ಇಸ್ಲಾಮಾಬಾದ್: ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡುವ 370ನೇ ವಿಧಿ ರದ್ದು ಮಾಡಿದ ಭಾರತದ ನಿರ್ಧಾರವನ್ನು ಜಾಗತಿಕ ವಿಷಯವನ್ನಾಗಿ ಮಾಡಲು ವಿವಿಧ ವೇದಿಕೆಗಳಲ್ಲಿ ಅವಮಾನ ಅನುಭವಿಸಿದ್ದ ಪಾಕಿಸ್ತಾನಕ್ಕೆ ಇದೀಗ ಮುಸ್ಲಿಂ ರಾಷ್ಟ್ರಗಳೂ ಕೂಡ ಪರೋಕ್ಷವಾಗಿ ತಪರಾಕಿ ಹಾಕಿವೆ.
ಭಾರತದ ವಿರುದ್ಧ ಯುದ್ಧೋನ್ಮಾದ ಪ್ರದರ್ಶಿಸುವ ಬದಲು ತಾಳ್ಮೆಯಿಂದ ವರ್ತಿಸಿ ಎಂದು ಪ್ರಮುಖ ಮುಸ್ಲಿಂ ರಾಷ್ಟ್ರಗಳ ನಾಯಕರು ಪಾಕಿಸ್ತಾನ ಪ್ರಧಾನಮಂತ್ರಿ ಇಮ್ರಾನ್ ಖಾನ್’ಗೆ ಸಲಹೆ ನೀಡಿದ್ದಾರೆಂದು ವರದಿಗಳು ತಿಳಿಸಿವೆ.
ಸೆ.3ರಂದು ಸೌದಿ ಅರೇಬಿಯಾದ ವಿದೇಶಾಂಗ ಖಾತೆ ರಾಜ್ಯ ಸಚಿವ ಆದಿಲ್ ಅಲ್ ಜುಬೈಲ್, ಯುಎಇ ವಿದೇಶಾಂಗ ಸಚಿವ ಅಬ್ದುಲ್ಲಾ ಬಿನ್ ಅಲ್ ನಹ್ಯಾನ್ ಪಾಕಿಸ್ತಾನಕ್ಕೆ ಆಗಮಿಸಿದ ಪ್ರಧಾನಿ ಇಮ್ರಾನ್ ಖಾನ್, ವಿದೇಶಾಂಗ ಸಚಿವ ಶಾ.ಮೊಹಮ್ಮದ್ ಖುರೇಷಿ, ಸೇನಾ ಮುಖ್ಯಸ್ಥ ಖಮರ್ ಜಾವೇದ್ ಬಜ್ವಾ ಜೊತೆಗೆ ಮಾತುಕತೆ ನಡೆಸಿದ್ದರು.
ಈ ವೇಳೆ ಭಾರತದೊಂದಿಗೆ ಸಂಘರ್ಷ ನಡೆಸುವುದನ್ನು ಬಿಟ್ಟು ತಾಳ್ಮೆ ಪ್ರದರ್ಶಿಸಬೇಕು. ಸದ್ಯ ಉಭಯ ರಾಷ್ಟ್ರಗಳ ನಡುವೆ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿರುವ ಹಿನ್ನಲೆಯಲ್ಲಿ ಭಾರತದ ಜೊತೆ ಹಿಂಬಾಗಿಲ ರಾಜತಾಂತ್ರಿಕ ಮಾತುಕತೆ ನಡೆಸಬೇಕು ಎಂದು ಸಲಹೆ ನೀಡೀದ್ದಾರೆಂದು ವರದಿಗಳು ತಿಳಿಸಿವೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…