Featured

ಭಾರತೀಯ ನೌಕಾಪಡೆ ದಿನ : ಗಣ್ಯರಿಂದ ಶುಭಾಶಯ – Vishwanews24

ಭಾರತೀಯ ನೌಕಾಪಡೆ ದಿನ : ಗಣ್ಯರಿಂದ ಶುಭಾಶಯ – Vishwanews24

ನವದೆಹಲಿ, : ಭಾರತೀಯ ನೌಕಾಪಡೆ ದಿನದ ಅಂಗವಾಗಿ ರಾಷ್ಟ್ರಪತಿ ರಾಮನಾಥ್‌ ಕೋವಿಂದ್‌ ಸೇರಿದಂತೆ ಪ್ರಧಾನಿ ನರೇಂದರರ ಮೋದಿ, ರಕ್ಷಣ ಸಚಿವ ರಾಜನಾಥ್‌ ಸಿಂಗ್‌ ಹಾಗೂ ಹಲವು ಮಂದಿ ಶುಭ ಕೋರಿದ್ದಾರೆ.

ಟ್ವೀಟ್‌ ಮೂಲಕ ಶುಭ ಕೋರಿದ ರಾಷ್ಟ್ರಪತಿ, “ನೌಕಾಪಡೆಯ ದಿನದಂದು ನಮ್ಮ ನೌಕಾಪಡೆಯ ಸಿಬ್ಬಂದಿಗೆ, ನಿವೃತ್ತ ಹಿರಿಯ ಸಿಬ್ಬಂದಿಗಳು ಸೇರಿದಂತೆ ಅವರ ಕುಟುಂಬಗಳಿಗೆ ನನ್ನ ಶುಭಾಶಯಗಳು. ನಮ್ಮ ಕಡಲ ಗಡಿನಾಡುಗಳನ್ನು ರಕ್ಷಿಸುವಲ್ಲಿ, ನಮ್ಮ ವ್ಯಾಪಾರ ಮಾರ್ಗಗಳನ್ನು ಭದ್ರಪಡಿಸುವಲ್ಲಿ ಹಾಗೂ ನಾಗರಿಕ ತುರ್ತು ಸಂದರ್ಭಗಳಲ್ಲಿ ಸಹಾಯವನ್ನು ನೀಡುವಲ್ಲಿ ನಿಮ್ಮ ಬದ್ಧತೆಯ ಬಗ್ಗೆ ರಾಷ್ಟ್ರ ಹೆಮ್ಮೆಪಡುತ್ತದೆ” ಎಂದಿದ್ದಾರೆ.

ಪ್ರಧಾನಿ ಮೋದಿ ಟ್ವೀಟ್‌ ಮಾಡಿದ್ದು, “ನಮ್ಮ ಎಲ್ಲಾ ಶೌರ್ಯ ನೌಕಾಪಡೆಯ ಸಿಬ್ಬಂದಿ ಹಾಗೂ ಅವರ ಕುಟುಂಗಳಿಗೆ ನೌಕಾಪಡೆ ದಿನದ ಶುಭಾಶಯಗಳು. ಭಾರತೀಯ ನೌಕಾಪಡೆಯು ನಮ್ಮ ಕರಾವಳಿಯನ್ನು ನಿರ್ಭಯವಾಗಿ ರಕ್ಷಿಸುತ್ತದೆ ಹಾಗೂ ಅಗತ್ಯವಾದ ಸಮಯದಲ್ಲಿ ಮಾನವೀಯ ನೆರವು ನೀಡುತ್ತದೆ” ಎಂದು ಹೇಳಿದ್ದಾರೆ.\

“ನೌಕಾಪಡೆ ದಿನದ ಈ ಸಂದರ್ಭ ನೌಕಾಪಡೆಯ ಸಿಬ್ಬಂದಿಗಳಿಗೆ ನನ್ನ ಶುಭಾಶಯಗಳು. ಅವರ ಶೌರ್ಯ, ಧೈರ್ಯ ಹಾಗೂ ವೃತ್ತಿಪರತೆಗೆ ನನ್ನ ವಂದನೆಗಳು” ಎಂದು ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ ತಿಳಿಸಿದ್ದಾರೆ.

ಮುಖ್ಯಮಂತ್ರಿ ಬಿ.ಎಸ್‌ಯಡಿಯೂರಪ್ಪ ಅವರು ಟ್ವೀಟ್‌ ಮಾಡಿದ್ದು, “ನಮ್ಮ ರಾಷ್ಟ್ರವನ್ನು ರಕ್ಷಿಸುವ ನಮ್ಮ ಕೆಚ್ಚೆದೆಯ ನೌಕಾಪಡೆಯ ಸಿಬ್ಬಂದಿಗಳಿಗೆ ಹಾಗೂ ಅವರ ಕುಟುಂಬದವರಿಗೆ ನನ್ನ ಶುಭಾಶಯಗಳು” ಎಂದು ತಿಳಿಸಿದ್ದಾರೆ.

ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಟ್ವೀಟ್‌ ಮಾಡಿದ್ದು, “ನೌಕಾಪಡೆ ಯೋಧರ ಸೇವೆ, ತ್ಯಾಗ ಮತ್ತು ಬಲಿದಾನದಿಂದಾಗಿ ಭಾರತ ಸುರಕ್ಷಿತ ಹಾಗೂ ಸುಭದ್ರವಾಗಿದೆ. ಭಾರತೀಯ ನೌಕಾದಳ ದಿನದ ಶುಭಾಶಯಗಳು” ಎಂದಿದ್ದಾರೆ.

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

4 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

4 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

4 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

4 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

4 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

4 days ago