ದೇಶದ್ರೋಹಿಗಳ ವಿರುದ್ಧ ಕಠಿಣ ಕಾನೂನು ಜಾರಿಗೆ ತರಲು ಪ್ರಧಾನಿ ಮೋದಿಯವರನ್ನು ಮನವಿ ಮಾಡಿಕೊಳ್ಳುತ್ತೇನೆ : ಬಿ ಸಿ ಪಾಟೀಲ್ -Vishwanews24

ಭಾರತದ ವಿರುದ್ಧ ಮಾತನಾಡುವವರನ್ನು, ಪಾಕಿಸ್ತಾನ ಪರ ಘೋಷಣೆ ಕೂಗುವವರನ್ನು ಕಂಡಲ್ಲಿ ಗುಂಡಿಕ್ಕುವ ಕಾನೂನನ್ನು ಜಾರಿಗೆ ತರಬೇಕು..

ದೇಶದ್ರೋಹಿಗಳನ್ನು ಶಿಕ್ಷಿಸುವ ಕಠಿಣ ಕಾನೂನನ್ನು ಪ್ರಧಾನಿ ನರೇಂದ್ರ ಮೋದಿಯವರು ತರಬೇಕು..

ದೇಶದ್ರೋಹಿಗಳ ವಿರುದ್ಧ ಕಠಿಣ ಕಾನೂನು ಜಾರಿಗೆ ತರಲು ಪ್ರಧಾನಿ ಮೋದಿಯವರನ್ನು ಮನವಿ ಮಾಡಿಕೊಳ್ಳುತ್ತೇನೆ..

ಚಿತ್ರದುರ್ಗ: ಭಾರತದ ವಿರುದ್ಧ ಮಾತನಾಡುವವರನ್ನು, ಪಾಕಿಸ್ತಾನ ಪರ ಘೋಷಣೆ ಕೂಗುವವರನ್ನು ಕಂಡಲ್ಲಿ ಗುಂಡಿಕ್ಕುವ ಕಾನೂನನ್ನು ಜಾರಿಗೆ ತರಬೇಕು ಎಂದು ಕೃಷಿ ಸಚಿವ ಬಿ ಸಿ ಪಾಟೀಲ್ ಹೇಳಿದ್ದಾರೆ.

ಇದಕ್ಕೆ ಚೀನಾ ದೇಶದ ಉದಾಹರಣೆ ನೀಡಿದ ಅವರು, ದೇಶದ್ರೋಹಿಗಳನ್ನು ಶಿಕ್ಷಿಸುವ ಕಠಿಣ ಕಾನೂನನ್ನು ಪ್ರಧಾನಿ ನರೇಂದ್ರ ಮೋದಿಯವರು ತರಬೇಕು ಎಂದು ಮನವಿ ಮಾಡಿಕೊಂಡರು.

ಚಿತ್ರದುರ್ಗದಲ್ಲಿ ಎಎನ್ಐ ಸುದ್ದಿಸಂಸ್ಥೆಯೊಂದಿಗೆ ಮಾತನಾಡಿದ ಅವರು, ದೇಶದ ವಿರುದ್ಧ ಮಾತನಾಡುವವರನ್ನು ಮತ್ತು ಪಾಕಿಸ್ತಾನ ಪರ ಘೋಷಣೆ ಕೂಗುವವರನ್ನು ಕಂಡಲ್ಲಿ ಗುಂಡಿಕ್ಕುವ ಕಾನೂನನ್ನು ಭಾರತದಲ್ಲಿ ಕೂಡ ಜಾರಿಗೆ ತರಬೇಕೆಂಬುದು ನನ್ನ ಅಭಿಪ್ರಾಯ. ಅಂತಹ ಕಾನೂನಿನ ಅಗತ್ಯ ಖಂಡಿತಾ ನಮ್ಮ ದೇಶಕ್ಕಿದೆ ಎಂದರು.

ಈ ದೇಶದಲ್ಲಿದ್ದುಕೊಂಡು ಇಲ್ಲಿನ ನೆಲ, ಜಲ, ಗಾಳಿ, ಆಹಾರವನ್ನು ಸೇವಿಸುತ್ತಾರೆ. ಪಾಕಿಸ್ತಾನ ಜಿಂದಾಬಾದ್ ಎಂದು ಘೋಷಣೆ ಕೂಗುವುದಾದರೆ ಅವರು ಇಲ್ಲೇಕೆ ಇರಬೇಕು, ಚೀನಾದಲ್ಲಿ, ತಮ್ಮ ದೇಶದ ವಿರುದ್ಧ ಮಾತನಾಡಲು ಅಲ್ಲಿನ ಜನರು ಭಯಪಡುತ್ತಾರೆ. ಇಂತಹ ದೇಶದ್ರೋಹಿಗಳ ವಿರುದ್ಧ ಕಠಿಣ ಕಾನೂನು ಜಾರಿಗೆ ತರಲು ಪ್ರಧಾನಿ ಮೋದಿಯವರನ್ನು ಮನವಿ ಮಾಡಿಕೊಳ್ಳುತ್ತೇನೆ ಎಂದರು.

 

 

Vishwa News 24

Recent Posts

ಈ ಬಾರಿ ದಸರಾ ಮಹೋತ್ಸವದಲ್ಲಿ ಅಂಬಾರಿ ಹೊತ್ತು ಸಾಗಲಿರುವ ದುಬಾರೆ ವೀರ ಪ್ರಶಾಂತ​ ಆನೆ – vishwanews24

ಈ ಬಾರಿ ದಸರಾ ಮಹೋತ್ಸವದಲ್ಲಿ ಅಂಬಾರಿ ಹೊತ್ತು ಸಾಗಲಿರುವ ದುಬಾರೆ ವೀರ ಪ್ರಶಾಂತ​ ಆನೆ ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು…

19 hours ago

ಬೆಳ್ತಂಗಡಿ: ನಾವೂರಿನ ಆರೋಗ್ಯ ಕ್ಲಿನಿಕ್‌ಗೆ ಬೆಂಕಿ ಹಚ್ಚಿದ ಪ್ರಕರಣ; ಓರ್ವನ ಬಂಧನ, ಇಬ್ಬರು ವಶಕ್ಕೆ – vishwanews24

ಬೆಳ್ತಂಗಡಿ: ನಾವೂರಿನ ಆರೋಗ್ಯ ಕ್ಲಿನಿಕ್‌ಗೆ ಬೆಂಕಿ ಹಚ್ಚಿದ ಪ್ರಕರಣ; ಓರ್ವನ ಬಂಧನ, ಇಬ್ಬರು ವಶಕ್ಕೆ ಬೆಳ್ತಂಗಡಿ: ನಾವೂರು ಗ್ರಾಮದ ಸ್ವಾತಿ…

19 hours ago

ಮಂಗಳೂರು: ನಿಯಮಬಾಹಿರವಾಗಿ ಶಾಲಾ ಮಕ್ಕಳ ಸಾಗಾಟ ; 30 ವಾಹನಗಳ ಮೇಲೆ ಕೇಸು ದಾಖಲು – vishwanews24

ಮಂಗಳೂರು: ನಿಯಮಬಾಹಿರವಾಗಿ ಶಾಲಾ ಮಕ್ಕಳ ಸಾಗಾಟ ; 30 ವಾಹನಗಳ ಮೇಲೆ ಕೇಸು ದಾಖಲು ಮಂಗಳೂರು: ಮಂಗಳೂರು ಪ್ರಾದೇಶಿಕ ಸಾರಿಗೆ…

19 hours ago

ಇಂದು ಉಚ್ಚಿಲ ಮಹಾಲಕ್ಷ್ಮಿ ದೇವಸ್ಥಾನಕ್ಕೆ ಡಿ.ಕೆ.ಶಿವಕುಮಾರ್ ಭೇಟಿ – vishwanews24

ಕಾಪು: ಇಂದು ಉಚ್ಚಿಲ ಮಹಾಲಕ್ಷ್ಮಿ ದೇವಸ್ಥಾನಕ್ಕೆ ಡಿ.ಕೆ.ಶಿವಕುಮಾರ್ ಭೇಟಿ ಉಡುಪಿ: ಐದನೇ ವರ್ಷದ ಉಚ್ಚಿಲ ದಸರಾ ಲಲಿತ ಪಂಚಮಿಯ ಸಂಭ್ರಮ…

20 hours ago

ಉಡುಪಿ ಉಚ್ಚಿಲ ದಸರಾ: ಅ.17ರಂದು ಮಹಾಲಕ್ಷ್ಮೀ ಬ್ಯಾಂಕ್ ವತಿಯಿಂದ ಚಿತ್ರಕಲೆ ಸ್ಪರ್ಧೆ : ಯಶ್ಪಾಲ್ ಸುವರ್ಣ – vishwanews24

ಉಡುಪಿ ಉಚ್ಚಿಲ ದಸರಾ: ಅ.17ರಂದು ಮಹಾಲಕ್ಷ್ಮೀ ಬ್ಯಾಂಕ್ ವತಿಯಿಂದ ಚಿತ್ರಕಲೆ ಸ್ಪರ್ಧೆ : ಯಶ್ಪಾಲ್ ಸುವರ್ಣ ಉಡುಪಿ: ಉಚ್ಚಿಲ ಮಹಾಲಕ್ಷ್ಮೀ…

20 hours ago

ಕೋಳಿಮರಿ ವಿತರಣೆ : ಉಡುಪಿ ತಾಲೂಕಿನ ಗ್ರಾಮೀಣ ರೈತ ಮಹಿಳೆಯರಿಗೆ ಅರ್ಜಿ ಆಹ್ವಾನ – vishwanews24

 ಕೋಳಿಮರಿ ವಿತರಣೆ: ಉಡುಪಿ ತಾಲೂಕಿನ ಗ್ರಾಮೀಣ ರೈತ ಮಹಿಳೆಯರಿಗೆ ಅರ್ಜಿ ಆಹ್ವಾನ  ಉಡುಪಿ: ಕರ್ನಾಟಕ ಸಹಕಾರ ಕುಕ್ಕುಟ ಮಹಾಮಂಡಳ ನಿಯಮಿತ…

20 hours ago