ಇಸ್ಲಾಮಾಬಾದ್ :,- ಜೈಷ್ ಎ ಮೊಹಮ್ಮದ್ ಸಂಘಟನೆಯ ಮುಖ್ಯಸ್ಥ ಉಗ್ರ ಮಸೂದ್ ಅಜರ್ ಆಡಿಯೋ ಧ್ವನಿಮುದ್ರಿಕೆಯನ್ನು ಬಿಡಗುಡೆ ಮಾಡಿದ್ದು, ಭಾರತಕ್ಕೆ ಬೇಕಾಗಿರುವ ಉಗ್ರ ಮಸೂದ್ ಅಜರ್ ಇನ್ನೂ ಬದುಕಿದ್ದೇನೆ. ಚೆನ್ನಾಗಿಯೇ ಇದ್ದೇನೆ ಎಂದಿದ್ದಾನೆ.
ಅಷ್ಟೇ ಅಲ್ಲದೆ ತನ್ನ ಹಿಂಬಾಲಕರಿಗೆ ಭಾರತೀಯರ ವಿರುದ್ಧ ಜಿಹಾದ್ ಆರಂಭಿಸಬೇಕು ಎಂದು ಕರೆ ನೀಡಿದ್ದಾನೆ. 11.41 ನಿಮಿಷಗಳ ತನ್ನಆಡಿಯೋದಲ್ಲಿ, ಪುಲ್ವಾಮಾ ದಾಳಿ ಹಾಗೂ ಪಾಕ್‍ನಲ್ಲಿರುವ ಪ್ರಗತಿಪರರ ಬಗ್ಗೆ ಮಾತನಾಡಿದ್ದು, ಮಾಧ್ಯಮಗಳಲ್ಲಿ ಹರಡುತ್ತಿರುವ ತನ್ನ ಸಾವಿನ ಕುರಿತು ಸುಳ್ಳು ವದಂತಿ ಬಗ್ಗೆ ಪ್ರಸ್ತಾಪಿಸಿದ್ದು, ನಾನು ಇನ್ನು ಬದುಕಿದ್ದೇನೆ ಎಂದ್ದಿದಾನೆ.
ಪಾಕಿಸ್ತಾನಕ್ಕೆ ಎಲ್ಲ ಕಡೆಗಳಿಂದಲೂ ಒತ್ತಡ ಹಾಕುತ್ತಿರುವ ಭಾರತದ ವಿರುದ್ಧ ಹರಿಹಾಯ್ದಿರುವ ಅಜರ್, ಭಾರತದ ಒತ್ತಡಕ್ಕೆ ಮಣಿದಿರುವ ಪಾಕಿಸ್ತಾನದ ಬಗ್ಗೆಯೂ ಕಿಡಿಕಾರಿದ್ದಾನೆ. ಜೊತೆಗೆ ಭಾರತದ ತಂತ್ರವನ್ನು ಅರ್ಥಮಾಡಿಕೊಳ್ಳುವಲ್ಲಿ ಪಾಕಿಸ್ತಾನ ರಾಜಕೀಯ ವಿಫಲವಾಗಿದೆ ಎಂದಿದ್ದಾನೆ.
ಭಾರತದಲ್ಲಿ ಭಯೋತ್ಪಾದನೆ ಮೂಲಕ ಅನೇಕ ವಿಧ್ವಂಸಕ ಕೃತ್ಯಗಳಿಗೆ ಕಾರಣವಾಗಿದ್ದ ಪಾಕಿಸ್ತಾನದ ಜೈಷ್-ಎ-ಮೊಹಮ್ಮದ್ ಉಗ್ರಗಾಮಿ ಸಂಘಟನೆಯ ಮುಖ್ಯಸ್ಥ ಮತ್ತು ಕುಖ್ಯಾತ ಭಯೋತ್ಪಾದಕ ಮೌಲಾನಾ ಮಸೂದ್ ಅಜರ್ ಮೃತಪಟ್ಟಿದ್ದಾನೆ ಎಂಬ ಸುದ್ದಿ ಇತ್ತೀಚೆಗಷ್ಟೇ ಹರಿದಾಡಿತ್ತು.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…