ಬೆಂಗಳೂರು: ಭಾರತದ ಮಾಜಿ ಕ್ರಿಕೆಟ್ ಆಟಗಾರ ಡೇವಿಡ್ ಜಾನ್ಸನ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇಂದು ಮಧ್ಯಾಹ್ನ 12.30ರ ಸುಮಾರಿಗೆ ಘಟನೆ ನಡೆದಿದೆ.
ಕನ್ನಡಿಗ ಡೇವಿಡ್ ಜಾನ್ಸನ್(52) ಅವರು ಖಿನ್ನತೆಗೆ ಒಳಗಾಗಿ ಕಟ್ಟಡದಿಂದ ಧುಮುಕಿ ಸಾವನ್ನಪ್ಪಿದ್ದಾರೆ. ಕೊತ್ತನೂರು ಬಳಿ ಇರುವ ಅಪಾರ್ಟ್ಮೆಂಟ್ ನಿಂದ ಜಿಗಿದು ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಡೇವಿಡ್ ಜಾನ್ಸನ್ ಅವರು 1996ರಲ್ಲಿ ಭಾರತ ಪರ 2 ಟೆಸ್ಟ್ ಪಂದ್ಯಗಳನ್ನು ಆಡಿದ್ದರು. ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್ ಸರಣಿ ಇದಾಗಿತ್ತು. ಬ್ಯಾಟಿಂಗ್ ಆಲ್ರೌಂಡರ್ ಆಗಿದ್ದ ಅವರು ಟೆಸ್ ನಲ್ಲಿ 8 ರನ್ ಮತ್ತು 3 ವಿಕೆಟ್ ಕಿತ್ತಿದ್ದಾರೆ. ದಕ್ಷಿಣ ಆಫ್ರಿಕಾ ವಿರುದ್ಧದ ಸರಣಿ ಅವರಿಗೆ ಭಾರತ ಪರ ಕೊನೆಯ ಪಂದ್ಯವಾಗಿತ್ತು.
ಕುಡಿತದ ಚಟ ಹೊಂದಿದ್ದ ಡೇವಿಡ್ ಜಾನ್ಸನ್ ಕೆಲ ವರ್ಷಗಳಿಂದ ಅನಾರೋಗ್ಯಕ್ಕೆ ಒಳಗಾಗಿದ್ದರು. ಹೀಗಾಗಿ ಖಿನ್ನತೆಗೆ ಜಾರಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಕೆಪಿಎಲ್ ನಲ್ಲಿ ಬೆಳಗಾವಿ ಪ್ಯಾಂಥರ್ಸ್ ಪರವಾಗಿ ಆಟವಾಡಿದ್ದರು.
1971ರ ಅಕ್ಟೋಬರ್ 16ರಂದು ಹಾಸನ ಜಿಲ್ಲೆಯ ಅರಸಿಕೆರೆಯಲ್ಲಿ ಜನಿಸಿದ ಡೇವಿಡ್ ಜಾನ್ಸನ್, 90ರ ಕಾಲಘಟ್ಟದಲ್ಲಿ ಅತಿವೇಗದ ಬೌಲಿಂಗ್ ಮಾಡಿದ್ದರು. ಆಸೀಸ್ ವಿರುದ್ಧದ ಪಂದ್ಯದಲ್ಲಿ ಗಂಟೆಗೆ 157.8 ಕಿಲೋ ಮೀಟರ್ ವೇಗದಲ್ಲಿ ಬೌಲಿಂಗ್ ಮಾಡಿ ಆಸ್ಟ್ರೇಲಿಯಾದ ಮೈಕಲ್ ಸ್ಲೇಟರ್ ಅವರ ವಿಕೆಟ್ ಕಿತ್ತಿದ್ದರು.
ಬಿಜೆಪಿ ಒಬಿಸಿ ಮೋರ್ಚಾದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ಪ್ರಮೋದ್ ಮಧ್ವರಾಜ್ ನೇಮಕ ನವದೆಹಲಿ: ಬಿಜೆಪಿ ಒಬಿಸಿ ಮೋರ್ಚಾದ ರಾಷ್ಟ್ರೀಯ ಪದಾಧಿಕಾರಿಗಳನ್ನು…
ನ. 24, 25 ರಂದು ಇತಿಹಾಸ ಪ್ರಸಿದ್ಧ ಕಾಪು ಮಾರಿಗುಡಿಗಳಲ್ಲಿ ಜಾರ್ದೆ ಮಾರಿಪೂಜೆ ಸಂಭ್ರಮ ಇತಿಹಾಸ ಪ್ರಸಿದ್ಧ ಕಾಪು ಹಳೆ…
ಸಂಬಂಧಿಕರನ್ನು ಬೀಳ್ಕೊಡಲು ವಂದೇ ಭಾರತ್ ಎಕ್ಸ್‌ಪ್ರೆಸ್‌ಗೆ ಪ್ರವೇಶಿಸಿದ 12 ಮಂದಿ ಸ್ವಯಂಚಾಲಿತ ಬಾಗಿಲುಗಳು ಮುಚ್ಚಿದ್ದರಿಂದ ರೈಲಿನೊಳಗೆ ಲಾಕ್ 140 ಕಿ.ಮೀ…
ಗ್ರಾಹಕರಿಗೆ ಗುಡ್ ನ್ಯೂಸ್: ಸೋನಾ ಮಸೂರಿ ಅಕ್ಕಿ ಬೆಲೆಯಲ್ಲಿ ಭಾರೀ ಇಳಿಕೆ, ಕೆಜಿಗೆ ₹20ರವರೆಗೆ ಕಡಿತ ಬೆಂಗಳೂರು: ಮಾರುಕಟ್ಟೆಯಲ್ಲಿ ಹೊಸ…
ನವೆಂಬರ್ 30ರವರೆಗೆ ಸೌದಿಗೆ ಇಂಡಿಗೋ ವಿಮಾನ ಹಾರಾಟ ರದ್ದು ನವದೆಹಲಿ: ಸೌದಿ ಅರೇಬಿಯಾದಲ್ಲಿನ ಪ್ರಸ್ತುತ ಭದ್ರತಾ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಇಂಡಿಗೋ…
ಶಬರಿಮಲೆಯಲ್ಲಿ ಕ್ಯೂ ನಿಲ್ಲುವ ಅಗತ್ಯವಿಲ್ಲ : ಇನ್ಮುಂದೆ ಸ್ವಯಂಚಾಲಿತ ಯಂತ್ರದ ಮೂಲಕ ಸಿಗಲಿದೆ ಅರವಣ, ಅಪ್ಪಂ ಪ್ರಸಾದ ಶಬರಿಮಲೆ: ಅಯ್ಯಪ್ಪ…