ಭಾರತೀಯ ಕ್ರೀಡಾ ಪ್ರಾಧಿಕಾರದ ಉನ್ನತ ತರಬೇತುದಾರರ ಬಳಿ ನಾನು ಕರ್ನಾಟಕದ ಶ್ರೀನಿವಾಸ ಗೌಡರನ್ನು ಆಹ್ವಾನಿಸುತ್ತೇನೆ. : ಕ್ರೀಡಾ ಸಚಿವ ಕಿರಣ್‌‌ ರಿಜಿಜು -Vishwanews24

ಹೊಸದಿಲ್ಲಿ:ಶ್ರೀನಿವಾಸ ಗೌಡರನ್ನು ಕರೆಸಿ ಪರಿಣಿತರಿಂದ ತರಬೇತಿ ಕೊಡಿಸಲಾಗುವುದು ಎಂದು ಕ್ರೀಡಾ ಸಚಿವ ಕಿರಣ್‌‌ ರಿಜಿಜು ಅವರು ಟ್ವೀಟ್‌ ಮೂಲಕ ತಿಳಿಸಿದ್ದಾರೆ.

ಈ ಸಂಬಂಧ ಟ್ಟೀಟ್‌ ಮಾಡಿರುವ ಅವರು, “ಭಾರತೀಯ ಕ್ರೀಡಾ ಪ್ರಾಧಿಕಾರದ ಉನ್ನತ ತರಬೇತುದಾರರ ಬಳಿಗೆ ಟ್ರಯಲ್ಸ್‌ಗೆ ನಾನು ಕರ್ನಾಟಕದ ಶ್ರೀನಿವಾಸ ಗೌಡರನ್ನು ಆಹ್ವಾನಿಸುತ್ತೇನೆ. ಒಲಿಂಪಿಕ್ಸ್‌ನ ಮಾನದಂಡಗಳ ಬಗ್ಗೆ ಜನಸಾಮಾನ್ಯರಲ್ಲಿ ಜ್ಞಾನದ ಕೊರತೆಯಿದೆ. ವಿಶೇಷವಾಗಿ ಅಥ್ಲೆಟಿಕ್ಸ್‌ನಲ್ಲಿ ಮಾನವನ ಸಾಮರ್ಥ್ಯ ಮತ್ತು ಶಕ್ತಿಯ ಅಂತಿಮಘಟ್ಟವನ್ನು ಮೀರಿಸಲಾಗುತ್ತದೆ. ಭಾರತದಲ್ಲಿ ಯಾವುದೇ ಪ್ರತಿಭೆಗಳನ್ನು ಪರೀಕ್ಷಿಸದೆ ಬಿಡುವುದಿಲ್ಲ ಎಂಬುದನ್ನು ನಾನು ಖಾತರಿಪಡಿಸುತ್ತೇನೆ,” ಎಂದು ಅವರು ಹೇಳಿದ್ದಾರೆ.

ಫೆಬ್ರವರಿ 1ರಂದು ಮಂಗಳೂರು ಸಮೀಪದ ಐಕಳ ಎಂಬಲ್ಲಿ ನಡೆದ ಕಂಬಳ ಕ್ರೀಡಾಕೂಟದಲ್ಲಿ ಪಾಲ್ಗೊಂಡಿದ್ದ ಮೂಡಬಿದಿರೆ ಮೀಯಾರಿನ ಶ್ರೀನಿವಾಸಗೌಡ ಅವರು 142.50 ಮೀಟರ್‌ ಉದ್ದದ ಕಂಬಳದ ಗದ್ದೆಯಲ್ಲಿ ಕೇವಲ 13.62 ಸೆಕೆಂಡುಗಳಲ್ಲಿ ಕೋಣಗಳನ್ನು ಓಡಿಸಿಕೊಂಡು ಗುರಿ ತಲುಪಿದ್ದರು. ಇದನ್ನು 100 ಮೀಟರ್‌ ಇಳಿಸಿದರೆ ತಗುಲುವ ಸೆಕೆಂಡುಗಳು ಕೇವಲ 9.55! ಅಂದರೆ ಉಸೇನ್‌ ಬೋಲ್ಟ್‌ ನಿರ್ಮಿಸಿದ ದಾಖಲೆಗಿಂತ 0.3 ಸೆಕೆಂಡ್‌ ಕಡಿಮೆ ಅವಧಿಯಲ್ಲೇ ತಲುಪಿದ್ದರು.

ಈ ಸುದ್ದಿ ಗುರುವಾರ, ಶುಕ್ರವಾರವಿಡೀ ಸಾಮಾಜಿಕ ಜಾಲತಾಣಗಳಲ್ಲಿ ಸುದ್ದಿಯಾಗಿತ್ತು. ಹಲವರು ಶ್ರೀನಿವಾಸ ಗೌಡ ಅವರಿಗೆ ತರಬೇತಿ ನೀಡಿ ಕ್ರೀಡಾಕೂಟದಲ್ಲಿ ಅವರನ್ನು ಓಡಿಸುವಂತೆ ಕೇಂದ್ರ ಕ್ರೀಡಾ ಸಚಿವ ಕಿರಣ್‌ ರಿಜಿಜು ಅವರರಿಗೆ ಮನವಿ ಮಾಡಿಕೊಂಡಿದ್ದರು. ಇದಕ್ಕೀಗ ಕಿರಣ್‌ ರಿಜಿಜು ಸಕಾರಾತ್ಮಕವಾಗಿ ಪ್ರತಿಕ್ರಿಯಿಸಿದ್ದಾರೆ.

 

Vishwa News 24

Recent Posts

ಈ ಬಾರಿ ದಸರಾ ಮಹೋತ್ಸವದಲ್ಲಿ ಅಂಬಾರಿ ಹೊತ್ತು ಸಾಗಲಿರುವ ದುಬಾರೆ ವೀರ ಪ್ರಶಾಂತ​ ಆನೆ – vishwanews24

ಈ ಬಾರಿ ದಸರಾ ಮಹೋತ್ಸವದಲ್ಲಿ ಅಂಬಾರಿ ಹೊತ್ತು ಸಾಗಲಿರುವ ದುಬಾರೆ ವೀರ ಪ್ರಶಾಂತ​ ಆನೆ ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು…

20 hours ago

ಬೆಳ್ತಂಗಡಿ: ನಾವೂರಿನ ಆರೋಗ್ಯ ಕ್ಲಿನಿಕ್‌ಗೆ ಬೆಂಕಿ ಹಚ್ಚಿದ ಪ್ರಕರಣ; ಓರ್ವನ ಬಂಧನ, ಇಬ್ಬರು ವಶಕ್ಕೆ – vishwanews24

ಬೆಳ್ತಂಗಡಿ: ನಾವೂರಿನ ಆರೋಗ್ಯ ಕ್ಲಿನಿಕ್‌ಗೆ ಬೆಂಕಿ ಹಚ್ಚಿದ ಪ್ರಕರಣ; ಓರ್ವನ ಬಂಧನ, ಇಬ್ಬರು ವಶಕ್ಕೆ ಬೆಳ್ತಂಗಡಿ: ನಾವೂರು ಗ್ರಾಮದ ಸ್ವಾತಿ…

21 hours ago

ಮಂಗಳೂರು: ನಿಯಮಬಾಹಿರವಾಗಿ ಶಾಲಾ ಮಕ್ಕಳ ಸಾಗಾಟ ; 30 ವಾಹನಗಳ ಮೇಲೆ ಕೇಸು ದಾಖಲು – vishwanews24

ಮಂಗಳೂರು: ನಿಯಮಬಾಹಿರವಾಗಿ ಶಾಲಾ ಮಕ್ಕಳ ಸಾಗಾಟ ; 30 ವಾಹನಗಳ ಮೇಲೆ ಕೇಸು ದಾಖಲು ಮಂಗಳೂರು: ಮಂಗಳೂರು ಪ್ರಾದೇಶಿಕ ಸಾರಿಗೆ…

21 hours ago

ಇಂದು ಉಚ್ಚಿಲ ಮಹಾಲಕ್ಷ್ಮಿ ದೇವಸ್ಥಾನಕ್ಕೆ ಡಿ.ಕೆ.ಶಿವಕುಮಾರ್ ಭೇಟಿ – vishwanews24

ಕಾಪು: ಇಂದು ಉಚ್ಚಿಲ ಮಹಾಲಕ್ಷ್ಮಿ ದೇವಸ್ಥಾನಕ್ಕೆ ಡಿ.ಕೆ.ಶಿವಕುಮಾರ್ ಭೇಟಿ ಉಡುಪಿ: ಐದನೇ ವರ್ಷದ ಉಚ್ಚಿಲ ದಸರಾ ಲಲಿತ ಪಂಚಮಿಯ ಸಂಭ್ರಮ…

21 hours ago

ಉಡುಪಿ ಉಚ್ಚಿಲ ದಸರಾ: ಅ.17ರಂದು ಮಹಾಲಕ್ಷ್ಮೀ ಬ್ಯಾಂಕ್ ವತಿಯಿಂದ ಚಿತ್ರಕಲೆ ಸ್ಪರ್ಧೆ : ಯಶ್ಪಾಲ್ ಸುವರ್ಣ – vishwanews24

ಉಡುಪಿ ಉಚ್ಚಿಲ ದಸರಾ: ಅ.17ರಂದು ಮಹಾಲಕ್ಷ್ಮೀ ಬ್ಯಾಂಕ್ ವತಿಯಿಂದ ಚಿತ್ರಕಲೆ ಸ್ಪರ್ಧೆ : ಯಶ್ಪಾಲ್ ಸುವರ್ಣ ಉಡುಪಿ: ಉಚ್ಚಿಲ ಮಹಾಲಕ್ಷ್ಮೀ…

21 hours ago

ಕೋಳಿಮರಿ ವಿತರಣೆ : ಉಡುಪಿ ತಾಲೂಕಿನ ಗ್ರಾಮೀಣ ರೈತ ಮಹಿಳೆಯರಿಗೆ ಅರ್ಜಿ ಆಹ್ವಾನ – vishwanews24

 ಕೋಳಿಮರಿ ವಿತರಣೆ: ಉಡುಪಿ ತಾಲೂಕಿನ ಗ್ರಾಮೀಣ ರೈತ ಮಹಿಳೆಯರಿಗೆ ಅರ್ಜಿ ಆಹ್ವಾನ  ಉಡುಪಿ: ಕರ್ನಾಟಕ ಸಹಕಾರ ಕುಕ್ಕುಟ ಮಹಾಮಂಡಳ ನಿಯಮಿತ…

21 hours ago