Featured

ಭಾರತವೂ ಶ್ರೀಲಂಕಾದ ಮಾದರಿಯನ್ನೇ ಅನುಸರಿಸಿ ಬುರ್ಖಾ ನಿಷೇಧ ಮಾಡಬೇಕು : ಶಿವಸೇನಾ ಆಗ್ರಹ -Vishwanews24

ನವದೆಹಲಿ,: ದೇಶದಾದ್ಯಂತ ಸಾರ್ವಜನಿಕ ಸ್ಥಳಗಳಲ್ಲಿ ಬುರ್ಖಾವನ್ನು ಕಡ್ಡಾಯವಾಗಿ ನಿಷೇಧ ಮಾಡುವಂತೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಶಿವಸೇನಾ ಆಗ್ರಹಿಸಿದೆ.

ಶ್ರೀಲಂಕಾದಲ್ಲಿ ಉಗ್ರರ ದಾಳಿಯ ಬಳಿಕ ಬುರ್ಖಾ ಧರಿಸಿ ಓಡಾಡುವುದನ್ನು ನಿಷೇಧಿಸಿದ ಬೆನ್ನಲ್ಲೇ ಶಿವಸೇನಾ ಈ ಒತ್ತಾಯ ಮಾಡಿದೆ.

ಭಾರತವೂ ಶ್ರೀಲಂಕಾದ ಮಾದರಿಯನ್ನೇ ಅನುಸರಿಸಿ ಬುರ್ಖಾ ನಿಷೇಧ ಮಾಡಬೇಕು ಎಂದು ಬಿಜೆಪಿಯ ಮಿತ್ರಪಕ್ಷ ಶಿವಸೇನಾ ತನ್ನ ಮುಖವಾಣಿ ‘ಸಾಮ್ನಾ’ ಪತ್ರಿಕೆಯ ಸಂಪಾದಕೀಯದಲ್ಲಿ ಹೇಳಿದೆ.

ಭಾರತದಲ್ಲಿ ತ್ರಿವಳಿ ತಲಾಖ್ ಮಾತ್ರವಲ್ಲ, ಬುರ್ಖಾವನ್ನೂ ಕೂಡ ಈಗ ನಿಷೇಧ ಮಾಡಬೇಕಿದೆ. ರಾವಣದ ರಾಜ್ಯವಾದ ಶ್ರೀಲಂಕಾದಲ್ಲಿ ಬುರ್ಖಾ ನಿಷೇಧ ಆಗಿರಬೇಕಾದರೆ, ರಾಮನ ದೇಶವಾಗಿರುವ ಭಾರತದಲ್ಲಿ ಏಕೆ ಅದನ್ನು ಜಾರಿಗೊಳಿಸಲು ಸಾಧ್ಯವಿಲ್ಲ? ಎಂದು ಶಿವಸೇನಾ ಪ್ರಶ್ನಿಸಿದೆ.

ಮಂಗಳವಾರ ಬಲಪಂಥೀಯ ಸಂಘಟನೆ ಹಿಂದೂ ಸೇನಾ ಗೃಹಸಚಿವಾಲಯಕ್ಕೆ ಪತ್ರ ಬರೆದಿತ್ತು. ದೇಶದಲ್ಲಿ ಮುಖ ಮುಚ್ಚುವ ದಿರಿಸುಗಳನ್ನು, ಬುರ್ಖಾ ಮತ್ತು ನಿಕಾಬ್‌ಗಳನ್ನು ಸಾರ್ವಜನಿಕ ಸ್ಥಳಗಳಲ್ಲಿ, ಸರ್ಕಾರಿ ಮತ್ತು ಖಾಸಗಿ ಸಂಸ್ಥೆಗಳಲ್ಲಿ ಸಂಪೂರ್ಣವಾಗಿ ನಿಷೇಧಿಸಬೇಕೆಂದು ಒತ್ತಾಯಿಸಿತ್ತು.

‘ಎಲ್ಲಾ ಸಾರ್ವಜನಿಕ ಸ್ಥಳಗಳಲ್ಲಿ, ಸರ್ಕಾರಿ ಹಾಗೂ ಖಾಸಗಿ ಸಂಸ್ಥೆಗಳ ಒಳಗೆ ಬುರ್ಖಾ, ನಿಕಾಬ್‌ನಂತಹ ಸಂಪೂರ್ಣ ಮುಖ ಮುಚ್ಚುವ ವಸ್ತ್ರಗಳನ್ನು ಧರಿಸುವುದನ್ನು ನಿಷೇಧಿಸಬೇಕು. ಈ ರೀತಿಯ ತಲೆಯನ್ನು ಸಂಪೂರ್ಣವಾಗಿ ಮುಚ್ಚುವ ಉಡುಪುಗಳು ಉಗ್ರರು ತಮ್ಮ ಗುರುತನ್ನು ಸಿಸಿಟಿವಿ ಕ್ಯಾಮೆರಾಗಳಿಂದ ಮುಚ್ಚಿಡಲು ನೆರವಾಗುತ್ತವೆ. ಶ್ರೀಲಂಕಾ ಈಗಾಗಲೇ ಈ ನೀತಿಯನ್ನು ಜಾರಿ ಮಾಡಿದೆ’ ಎಂದು ಪತ್ರದಲ್ಲಿ ಹೇಳಿದೆ.

Vishwa News 24

Recent Posts

ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ವಿರುದ್ಧ ಅವಹೇಳನಕಾರಿ ಹೇಳಿಕೆ: ವಿಠಲ ಗೌಡ ವಿರುದ್ಧ ಅರೆಸ್ಟ್​​​​​​ ವಾರಂಟ್ – vishwanews24

ಧರ್ಮಸ್ಥಳ ಪ್ರಕರಣ : ವಿಠಲ್‌ ಗೌಡ ವಿರುದ್ಧ ಅರೆಸ್ಟ್‌ ವಾರಂಟ್:‌ ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…

6 hours ago

ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ – vishwanews24

ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…

7 hours ago

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ – vishwanews24

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…

9 hours ago

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು – vishwanews24

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…

9 hours ago

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ – vishwanews24

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…

10 hours ago

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ – vishwanews24

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…

10 hours ago