ಕಾಪು :ಸೂಕ್ತ ಸಂದರ್ಭದಲ್ಲಿ ದೇಶದಲ್ಲಿ ಮೀಸಲಾತಿ ವ್ಯವಸ್ಥೆಯನ್ನು ಸ್ಥಗಿತಗೊಳಿಸುತ್ತೇವೆ ಎಂದು ಲೋಕಸಭೆಯ ವಿಷಕ್ಷ ನಾಯಕ ರಾಹುಲ್ ಗಾಂಧಿಯವರು ಅಮೇರಿಕಾದಲ್ಲಿ ನೀಡಿರುವ ಹೇಳಿಕೆಯನ್ನು ಖಂಡಿಸಿ ಭಾರತೀಯ ಜನತಾ ಪಾರ್ಟಿ ಕಾಪು ಮಂಡಲ ಮತ್ತು ಎಸ್.ಸಿ ಮೋರ್ಚಾ ವತಿಯಿಂದ ರಾಹುಲ್ ಗಾಂಧಿ ವಿರುದ್ಧ ಬೃಹತ್ ಪ್ರತಿಭಟನೆಯನ್ನು ಕಾಪು ಪೇಟೆಯಲ್ಲಿ ಇಂದು ಮಂಡಲ ಅಧ್ಯಕ್ಷರಾದ ಜಿತೇಂದ್ರ ಶೆಟ್ಟಿಯವರ ಉಪಸ್ಥಿತಿಯಲ್ಲಿ ನಡೆಸಲಾಯಿತು.
ಈ ಸಂದರ್ಭದಲ್ಲಿ ಕ್ಷೇತ್ರದ ನಿಕಟಪೂರ್ವ ಶಾಸಕರಾದ ಲಾಲಾಜಿ ಆರ್ ಮೆಂಡನ್‌ರವರು ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡಿದರು. ಈ ಸಂದರ್ಭದಲ್ಲಿ ರಾಜ್ಯ ಎಸ್.ಸಿ ಮೋರ್ಚಾ ಉಪಾಧ್ಯಕ್ಷರಾದ ದಿನಕರ್ ಬಾಬು ಜಿಲ್ಲಾ ಉಪಾಧ್ಯಕ್ಷರಾದ ಪ್ರಕಾಶ್ ಶೆಟ್ಟಿ ಪಾದೆಬೆಟ್ಟು, ಜಿಲ್ಲಾ ಮಹಿಳಾ ಮೋರ್ಚಾದ ಅಧ್ಯಕ್ಷರಾದ ಸಂಧ್ಯಾ ರಮೇಶ್, ಜಿಲ್ಲಾ ಕಾರ್ಯದರ್ಶಿ ಶ್ರೀಕಾಂತ್ ನಾಯಕ್, ಜಿಲ್ಲಾ ಎಸ್.ಸಿ ಮೋರ್ಚಾ ಅಧ್ಯಕ್ಷರಾದ ಚಂದ್ರ ಪಂಚವಟಿ, ಕ್ಷೇತ್ರ ಪ್ರಧಾನಕಾರ್ಯದರ್ಶಿಯಾದ ಗೋಪಾಲಕೃಷ್ಣ ರಾವ್, ಕ್ಷೇತ್ರ ಕಾರ್ಯದರ್ಶಿ ಎಂ.ಜಿ ನಾಗೇಂದ್ರ, ಮಹಿಳಾ ಮೋರ್ಚಾ ಅಧ್ಯಕ್ಷರಾದ ಶ್ರೀಮತಿ ನೀತಾ ಗುರುರಾಜ್, ರೈತ ಮೋರ್ಚಾ ಅಧ್ಯಕ್ಷರಾದ ಕೃಷ್ಣ ರಾವ್,À ಜಿಲ್ಲಾ ಎಸ್.ಸಿ ಮೋರ್ಚಾ ಉಪಾಧ್ಯಕ್ಷರಾದ ಸದಾನಂದ, ಎಸ್.ಸಿ ಮೋರ್ಚಾ ಪ್ರಮುಖರಾದ ಪಾರ್ಥ ಸಾರಥಿ, ಚಂದ್ರ ಮಲ್ಲಾರು, ಕಾರ್ಯಾಲಯ ಕಾರ್ಯದರ್ಶಿ ಅನಿಲ್ ಶೆಟ್ಟಿ ಮಲ್ಲಾರು ಮತ್ತು ಪಕ್ಷದ ವಿವಿಧ ಸ್ತರದ ಜನಪ್ರತಿನಿಧಿಗಳು, ಪಕ್ಷದ ಪ್ರಮುಖರು ಉಪಸ್ಥಿತರಿದ್ದರು.
ಮೈಸೂರು: ಕಾಲೇಜು ಕ್ಯಾಂಪಸ್‌ನಲ್ಲೇ ಹೃದಯಾಘಾತ ; ಕುಸಿದುಬಿದ್ದು ವಿದ್ಯಾರ್ಥಿ ಸಾವು ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನ ಖ್ಯಾತ ಮರಿಮಲ್ಲಪ್ಪ ಕಾಲೇಜು…
ಅಡ್ಡ ಮತದಾನ ಮೂಲಕ ಪಕ್ಷಕ್ಕೆ ಹಾಗೂ ಮೈತ್ರಿಗೆ ದ್ರೋಹ ಬಗೆದವರನ್ನು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ : ವಿಜಯೇಂದ್ರ ಆಕ್ರೋಶ ಬೆಂಗಳೂರು:…
ಭಟ್ಕಳ ಲವ್ ಜಿಹಾದ್ ಆರೋಪ : ಯುವಕ ಅರೆಸ್ಟ್ ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ ಕಿಚ್ಚು ಹಚ್ಚಿದ ಹಿಂದೂ,…
ಪರಿಷತ್ ಚುನಾವಣೆಯಲ್ಲಿ ನಮಗೆ ಮತ ನೀಡಿದ ಬೇರೆ ಪಕ್ಷದ ವಿಶ್ವಾಸವನ್ನುನಾವು ಉಳಿಸಿಕೊಳ್ಳುತ್ತೇವೆ: ಡಿ.ಕೆ.ಶಿವಕುಮಾರ್ ಬೆಂಗಳೂರು: ವಿಧಾನ ಪರಿಷತ್ ಚುನಾವಣೆಯಲ್ಲಿ ನಮ್ಮ…
ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ: ಜೂ. 30ಕ್ಕೆ ಮುಂದೂಡಿಕೆ ದಾವಣಗೆರೆ: ಹರಿಹರದ ವಚನಾನಂದ ಸ್ವಾಮೀಜಿ ಪೋಕ್ಸೋ ಪ್ರಕರಣ ಆದೇಶವನ್ನು…
ವಿಟ್ಲ : ಲಾರಿಯಲ್ಲಿ ತಾಂತ್ರಿಕ ವೈಫಲ್ಯ - ಸರಿಪಡಿಸುವ ವೇಳೆ ಚಕ್ರಗಳ ಅಡಿಗೆ ಸಿಲುಕಿ ಚಾಲಕ ಸ್ಥಳದಲ್ಲೇ ಮೃತ್ಯು ವಿಟ್ಲ:…