ನವದೆಹಲಿ: ಕರ್ನಾಟಕದಿಂದ ರಾಜ್ಯಸಭೆಗೆ ಆಯ್ಕೆಯಾಗಿರುವ ನಿರ್ಮಲಾ ಸೀತಾರಾಮನ್ ಅವರಿಗೆ ಮೋದಿ ಸಂಪುಟದಲ್ಲಿ ಹಣಕಾಸು ಖಾತೆ ನೀಡಲಾಗಿದೆ. ಹೀಗಾಗಿ ಭಾರತದ ಮೊದಲ ಮಹಿಳಾ ಹಣಕಾಸು ಖಾತೆ ಸಚಿವೆ ಎಂಬ ಖ್ಯಾತಿ ನಿರ್ಮಲಾ ಸೀತಾರಾಮನ್ ಅವರದ್ದಾಗಲಿದೆ.
ರಕ್ಷಣಾ ಖಾತೆಯನ್ನು ಯಶಸ್ವಿಯಾಗಿ ನಿಭಾಯಿಸಿದ ಬಳಿಕ ಮೋದಿ-2.0 ಸರ್ಕಾರದ ಸಂಪುಟದಲ್ಲಿ ಈ ಬಾರಿಯೂ ಅತ್ಯಂತ ಜವಬ್ದಾರಿಯುತ ಹುದ್ದೆ ನೀಡಲಾಗಿದೆ.
ಸುಷ್ಮಾ ಸ್ವರಾಜ್ ರ ನಂತರ ಈ ಉನ್ನತ ಹುದ್ದೆ ಪಡೆದ ಮಹಿಳೆ ಎಂಬುದು ಇವರ ಹೆಗ್ಗಳಿಕೆಯಾಗಿದೆ. 1970-71 ರಲ್ಲಿ ಮಾಜಿ ಪ್ರಧಾನಿ ಇಂದಿರಾ ಗಾಂಧಿ ಹಣಕಾಸು ಖಾತೆಯನ್ನು ಯಾರಿಗೂ ಹಂಚದೆ ತಮ್ಮೊಂದಿಗೆ ಇಟ್ಟುಕೊಂಡಿದ್ದರು. ಆ ನಂತರ 1971-75 ವರೆಗೆ ಯಶವಂತ ರಾವ್ ಚೌಹಾಣ್ ವಿತ್ತ ಸಚಿವರಾಗಿ ಕಾರ್ಯನಿರ್ವಹಿಸಿದ್ದರು. 70-71 ರ ಅವಧಿಯನ್ನು ಹೊರತುಪಡಿಸಿದರೆ ಇದೇ ಮೊದಲ ಬಾರಿಗೆ ಮಹಿಳೆಯೊಬ್ಬರು ವಿತ್ತ ಖಾತೆಯನ್ನು ನಿರ್ವಹಿಸಲಿದ್ದಾರೆ.
2003ರಿಂದ 2005ರ ವರೆಗೆ ರಾಷ್ಟ್ರೀಯ ಮಹಿಳಾ ಆಯೋಗದ ಸದಸ್ಯೆಯಾಗಿದ್ದರು. 2008ರಲ್ಲಿ ಬಿಜೆಪಿ ಸೇರಿದರು. ತಮ್ಮ ವಾಕ್ಚಾತುರ್ಯದಿಂದ ಅಲ್ಪಕಾಲದಲ್ಲಿಯೇ ಪಕ್ಷದ ವಕ್ತಾರೆಯಾಗಿ ನೇಮಕಗೊಂಡರು.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…