ಪದ್ಮಶ್ರೀ ಡಾ ಟಿ. ಎಂ. ಎ . ಪೈ ರಿಂದ ಸ್ಥಾಪಿತವಾಗಿ ಸುವರ್ಣ ಮಹೋತ್ಸವ ಹೊಸ್ತಿಲಲ್ಲಿರುವ ಮಣಿಪಾಲದ ಅಕಾಡಮಿ ಆಫ್ ಜನರಲ್ ಎಜುಕೇಶನ್ (AGE) ಪ್ರತಿಷ್ಠಿತ ಶಿಕ್ಷಣ ಸಂಸ್ಥೆಗಳ ಘಟಕ ಟಿ ಎ ಪೈ ಇಂಗ್ಲಿಷ್ ಮೀಡಿಯಂ ಹೈಸ್ಕೂಲ್, ಕುಂಜಿಬೆಟ್ಟು, ಉಡುಪಿ ಯ 9ನೇ ತರಗತಿಯ ವಿದ್ಯಾರ್ಥಿ ದೀಪೇಶ್ ದೀಪಕ್ ಶೆಣೈ ಯವರು, ಪ್ರತಿಷ್ಠಿತ ಭಾರತೀಯ ಚಾರ್ಟರ್ಡ್ ಅಕೌಂಟೆಂಟ್ಸ್ ಸಂಸ್ಥೆಯವರು (ICAI) ನಡೆಸಿದ ಕಾಮರ್ಸ್ ಒಲಿಂಪಿಯಾಡ್ 2025 ಸ್ಪರ್ಧೆಯಲ್ಲಿ ಅಖಿಲ ಭಾರತೀಯ 12ನೇ ರ‍್ಯಾಂಕ್ ಪಡೆದು ಅತ್ಯುನ್ನತ ಸಾಧನೆ ಮಾಡಿದ್ದಾರೆ.
ಈ ಸ್ಪರ್ಧೆಯನ್ನು ಸಂಸತ್ ಅಧಿನಿಯಮದ ಮೂಲಕ ಸ್ಥಾಪಿತವಾದ ಕಾನೂನುಬದ್ಧ ಸಂಸ್ಥೆ ಭಾರತೀಯ ಚಾರ್ಟರ್ಡ್ ಅಕೌಂಟೆಂಟ್ಸ್ ಕಾಯ್ದೆ, 1949 (ಕಾಯ್ದೆ ಸಂಖ್ಯೆ XXXVIII of 1949) ಅಡಿಯಲ್ಲಿ ಸ್ಥಾಪಿತವಾದ ಭಾರತೀಯ ಚಾರ್ಟರ್ಡ್ ಅಕೌಂಟೆಂಟ್ಸ್ ಸಂಸ್ಥೆ (ICAI) ಯ ಉದ್ಯೋಗ ಮಾರ್ಗದರ್ಶನ ಸಮಿತಿ (CCC) ಆಯೋಜಿಸಿತ್ತು.
ಈ ಸಾಧನೆಯ ಬಗ್ಗೆ ಅತೀವ ಹರ್ಷ ವ್ಯಕ್ತಪಡಿಸಿದ ಶಾಲಾ ಮುಖ್ಯೋಪಾಧ್ಯಾಯಿನಿ ಶ್ರೀಮತಿ ವಿನೋದ ಶೆಟ್ಟಿ (+91 94816 13116) ಯವರು, ಶಾಲಾ ಆಡಳಿತ ಮಂಡಳಿ, ಮಣಿಪಾಲದ AGE ಶಿಕ್ಷಣ ಸಂಸ್ಥೆಗಳು, ಶಾಲಾ ಪೋಷಕರ ಮತ್ತು ಶಿಕ್ಷಕರ ಸಂಘ (PTA), ಹಳೆ ವಿದ್ಯಾರ್ಥಿ ಸಂಘಟನೆ, ಮತ್ತು ಎಲ್ಲಾ ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ದೀಪೇಶ್‌ಗೆ ಹೃದಯಪೂರ್ವಕ ಅಭಿನಂದನೆಗಳು ತಿಳಿಸಿ, ಭವಿಷ್ಯದ ಯಶಸ್ಸಿಗೆ ಶುಭ ಹಾರೈಸಿದ್ದಾರೆಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…
ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಶಿಳ್ಳೆ ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್ ಭಟ್ ಗರಂ ಮಂಗಳೂರು: ಯಕ್ಷಗಾನ…
ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…
SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…
ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಮಂಗಳೂರು…
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…