Featured

ಭಾರತದ ಮೇಲೆ ಯಾರಾದರೂ ದಾಳಿಗೆ ಮುಂದಾದರೆ ಅವರಿಗೆ ತಕ್ಕ ಪ್ರತ್ಯುತ್ತರ ನೀಡುವುದು ನಮ್ಮ ಜವಾಬ್ದಾರಿ : ಉಪರಾಷ್ಟ್ರಪತಿ -Vishwanews24

ನವದೆಹಲಿ: ಭಾರತ ಶಾಂತಿ ಬಯಸುವ ರಾಷ್ಟ್ರವಾಗಿದ್ದು, ಶಾಂತಿಗಾಗಿ ಅದರ ಬದ್ಧತೆಯನ್ನು ಯಾರೂ ಪ್ರಶ್ನಿಸುವಂತಿಲ್ಲ ಎಂದು ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಹೇಳಿದ್ದಾರೆ.

ಆದರೆ ಭಾರತದ ಮೇಲೆ ಯಾರಾದರೂ ದಾಳಿಗೆ ಮುಂದಾದರೆ ಅವರಿಗೆ ತಕ್ಕ ಪ್ರತ್ಯುತ್ತರ ನೀಡುವುದು ನಮ್ಮ ಜವಾಬ್ದಾರಿ ಕೂಡ ಹೌದು ಎಂದು ವೆಂಕಯ್ಯ ನಾಯ್ಡು ಎಚ್ಚರಿಕೆ ನೀಡಿದ್ದಾರೆ.

ರಾಷ್ಟ್ರಪತಿ ರಾಮನಾಥ್ ಕೋವಿಂದ್ ಕಳೆದ ಎರಡು ವರ್ಷಗಳ ತಮ್ಮ ಅಧಿಕಾರಾವಧಿಯಲ್ಲಿ ಮಾಡಿರುವ 95 ಭಾಷಣಗಳ ಸಂಗ್ರಹ ‘ಲೋಕತಂತ್ರ ಕೆ ಸ್ವರ್’ ಹಿಂದಿ ಅವತರಣಿಕೆ ಮತ್ತು‘ರಿಪಬ್ಲಿಕನ್ ಎಥಿಕ್’ ಇಂಗ್ಲಿಷ್ ಅವತರಣಿಕೆ ಕೃತಿಗಳನ್ನು ಲೋಕಾರ್ಪಣೆ ಮಾಡಿ ವೆಂಕಯ್ಯ ನಾಯ್ಡು ಮಾತನಾಡಿದರು.

ವಸುದೈವ ಕುಟುಂಬಕಂ ಎಂಬ ಪರಿಕಲ್ಪನೆಯಲ್ಲಿ ಭಾರತಕ್ಕೆ ನಂಬಿಕೆ ಇದ್ದು, ಇಡೀ ವಿಶ್ವವೇ ಒಂದು ಕುಟುಂಬ ಎಂದು ನಂಬಿರುವ ನಾವು ಯಾವುದೇ ದೇಶದ ಮೇಲೆ ತಾನಾಗಿ ದಾಳಿ ಮಾಡಿಲ್ಲ ಎಂದು ನಾಯ್ಡು ನುಡಿದರು.

ಪ್ರಜಾತಂತ್ರ ವ್ಯವಸ್ಥೆಯಲ್ಲಿ ಸಂವಾದ ಮತ್ತು ಚರ್ಚೆಗಳ ಮೂಲಕ ಸಮಸ್ಯೆ ಬಗೆಹರಿಸಿಕೊಳ್ಳಲು ಅವಕಾಶಗಳಿವೆ. ಅದೇ ರೀತಿ ಯಾವುದೇ ಸಮಸ್ಯೆಯನ್ನು ಮಾತುಕತೆ ಮತ್ತು ಚರ್ಚೆಯ ಮೂಲಕ ಬಗೆಹರಿಸಿಕೊಳ್ಳಬಹುದು ಎಂಬ ನಂಬಿಕೆಯೂ ನಮ್ಮದಾಗಿದೆ ಎಂದು ನಾಯ್ಡು ಈ ವೇಳೆ ಹೇಳಿದರು.

ಭಾರತ ಆಕ್ರಮಣಶೀಲ ರಾಷ್ಟ್ರವಲ್ಲ ಆದಾಗ್ಯೂ, ಯಾರಾದರೂ ಭಾರತದ ಮೇಲೆ ದಾಳಿ ಮಾಡಿದರೆ, ನಾವು ಅವರಿಗೆ ತಕ್ಕ ಉತ್ತರ ಕೊಡುತ್ತೇವೆ ಎಂದು ಉಪರಾಷ್ಟ್ರಪತಿ ಗುಡುಗಿದರು.

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

2 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

2 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

2 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

2 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

2 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

2 days ago