ನವದೆಹಲಿ: ಪ್ರಧಾನಮಂತ್ರಿ ನರೇಂದ್ರ ಮೋದಿಯವರ 69ನೇ ಹುಟ್ಟುಹಬ್ಬದ ಅಂಗವಾಗಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಶುಭ ಕೋರಿದ್ದು, ಮೋದಿಯವರು ದೃಢ ಇಚ್ಛಾಶಕ್ತಿ, ನಿರ್ಣಾಯಕ ನಾಯಕತ್ವ ಮತ್ತು ದಣಿವರಿಯದ ಪರಿಶ್ರಮದ ಸಂಕೇತ ಎಂದು ಹೊಗಳಿದ್ದಾರೆ.
ಪ್ರಧಾನಿ ನರೇಂದ್ರ ಮೋದಿಯವರಿಗೆ ಹುಟ್ಟುಹಬ್ಬದ ಶುಭಾಶಯಗಳು. ದೇಶ ಕಂಡ ಪ್ರಸಿದ್ಧ ನಾಯಕ ಮೋದಿ. ನಿಮ್ಮ ನಾಯಕತ್ವದ ಅಡಿಯಲ್ಲಿ ಹೊರಹೊಮ್ಮುತ್ತಿರುವ ನವ ಭಾರತವು ಪ್ರಬಲ, ಸುರಕ್ಷಿತ ಮತ್ತು ವಿಶ್ವಾಸಾರ್ಹ ರಾಷ್ಟ್ರವಾಗಿ ವಿಶ್ವದಲ್ಲಿ ಒಂದು ಛಾಪು ಮೂಡಿಸಿದೆ ಎಂದು ಶಾ ಟ್ವೀಟ್ ಮಾಡಿದ್ದಾರೆ.
ಭಾರತದ ಸಂಸ್ಕೃತಿಯನ್ನು ಮತ್ತಷ್ಟು ಶ್ರೀಮಂತಗೊಳಿಸಲು ಪ್ರಧಾನಿ ಮೋದಿಯವರು ಅಭೂತಪೂರ್ವ ಕೊಡುಗೆಯನ್ನು ನೀಡಿದ್ದಾರೆ. ಸುಧಾರಣಾವಾದಿಯಾಗಿ ಪ್ರಧಾನಿ ನರೇಂದ್ರ ಮೋದಿಯವರು ಕೇವಲ ರಾಜಕೀಯಕ್ಕೆ ಮಾತ್ರ ಹೊಸ ಮಾರ್ಗವನ್ನು ನೀಡಿಲ್ಲ. ಆರ್ಥಿಕ ಸುಧಾರಣೆಗಳೊಂದಿಗೆ ದಶಕಗಳಿಂದ ಇದ್ದ ಸಮಸ್ಯೆಗಳಿಗೆ ಶಾಶ್ವತ ಪರಿಹಾರವನ್ನು ಕಂಡುಕೊಳ್ಳುವ ಮೂಲಕ ಎಲ್ಲರಿಗೂ ಹೆಮ್ಮೆ ತಂದಿದ್ದಾರೆ.
ಪ್ರತಿಯೊಬ್ಬ ಭಾರತೀಯನ ಜೀವನವನ್ನು ಸುಲಭಗೊಳಿಸಲು ನಿಮ್ಮ ಕಠಿಣ ಪರಿಶ್ರಮ ಮತ್ತು ದೃಢ ನಿರ್ಣಯವು ನಮಗೆ ಸ್ಫೂರ್ತಿಯಾಗಿದೆ. ಸಾರ್ವಜನಿಕ ಪ್ರತಿನಿಧಿಯಾಗಿ, ಕೆಲಸಗಾರರಾಗಿ ಮತ್ತು ದೇಶವಾಸಿಗಳಾಗಿ ರಾಷ್ಟ್ರ ನಿರ್ಮಾಣದಲ್ಲಿ ನಿಮ್ಮೊಂದಿಗೆ ಪಾಲುದಾರರಾಗಿರುವುದೇ ಪುಣ್ಯ. ನಿಮ್ಮ ಆರೋಗ್ಯ ಮತ್ತು ದೀರ್ಘಾಯುಷ್ಯಕ್ಕಾಗಿ ನಾನು ದೇವರನ್ನು ಪ್ರಾರ್ಥಿಸುತ್ತೇನೆ ಎಂದು ಮತ್ತೊಂದು ಟ್ವೀಟ್‌ನಲ್ಲಿ ಹೇಳಿದ್ದಾರೆ.
ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…
ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಶಿಳ್ಳೆ ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್ ಭಟ್ ಗರಂ ಮಂಗಳೂರು: ಯಕ್ಷಗಾನ…
ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…
SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…
ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಮಂಗಳೂರು…
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…