Featured

ಭಾರತವನ್ನು ಕಟ್ಟಿದ್ದು ಕಾಂಗ್ರೆಸ್ ಪಕ್ಷವೇ ಹೊರತು ಒಂಬತ್ತು ವರ್ಷಗಳಿಂದ ಪ್ರಧಾನಿಯಾಗಿರುವ ಮೋದಿ ಅಲ್ಲ : ಎಂ ಬಿ ಪಾಟೀಲ್‌ – Vishwanews24

ಭಾರತವನ್ನು ಕಟ್ಟಿದ್ದು ಕಾಂಗ್ರೆಸ್ ಪಕ್ಷವೇ ಹೊರತು ಒಂಬತ್ತು ವರ್ಷಗಳಿಂದ ಪ್ರಧಾನಿಯಾಗಿರುವ ಮೋದಿ ಅಲ್ಲ : ಎಂ ಬಿ ಪಾಟೀಲ್‌

ಬೆಂಗಳೂರು: ಕಳೆದ 75 ವರ್ಷಗಳಲ್ಲಿ ಭಾರತವನ್ನು ಕಟ್ಟಿದ್ದು ಕಾಂಗ್ರೆಸ್ ಪಕ್ಷವೇ ಹೊರತು ಒಂಬತ್ತು ವರ್ಷಗಳಿಂದ ಪ್ರಧಾನಿಯಾಗಿರುವ ನರೇಂದ್ರ ಮೋದಿ ಅಲ್ಲ ಎಂದು ಬೃಹತ್ ಕೈಗಾರಿಕಾ ಸಚಿವ ಎಂ ಬಿ ಪಾಟೀಲ್‌ ಹೇಳಿದ್ದಾರೆ.

ಭಾರತ್ ಜೋಡೊ‌ ಸಭಾಂಗಣದಲ್ಲಿ ಏರ್ಪಡಿಸಿದ್ದ ಅಭಿನಂದನಾ ಸಮಾರಂಭ ಹಾಗೂ ಮುಂಬರುವ ಲೋಕಸಭಾ ಚುನಾವಣಾ ಪೂರ್ವ ತಯಾರಿ‌ ಸಭೆಯಲ್ಲಿ ಅವರು ಮಾತನಾಡಿ ಅವರು, ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಉದಾತ್ತ ಇತಿಹಾಸ ಕಾಂಗ್ರೆಸ್ ಗೆ ಇದೆ. ಇದಾದ ಮೇಲೆ ದೇಶದ ಚುಕ್ಕಾಣಿ ಹಿಡಿದ ಜವಾಹರ್ ಲಾಲ್ ನೆಹರು ಸೇರಿದಂತೆ ಅನೇಕರು ಅರ್ಥಪೂರ್ಣ ಕೆಲಸಗಳನ್ನು ಮಾಡುವ ಮೂಲಕ ಭಾರತವನ್ನು ದೈತ್ಯ ಆರ್ಥಿಕ ಶಕ್ತಿಯಾಗಿ ಬೆಳೆಸಿದರು. ಇದನ್ನು ಮೋದಿ ಸೇರಿದಂತೆ ಬಿಜೆಪಿ ನಾಯಕರು ಮೊದಲು ಅರ್ಥ ಮಾಡಿಕೊಳ್ಳಬೇಕು ಎಂದು ಹೇಳಿದರು.

ದೇಶದಲ್ಲಿರುವ ಅಣೆಕಟ್ಟುಗಳಲ್ಲಿ ಶೇಕಡ 95 ರಷ್ಟು ನಿರ್ಮಾಣವಾಗಿದ್ದು ಕಾಂಗ್ರೆಸ್ ಆಡಳಿತದಲ್ಲಿ. ಹಾಗೆಯೇ ಐಐಎಂ, ಐಐಟಿ, ಏಮ್ಸ್, ಕ್ಷೀರಕ್ರಾಂತಿ, ಕೃಷಿ ಕ್ರಾಂತಿ, ಡಿಜಿಟಲ್ ಕ್ರಾಂತಿ ಇವೆಲ್ಲವನ್ನು ಮಾಡಿದ್ದು ನಮ್ಮ ಪಕ್ಷವೇ ಹೊರತು ಕೋಮುವಾದಿ ರಾಜಕಾರಣ ಮಾಡುತ್ತಿರುವ ಮೋದಿಯಲ್ಲ. ಅವರೇನಿದ್ದರೂ ಚೆನ್ನಾಗಿ ಭಾಷಣ ಮಾಡಬಲ್ಲರು ಅಷ್ಟೇ ಎಂದು ವ್ಯಂಗ್ಯವಾಡಿದರು.

ದೇಶದಲ್ಲಿ ಬಡವರ ಸಬಲೀಕರಣ ಆಗಬೇಕೆಂಬ ಕನಸಿನೊಂದಿಗೆ ಆಹಾರ ಭದ್ರತೆ ಮತ್ತು ಕಡ್ಡಾಯ ಶಿಕ್ಷಣದ ಕಾಯ್ದೆಗಳನ್ನು ಜಾರಿಗೆ ತಂದ ಕೀರ್ತಿ ಕಾಂಗ್ರೆಸ್ಸಿನದೇ ಆಗಿದೆ ಎಂದರು.

Vishwa News 24

Recent Posts

ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ

ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ ಬೆಂಗಳೂರು: ನವರಾತ್ರಿ ಹಬ್ಬದ ಸಂದರ್ಭದಲ್ಲಿ ರಾಜ್ಯದ ‘ಗೃಹಲಕ್ಷ್ಮಿ’…

18 minutes ago

ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು -vishwanews24

ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು ಬಂಟ್ವಾಳ : ವಾರಾಂತ್ಯದ ರಜೆಯ ಹಿನ್ನೆಲೆಯಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿವಾರಿಸಲು…

32 minutes ago

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

4 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

4 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

4 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

4 days ago