Featured

ಭಾರತೀಯ ನೌಕಾಪಡೆಯಲ್ಲಿ ಸಬ್ ಲೆಫ್ಟಿನೆಂಟ್ ಆಗಿ ಮಂಗಳೂರಿನ ನಿಶೆಲ್ ಫ್ಲೋರಾ ಆಲ್ಮೇಡಾ ಆಯ್ಕೆ – vishwanews24

ಭಾರತೀಯ ನೌಕಾಪಡೆಯಲ್ಲಿ ಸಬ್ ಲೆಫ್ಟಿನೆಂಟ್ ಆಗಿ ಮಂಗಳೂರಿನ ನಿಶೆಲ್ ಫ್ಲೋರಾ ಆಲ್ಮೇಡಾ ಆಯ್ಕೆ

ಮಂಗಳೂರು: ನಗರದ ಕುಲಶೇಖರದ ಕೊಂಗೂರು ನಿವಾಸಿಗಳಾದ ನವೀನ್ ಆಲ್ಮೆಡಾ ಹಾಗೂ ಕ್ರಿಸ್ ಎವರ್ಟ್ ಡಿಸೋಜ ದಂಪತಿಯ ಪುತ್ರಿ ನಿಶೆಲ್ ಫ್ಲೋರಾ ಆಲ್ಮೆಡಾ ಅವರು ಭಾರತೀಯ ನೌಕಾಪಡೆಯಲ್ಲಿ ಸಬ್ ಲೆಫ್ಟಿನೆಂಟ್ ಅಧಿಕಾರಿಯಾಗಿ ಆಯ್ಕೆಯಾಗುವ ಮೂಲಕ ಮಂಗಳೂರಿಗೆ ಮತ್ತೊಂದು ಹೆಮ್ಮೆಯ ಸಾಧನೆ ತಂದುಕೊಟ್ಟಿದ್ದಾರೆ.

2016ರಲ್ಲಿ ಮಂಗಳೂರಿನ ಕೊಡಿಯಾಲ್ಬೈಲ್ನ ಸಂತ ಎಲೋಶಿಯಸ್ ಪ್ರೌಢಶಾಲೆಯಲ್ಲಿ ವಿದ್ಯಾಭ್ಯಾಸ ಆರಂಭಿಸಿದ ನಿಶೆಲ್, ವಿದ್ಯಾರ್ಥಿ ಜೀವನದಲ್ಲಿಯೇ ವಿವಿಧ ಕ್ಷೇತ್ರಗಳಲ್ಲಿ ತಮ್ಮ ಪ್ರತಿಭೆಯನ್ನು ಅನಾವರಣಗೊಳಿಸಿದ್ದರು. ಎನ್ಸಿಸಿ ತರಬೇತಿ ಪಡೆದು, ಆರ್ಡಿಸಿ ಕ್ಯಾಂಪ್ ಮೂಲಕ ಗಣರಾಜ್ಯೋತ್ಸವ ಪರೇಡ್ನಲ್ಲಿ ಶಾಲೆಯನ್ನು ಪ್ರತಿನಿಧಿಸಿದ ಪ್ರಪ್ರಥಮ ವಿದ್ಯಾರ್ಥಿನಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದರು.

ಇದನ್ನೂ ಓದಿ:

ನಾಯಕತ್ವ, ನೃತ್ಯ, ಸಂಗೀತ, ಚಿತ್ರಕಲೆ, ಕ್ರೀಡೆ, ಕರಾಟೆ, ಶಿಕ್ಷಣ ಹಾಗೂ ಕಾರ್ಯಕ್ರಮ ನಿರೂಪಣೆ ಸೇರಿದಂತೆ ಹಲವು ಕ್ಷೇತ್ರಗಳಲ್ಲಿ ತಮ್ಮ ಸಾಮರ್ಥ್ಯ ತೋರಿದ ನಿಶೆಲ್, ಬಳಿಕ ಏರೋನಾಟಿಕಲ್ ಇಂಜಿನಿಯರಿಂಗ್ನಲ್ಲಿ ಉನ್ನತ ಶ್ರೇಣಿ ಪಡೆದು ಸರ್ವಿಸ್ ಸೆಲೆಕ್ಷನ್ ಬೋರ್ಡ್ (SSB) ಪ್ರಕ್ರಿಯೆಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದ್ದಾರೆ.

ಪ್ರಸ್ತುತ ಭಾರತೀಯ ನೌಕಾಪಡೆಯಲ್ಲಿ ಸಬ್ ಲೆಫ್ಟಿನೆಂಟ್ ಅಧಿಕಾರಿಯಾಗಿ ಆಯ್ಕೆಯಾಗಿರುವ ಅವರು ನಗರಕ್ಕೆ ಆಗಮಿಸುತ್ತಿದ್ದು, ಯುವಜನತೆ ಹಾಗೂ ವಿದ್ಯಾರ್ಥಿಗಳಿಗೆ ತಮ್ಮ ಪರಿಶ್ರಮ, ಸಮರ್ಪಣೆ ಮತ್ತು ಪ್ರಾಮಾಣಿಕತೆಯ ಮೂಲಕ ಮಾದರಿಯಾಗಿದ್ದಾರೆ.

ಇದನ್ನೂ ಓದಿ:

ಈ ಸಾಧನೆಯ ಅಂಗವಾಗಿ ಕೊಂಗೂರು ನಿವಾಸಿಗಳು ಹಾಗೂ ವಾರ್ಡ್ ಸದಸ್ಯರು ಮೇ 29ರಂದು ನಿಶೆಲ್ ಫ್ಲೋರಾ ಆಲ್ಮೆಡಾ ಅವರಿಗೆ ಗೌರವಾದರದ ಸ್ವಾಗತ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದಾರೆ. ತೆರೆದ ವಾಹನದಲ್ಲಿ ಅವರನ್ನು ತವರಿಗೆ ಬರಮಾಡಿಕೊಂಡು, ಬಳಿಕ ಅವರ ನಿವಾಸದಲ್ಲಿ ಅಭಿನಂದನಾ ಕಾರ್ಯಕ್ರಮ ಆಯೋಜಿಸಲಾಗಿದೆ.

Vishwa News 24

Recent Posts

ಸಿದ್ದರಾಮಯ್ಯ ಹಳೆಯ ಹುಲಿ, ಯಾವಾಗ ಯಾವ ಆಟ ಆಡುತ್ತಾರೋ ಗೊತ್ತಿಲ್ಲ : ಶೋಭಾ ಕರಂದ್ಲಾಜೆ – vishwanews24

ಸಿದ್ದರಾಮಯ್ಯ ರಾಜೀನಾಮೆ ಕೊಡುವವರೆಗೂ ಗ್ಯಾರಂಟಿಯಿಲ್ಲ : ಶೋಭಾ ಕರಂದ್ಲಾಜೆ ಬೆಂಗಳೂರು: ಸಿದ್ದರಾಮಯ್ಯ  ಹಳೆಯ ಹುಲಿ, ಯಾವಾಗ ಯಾವ ಆಟ ಆಡುತ್ತಾರೋ…

1 hour ago

ರಾಜ್ಯದಲ್ಲಿ ವರದಿಯಾಗಿದ್ದ ಶಂಕಿತ ಎಬೋಲಾ ಪ್ರಕರಣದ ರಿಪೋರ್ಟ್ ನೆಗೆಟಿವ್ : ದಿನೇಶ್ ಗುಂಡೂರಾವ್ ಸ್ಪಷ್ಟನೆ – vishwanews24

ರಾಜ್ಯದಲ್ಲಿ ವರದಿಯಾಗಿದ್ದ ಶಂಕಿತ ಎಬೋಲಾ ಪ್ರಕರಣದ ರಿಪೋರ್ಟ್ ನೆಗೆಟಿವ್ : ದಿನೇಶ್ ಗುಂಡೂರಾವ್ ಸ್ಪಷ್ಟನೆ ಬೆಂಗಳೂರು: ರಾಜ್ಯದಲ್ಲಿ ವರದಿಯಾಗಿದ್ದ ಶಂಕಿತ…

1 hour ago

ಕಾಪು ಶ್ರೀ ಹಳೇ ಮಾರಿಯಮ್ಮ ದೇವಿಗೆ ವಿಶೇಷ ಲಕ್ಷಪುಷ್ಪಾರ್ಚನೆ – vishwanews24

ಕಾಪು ಹಳೇ ಮಾರಿಯಮ್ಮ ದೇವಿಗೆ ಲಕ್ಷಪುಷ್ಪಾರ್ಚನೆ 135 ಕೆಜಿ ಕೆಂಪು ಕೇಪುಳ ಹೂ, 1,200ಕ್ಕೂ ಅಧಿಕ ಚೆಂಡು ಮಲ್ಲಿಗೆ ಸಮರ್ಪಣೆ…

2 hours ago

ಶಿರ್ವ: ಆತ್ಮಹತ್ಯೆಗೆ ಪ್ರಚೋದನೆ ; ಮೂವರ ವಿರುದ್ಧ ದೂರು ದಾಖಲು – vishwanews24

ಶಿರ್ವ: ಆತ್ಮಹತ್ಯೆಗೆ ಪ್ರಚೋದನೆ ; ಮೂವರ ವಿರುದ್ಧ ದೂರು ದಾಖಲು ಶಿರ್ವ: ಪತ್ನಿ, ಆಕೆಯ ಸಹೋದರಿ ಮತ್ತು ಪತ್ನಿಗೆ ಇನ್‌ಸ್ಟಾಗ್ರಾಮ್…

4 hours ago

ಹಳೆಯಂಗಡಿ: ನಿಂತಿದ್ದ ಬಸ್ಸಿಗೆ ಟಿಪ್ಪರ್ ಢಿಕ್ಕಿ; ನಾಲ್ವರು ವಿದ್ಯಾರ್ಥಿಗಳಿಗೆ ಗಾಯ – vishwanews24

ಹಳೆಯಂಗಡಿ: ನಿಂತಿದ್ದ ಬಸ್ಸಿಗೆ ಟಿಪ್ಪರ್ ಢಿಕ್ಕಿ; ನಾಲ್ವರು ವಿದ್ಯಾರ್ಥಿಗಳಿಗೆ ಗಾಯ ಹಳೆಯಂಗಡಿ: ಕಿನ್ನಿಗೋಳಿಯಿಂದ ಮಂಗಳೂರು ಕಡೆಗೆ ಸಂಚರಿಸುತ್ತಿದ್ದ ಸರ್ವಿಸ್ ಬಸ್ಸಿಗೆ…

4 hours ago

ಉಡುಪಿ: ಸ್ಪೀಡ್‌ ರಾಡಾರ್‌ ಕೆಮರಾ ಕಣ್ಣು ; ಒಂದು ವಾರದಲ್ಲಿ 47,709 ವಾಹನಗಳು ಸಂಚಾರ ನಿಯಮ ಉಲ್ಲಂಘನೆ  – vishwanews24

ಉಡುಪಿ: ಸ್ಪೀಡ್‌ ರಾಡಾರ್‌ ಕೆಮರಾ ಕಣ್ಣು ; ಒಂದು ವಾರದಲ್ಲಿ 47,709 ವಾಹನಗಳು ಸಂಚಾರ ನಿಯಮ ಉಲ್ಲಂಘನೆ  ಉಡುಪಿ :…

4 hours ago