ನವದೆಹಲಿ,: ದೇಶದಾದ್ಯಂತ ಸಾರ್ವಜನಿಕ ಸ್ಥಳಗಳಲ್ಲಿ ಬುರ್ಖಾವನ್ನು ಕಡ್ಡಾಯವಾಗಿ ನಿಷೇಧ ಮಾಡುವಂತೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಶಿವಸೇನಾ ಆಗ್ರಹಿಸಿದೆ.
ಶ್ರೀಲಂಕಾದಲ್ಲಿ ಉಗ್ರರ ದಾಳಿಯ ಬಳಿಕ ಬುರ್ಖಾ ಧರಿಸಿ ಓಡಾಡುವುದನ್ನು ನಿಷೇಧಿಸಿದ ಬೆನ್ನಲ್ಲೇ ಶಿವಸೇನಾ ಈ ಒತ್ತಾಯ ಮಾಡಿದೆ.
ಭಾರತವೂ ಶ್ರೀಲಂಕಾದ ಮಾದರಿಯನ್ನೇ ಅನುಸರಿಸಿ ಬುರ್ಖಾ ನಿಷೇಧ ಮಾಡಬೇಕು ಎಂದು ಬಿಜೆಪಿಯ ಮಿತ್ರಪಕ್ಷ ಶಿವಸೇನಾ ತನ್ನ ಮುಖವಾಣಿ ‘ಸಾಮ್ನಾ’ ಪತ್ರಿಕೆಯ ಸಂಪಾದಕೀಯದಲ್ಲಿ ಹೇಳಿದೆ.
ಭಾರತದಲ್ಲಿ ತ್ರಿವಳಿ ತಲಾಖ್ ಮಾತ್ರವಲ್ಲ, ಬುರ್ಖಾವನ್ನೂ ಕೂಡ ಈಗ ನಿಷೇಧ ಮಾಡಬೇಕಿದೆ. ರಾವಣದ ರಾಜ್ಯವಾದ ಶ್ರೀಲಂಕಾದಲ್ಲಿ ಬುರ್ಖಾ ನಿಷೇಧ ಆಗಿರಬೇಕಾದರೆ, ರಾಮನ ದೇಶವಾಗಿರುವ ಭಾರತದಲ್ಲಿ ಏಕೆ ಅದನ್ನು ಜಾರಿಗೊಳಿಸಲು ಸಾಧ್ಯವಿಲ್ಲ? ಎಂದು ಶಿವಸೇನಾ ಪ್ರಶ್ನಿಸಿದೆ.
ಮಂಗಳವಾರ ಬಲಪಂಥೀಯ ಸಂಘಟನೆ ಹಿಂದೂ ಸೇನಾ ಗೃಹಸಚಿವಾಲಯಕ್ಕೆ ಪತ್ರ ಬರೆದಿತ್ತು. ದೇಶದಲ್ಲಿ ಮುಖ ಮುಚ್ಚುವ ದಿರಿಸುಗಳನ್ನು, ಬುರ್ಖಾ ಮತ್ತು ನಿಕಾಬ್‌ಗಳನ್ನು ಸಾರ್ವಜನಿಕ ಸ್ಥಳಗಳಲ್ಲಿ, ಸರ್ಕಾರಿ ಮತ್ತು ಖಾಸಗಿ ಸಂಸ್ಥೆಗಳಲ್ಲಿ ಸಂಪೂರ್ಣವಾಗಿ ನಿಷೇಧಿಸಬೇಕೆಂದು ಒತ್ತಾಯಿಸಿತ್ತು.
‘ಎಲ್ಲಾ ಸಾರ್ವಜನಿಕ ಸ್ಥಳಗಳಲ್ಲಿ, ಸರ್ಕಾರಿ ಹಾಗೂ ಖಾಸಗಿ ಸಂಸ್ಥೆಗಳ ಒಳಗೆ ಬುರ್ಖಾ, ನಿಕಾಬ್‌ನಂತಹ ಸಂಪೂರ್ಣ ಮುಖ ಮುಚ್ಚುವ ವಸ್ತ್ರಗಳನ್ನು ಧರಿಸುವುದನ್ನು ನಿಷೇಧಿಸಬೇಕು. ಈ ರೀತಿಯ ತಲೆಯನ್ನು ಸಂಪೂರ್ಣವಾಗಿ ಮುಚ್ಚುವ ಉಡುಪುಗಳು ಉಗ್ರರು ತಮ್ಮ ಗುರುತನ್ನು ಸಿಸಿಟಿವಿ ಕ್ಯಾಮೆರಾಗಳಿಂದ ಮುಚ್ಚಿಡಲು ನೆರವಾಗುತ್ತವೆ. ಶ್ರೀಲಂಕಾ ಈಗಾಗಲೇ ಈ ನೀತಿಯನ್ನು ಜಾರಿ ಮಾಡಿದೆ’ ಎಂದು ಪತ್ರದಲ್ಲಿ ಹೇಳಿದೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…