ನವದೆಹಲಿ: ಕೆನಡಾದ ಪೌರತ್ವದ ಬಗ್ಗೆ ಆಗಾಗ್ಗೆ ಟೀಕೆಗಳನ್ನು ಎದುರಿಸುತ್ತಿರುವ ಬಾಲಿವುಡ್ ನಟ ಅಕ್ಷಯ್ ಕುಮಾರ್ ʻಭಾರತವೇ ನನಗೆ ಸರ್ವಸ್ವವಾಗಿದ್ದು, ಕೆನಡಾದ ಪೌರತ್ವ ಬದಲಾವಣೆಗೆ ಈಗಾಗಲೇ ಅರ್ಜಿ ಸಲ್ಲಿಸಿದ್ದೇನೆʼ ಎಂದು ಹೇಳಿದ್ದಾರೆ.
ಹಲವು ವರ್ಷಗಳಿಂದ ಭಾರತದಲ್ಲೇ ನೆಲೆಯೂರಿರುವ, ಭಾರತದವರೇ ಆಗಿರುವ ಅಕ್ಷಯ್ ಕುಮಾರ್ ಈವರೆಗೂ ಭಾರತದ ಪೌರತ್ವನ್ನು ಹೊಂದಿರಲಿಲ್ಲ. ಹಾಗಾಗಿ ಪೌರತ್ವದ ವಿಷಯದಲ್ಲಿ ಪದೇ ಪದೇ ಟೀಕೆಗೆ ಒಳಗಾಗುತ್ತಿದ್ದರು.
ಆದ್ರೆ, ಇದೀಗ ಕೆನಡಾ ಪೌರತ್ವ ಬದಲಾಯಿಸಲು ನಿರ್ಧರಿಸಿರುವುದಾಗಿ ಸ್ವತಃ ಅವರೇ ಸಂದರ್ಶನವೊಂದರಲ್ಲಿ ಹೇಳಿಕೊಂಡಿದ್ದಾರೆ. ಈ ಬಗ್ಗೆ ಮಾತನಾಡಿರುವ ಅಕ್ಷಯ್, ʻಭಾರತವೇ ನನಗೆ ಸರ್ವಸ್ವ. ಅದು ಎಲ್ಲವನ್ನೂ ನನಗೆ ಕೊಟ್ಟಿದೆ. ನಾನು ಇಲ್ಲಿಯವನು ಎಂದು ಹೇಳಿಕೊಳ್ಳಲು ಹೆಮ್ಮೆ ಅನಿಸುತ್ತದೆ. ನಾನು ಗಳಿಸಿದ್ದೆಲ್ಲ ಇಲ್ಲಿಂದ, ಅದನ್ನು ಮರಳಿ ಕೊಡುವ ಅವಕಾಶ ಸಿಕ್ಕಿರುವುದು ನನ್ನ ಅದೃಷ್ಟ. ಆದ್ರೆ, ಜನರು ಅದನ್ನು ತಿಳಿಯದೇ ಮಾತನಾಡೋದು ಬೇಸರವಾಗುತ್ತದೆʼ ಎಂದಿದ್ದಾರೆ.
1990ರ ದಶಕದಲ್ಲಿ ಅಕ್ಷಯ್ ಬಹುತೇಕ ಚಿತ್ರಗಳು ಬಾಕ್ಸ್ ಆಫೀಸಿನಲ್ಲಿ ಮಕಾಡೆ ಮಲಗಿದವು. ರಿಲೀಸ್ ಆದ ಅಷ್ಟೂ ಸಿನಿಮಾಗಳು ಸೋತವು. ಈ ಕಾರಣದಿಂದಾಗಿ ಅವರು ಕೆನಡಾ ಪೌರತ್ವಕ್ಕೆ ಅರ್ಜಿ ಸಲ್ಲಿಸಿರುವುದಾಗಿ ಹೇಳಿಕೊಂಡಿದ್ದಾರೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…