೆ ಪಾತ್ರರಾಗಿದ್ದರು.
ಸಚಿನ್ ತಮ್ಮ ವೃತ್ತಿ ಜೀವನದಲ್ಲಿ ಒಟ್ಟು 200 ಟೆಸ್ಟ್ಗಳಲ್ಲಿ 51 ಶತಕ ಹಾಗೂ 68 ಅರ್ಧ ಶತಕಳೊಂದಿಗೆ 15,921 ರನ್ಗಳನ್ನು ಗಳಿಸಿದ್ದರೆ, 463 ಏಕದಿನ ಪಂದ್ಯಗಳಲ್ಲಿ 49 ಶತಕ ಹಾಗೂ 96 ಅರ್ಧ ಶತಗಳೊಂದಿಗೆ 18,426 ರನ್ ಗಳನ್ನು ಸಿಡಿಸುವ ಮೂಲಕ ದಾಖಲೆ ಸೃಷ್ಟಿಸಿದ್ದರು. ಈ ಎಲ್ಲ ಸಾಧನೆಯನ್ನು ಗುರುತಿಸಿ ಐಸಿಸಿ ಅವರನ್ನು ಗೌರವಿಸಿದೆ. ಅವರು 2013ರಲ್ಲಿ ತಮ್ಮ ಕೊನೆಯ ಟೆಸ್ಟ್ ಪಂದ್ಯವನ್ನು ಆಡಿ ಅಂತಾರಾಷ್ಟ್ರೀಯ ಕ್ರಿಕೆಟ್ ಜೀವನಕ್ಕೆ ವಿದಾಯ ಹೇಳಿದ್ದರು.
“ಈ ಸಂದರ್ಭದಲ್ಲಿ ನನ್ನ ಅಂತಾರಾಷ್ಟ್ರೀಯ ಕ್ರಿಕೆಟ್ ಜೀವನದಲ್ಲಿ ಭಾಗಿಯಾದ ಎಲ್ಲರಿಗೂ ಧನ್ಯವಾದ ಸಲ್ಲಿಸುತ್ತೇನೆ. ನನ್ನ ಪಾಲಕರು, ಸಹೋದರ ಅಜಿತ್, ಪತ್ನಿ ಅಂಜಲಿ ನನ್ನ ಬದುಕಿನ ಆಧಾರ ಸ್ಥಂಭಗಳು. ರಮಾಕಾಂತ್ ಅಚ್ರೇಕರ್ ರಂತಹ ಕ್ರಿಕೆಟ್ ಕೋಚ್ ರನ್ನು ಪಡೆದಿದ್ದು ನನ್ನ ಅದೃಷ್ಟ” ಎಂದು ಸಚಿನ್ ಹೇಳಿಕೆ ನೀಡಿದ್ದಾರೆ.
ಸಚಿನ್ ತೆಂಡುಲ್ಕರ್ ಜೊತೆಗೆ ದಕ್ಷಿಣ ಆಫ್ರಿಕ ಮಾಜಿ ಆಟಗಾರ ಅಲನ್ ಡೊನಾಲ್ಡ್ ಮತ್ತು ಮಾಜಿ ಆಸೀಸ್ ಆಟಗಾರ ಕ್ಯಾಥ್ರಿನ್ ಫಿಜ್ ಪ್ಯಾಟ್ರಿಕ್ ಅವರಿಗೆ ಐಸಿಸಿ ಹಾಲ್ ಆಫ್ ಫೇಮ್ ಗೌರವ ನೀಡಲಾಗಿದೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…