ಭಾರತೀಯ ಜನತಾ ಪಕ್ಷದ ನೂತನ ರಾಷ್ಟ್ರೀಯ ಅಧ್ಯಕ್ಷರಾಗಿ ಜಗತ್ ಪ್ರಕಾಶ್ ನಡ್ಡಾ ಆಯ್ಕೆ -Vishwanews24

ನವದೆಹಲಿ : ಭಾರತೀಯ ಜನತಾ ಪಕ್ಷದ ನೂತನ ರಾಷ್ಟ್ರೀಯ ಅಧ್ಯಕ್ಷರಾಗಿ ಜಗತ್ ಪ್ರಕಾಶ್ ನಡ್ಡಾ ಅವರು ಇಂದು ಆಯ್ಕೆಗೊಂಡಿದ್ದಾರೆ.

ಪಕ್ಷದ ವಲಯದಲ್ಲಿ ಜೆ.ಪಿ, ನಡ್ಡಾ ಎಂದೇ ಕರೆಯಲ್ಪಡುವ ನಡ್ಡಾ ಅವರು ನಿರ್ಗಮನ ಅಧ್ಯಕ್ಷರಾಗಿರುವ ಅಮಿತ್ ಶಾ ಅವರಂತೆಯೇ ಸಂಘಟನಾ ಚತುರ ಎಂದೇ ಪಕ್ಷದೊಳಗೆ ಗುರುತಿಸಲ್ಪಟ್ಟಿದ್ದು ನಡ್ಡಾ ಅವರು ಪ್ರಧಾನಿ ಮೋದಿ ಹಾಗೂ ಗೃಹ ಸಚಿವ ಅಮಿತ್ ಶಾ ಅವರಿಗೆ ಪರಮಾಪ್ತರಾಗಿದ್ದಾರೆ.

ಕಳೆದ ಲೋಕಸಭಾ ಚುನಾವಣೆಯ ಬಳಿಕ ಪಕ್ಷದ ರಾಷ್ಟ್ರಾಧ್ಯಕ್ಷರಾಗಿದ್ದ ಅಮಿತ್ ಶಾ ಅವರು ಗೃಹಮಂತ್ರಿಯಾದ ನಂತರ ಜೆ.ಪಿ. ನಡ್ಡಾ ಅವರು ಕಾರ್ಯಾಧ್ಯಕ್ಷರಾಗಿ ನಿಯುಕ್ತಿಗೊಂಡಿದ್ದರು.

ಕೇಂದ್ರ ಸಚಿವರು, ಬಿಜೆಪಿ ಆಡಳಿತದಲ್ಲಿರುವ ರಾಜ್ಯಗಳ ಸಚಿವರು ಪಕ್ಷದ ಕೇಂದ್ರ ಕಛೇರಿಯಲ್ಲಿ ನಡ್ಡಾ ಅವರ ಪರ ನಾಮಪತ್ರ ಸಲ್ಲಿಸಲು ಹಾಜರಿದ್ದರು.

36 ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳ ಪೈಕಿ 21 ಕಡೆಗಳಲ್ಲಿ ಪಕ್ಷದ ಆಂತರಿಕ ಚುನಾವಣಾ ಪ್ರಕ್ರಿಯೆ ಪೂರ್ಣಗೊಂಡ ಬಳಿಕ ಸಾಂಸ್ಥಿಕ ಚುನಾವಣಾ ಜವಾಬ್ದಾರಿಯನ್ನು ವಹಿಸಿಕೊಂಡಿರುವ ಪಕ್ಷದ ಹಿರಿಯ ನಾಯಕ ರಾಧಾ ಮೋಹನ್ ಸಿಂಗ್ ಅವರು ಚುನಾವಣಾ ಕಾರ್ಯಸೂಚಿಯನ್ನು ಪ್ರಕಟಿಸಿ ಪಿ. ನಡ್ಡಾ ಅವರು ಪಕ್ಷದ ರಾಷ್ಟ್ರಾಧ್ಯಕ್ಷರಾಗಿ ಅಧಿಕೃತವಾಗಿ ಆಯ್ಕೆಯಾಗಿರುವುದನ್ನು ಪ್ರಕಟಿಸಿದರು.

 

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

3 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

3 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

3 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

3 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

3 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

3 days ago